“ಮಾ.4: ಜನವಿರೋಧಿ ನೀತಿ ವಿರುದ್ಧ ವಿಧಾನಸೌಧ ಚಲೋ’

ಅಕ್ಷರದಾಸೋಹ ನೌಕರರ 5ನೇ ಜಿಲ್ಲಾ ಸಮ್ಮೇಳನ

Team Udayavani, Feb 14, 2021, 4:05 AM IST

“ಮಾ.4: ಜನವಿರೋಧಿ ನೀತಿ ವಿರುದ್ಧ ವಿಧಾನಸೌಧ ಚಲೋ’

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಮಾ.4ರಂದು ವಿಧಾನಸೌಧ ಚಲೋ ಕಾರ್ಯಕ್ರಮ ವನ್ನು ನಡೆಸಲಾಗುವುದು. ಅಕ್ಷರದಾಸೋಹಕ್ಕೆ ಸರಕಾರ ಯಾವ ಸವಲತ್ತುಗಳನ್ನೂ ಒದಗಿಸುತ್ತಿಲ್ಲ ದೇಶದ ಜನರಲ್ಲಿ ರಾಮಮಂದಿರದ ಕನಸು ಬಿತ್ತಲಾಗುತ್ತಿದೆ. ಆದರೆ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಅಕ್ಷರದಾಸೋಹ ಮಕ್ಕಳ
ಭವಿಷ್ಯದ ಯೋಜನೆಯಾಗಿದ್ದು, ಇದನ್ನು ಖಾಯಂಗೊಳಿಸಬೇಕು ಎಂದು ಸಿಐಟಿಯು ರಾಜ್ಯ ಸಮಿತಿ ಅಧ್ಯಕ್ಷೆ ಹಾಗೂ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ಗೌರವಾಧ್ಯಕ್ಷೆ ವರಲಕ್ಷ್ಮೀ ಹೇಳಿದರು.

ಸಿಐಟಿಯು ವತಿಯಿಂದ ಬನ್ನಂಜೆಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಶನಿವಾರ ನಡೆದ ಅಕ್ಷರದಾಸೋಹ ನೌಕರರ 5ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ಅಕ್ಷರದಾಸೋಹ ಯೋಜನೆಗೆ ಯಾವುದೇ ಸವಲತ್ತು ಕಲ್ಪಿಸಿಲ್ಲ. ದೇಶ
ದಲ್ಲಿಂದು ಸಾಮಾಜಿಕ ಅಸಮಾನತೆ, ಆದಾಯದ ತಾರತಮ್ಯದಿಂದ ಬಡತನ ಇದೆ. ಅಕ್ಷರದಾಸೋಹ ಯೋಜನೆಗೆ 2020- 21ನೇ ಸಾಲಿನಲ್ಲಿ 12,500 ಕೋ.ರೂ. ವೆಚ್ಚವಾಗಿದೆ. ಈ ಬಾರಿ ಮೊತ್ತವನ್ನು ಹೆಚ್ಚಿಸಬೇಕಿತ್ತು. ಆದರೆ 1,400 ಕೋ.ರೂ.ಗಳನ್ನು ಹಿಂಪಡೆದಿದ್ದಾರೆ. ಕಲ್ಯಾಣ ರಾಜ್ಯದ ಕಲ್ಪನೆ ಕೇವಲ ಭರವಸೆಗಷ್ಟೇ ಸೀಮಿತವಾಗುತ್ತಿದೆ ಎಂದರು. ದೇಶದಲ್ಲಿ 1.77 ಕೋಟಿ ಮಕ್ಕಳು ಹಾಗೂ ರಾಜ್ಯದಲ್ಲಿ 50ಲಕ್ಷ ಮಕ್ಕಳು ಅಕ್ಷರದಾಸೋಹ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿ ದ್ದಾರೆ. 26 ಲಕ್ಷ ಮಂದಿ ನೌಕರರಿದ್ದು, ಅವರಿಗೆ 2,600 ರೂ.ವೇತನ ನೀಡ ಲಾಗುತ್ತಿದೆ. ಆದರೆ 2011ರಿಂದಲೂ ಈ ವೇತನ ಹೆಚ್ಚಳವಾಗದಿರುವುದು ಮಾತ್ರ ವಿಪರ್ಯಾಸ ಎಂದರು.

ಜಿಲ್ಲಾ ಸಿಐಟಿಯು ಉಪಾಧ್ಯಕ್ಷ ಪಿ.ವಿಶ್ವನಾಥ ರೈ ಮಾತನಾಡಿ, ಸರಕಾರಕ್ಕೆ ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲದಂತಾಗಿದೆ. ಪ್ರತಿಯೊಬ್ಬರೂ ಫ‌ಲಿತಾಂಶ ಸಿಗುವ ಹೋರಾಟಕ್ಕೆ ಮುಂದಾಗಬೇಕು. ಅಕ್ಷರದಾಸೋಹ ನೌಕರರಿಗೆ ಕನಿಷ್ಠ 21 ಸಾವಿರ ರೂ.ವೇತನ ನೀಡಬೇಕು ಎಂದು ಆಗ್ರಹಿಸಿದರು. ಈ ಯೋಜನೆ ಕೇಂದ್ರ ಸರಕಾರದ್ದೇ ಆದರೂ ಕೂಡ ಕೇಂದ್ರ ಸರಕಾರಿ ಅಕ್ಷರದಾಸೋಹ ನೌಕರರಿಗೆ 10 ವರ್ಷಗಳಿಂದಲೂ 10 ಪೈಸೆಯನ್ನೂ ಕೂಡ ಹೆಚ್ಚಳ ಮಾಡಲಿಲ್ಲ. ಬದಲಿಗೆ ಅನುದಾನವನ್ನು ಕಡಿತ ಮಾಡಿ ಈ ಯೋಜನೆಯನ್ನು ಕೇಂದ್ರೀಕೃತ ಅಡುಗೆ ಕೇಂದ್ರಗಳನ್ನಾಗಿ ಮಾಡಲು ಶಿಫಾರಸು ಮಾಡಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ, ಗೌರವಾಧ್ಯಕ್ಷ ಯು.ದಾಸ ಭಂಡಾರಿ, ಜಿಲ್ಲಾಧ್ಯಕ್ಷೆ ಜಯಶ್ರೀ ಪಡುವರಿ, ಕಾರ್ಯಾಧ್ಯಕ್ಷೆ ನಾಗರತ್ನಾ, ಪ್ರಧಾನ ಕಾರ್ಯದರ್ಶಿ ಸುನಂದಾ, ಕಾರ್ಕಳ ತಾಲೂಕು ಅಧ್ಯಕ್ಷೆ ಬೇಬಿ ಭಂಡಾರಿ, ಕಾರ್ಯದರ್ಶಿ ಜ್ಯೋತಿ, ಕುಂದಾಪುರ ತಾಲೂಕು ಅಧ್ಯಕ್ಷೆ ಸಿಂಗಾರಿ, ಕಾರ್ಯದರ್ಶಿ ಲತಾ, ಸಿಐಟಿಯುನ ಬಾಲಕೃಷ್ಣ ಶೆಟ್ಟಿ, ಕವಿರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.