ವಿಜಯಪುರ ರೈಲು ವೇಳಾಪಟ್ಟಿ ಪರಿಷ್ಕರಣೆ,ವಿಸ್ತರಣೆ ಸಹಿ ಅಭಿಯಾನಕ್ಕೆ ಬೇಕು ಸಾರ್ವಜನಿಕ ಸ್ಪಂದನೆ
Team Udayavani, Nov 3, 2023, 12:35 AM IST
ಮಂಗಳೂರು: ವಿಜಯಪುರ-ಮಂಗಳೂರು ಜಂಕ್ಷನ್ ನಡುವೆ 2019ರಲ್ಲಿ ಆರಂಭಿಸಲಾಗಿರುವ ನಂ. 07377 ಮತ್ತು ನಂ. 07378 ವಿಜಯಪುರ-ಮಂಗಳೂರು ಜಂಕ್ಷನ್-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಹಾಗೂ ರೈಲನ್ನು ಮಂಗಳೂರು ಸೆಂಟ್ರಲ್ ವರೆಗೆ ವಿಸ್ತರಣೆಗೆ ಆಗ್ರಹಿಸಿ ಅ. 26ರಂದು ಆರಂಭವಾಗಿರುವ ಸಹಿ ಅಭಿಯಾನಕ್ಕೆ ಸಾರ್ವಜನಿಕರಿಂದ ಇನ್ನಷ್ಟು ಉತ್ತಮ ಸ್ಪಂದನೆ ವ್ಯಕ್ತವಾಗುವ ಅಗತ್ಯವಿದೆ.
ಪ್ರಯಾಣಿಕರ ಬೇಡಿಕೆಯನ್ನು ನೈಋತ್ಯ ರೈಲ್ವೇ ಹಾಗೂ ದಕ್ಷಿಣ ರೈಲ್ವೇ ಅಧಿಕಾರಿಗಳಿಗೆ ಮನವರಿಕೆ ಮಾಡಲು ದಕ್ಷಿಣ ಕನ್ನಡ ರೈಲು ಬಳಕೆದಾರರ ಸಮೂಹ ಸಹಿ ಅಭಿಯಾನ ನಡೆಸುತ್ತಿದ್ದು, ಈಗಾಗಲೇ 520 ಮಂದಿ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ನ. 15ರ ವರೆಗೆ ನಡೆಯಲಿರುವ ಅಭಿಯಾನದಲ್ಲಿ ಇನ್ನಷ್ಟು ಮಂದಿ ಪಾಲ್ಗೊಳ್ಳಬೇಕಿದೆ. ಆಗ ಮಾತ್ರ ಅಭಿಯಾನಕ್ಕೆ ಯಶಸ್ಸು ದೊರೆಯಲಿದ್ದು, ಅಧಿಕಾರಿಗಳೂ ಜನಾಭಿಪ್ರಾಯವನ್ನು ಪರಿಗಣಿಸಿ ಸ್ಪಂದಿಸುವ ಸಾಧ್ಯತೆಯಿದೆ. ಆದ್ದರಿಂದ ರೈಲ್ವೇ ಪ್ರಯಾಣಿಕರು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಭಾಗಿಯಾಗಿ, ಅಭಿಯಾನವನ್ನು ಬೆಂಬಲಿಸಬೇಕು ಎಂದು ದಕ್ಷಿಣ ಕನ್ನಡ ರೈಲು ಬಳಕೆದಾರರ ಸಮೂಹ ಮನವಿ ಮಾಡಿದೆ.
ಬೇಡಿಕೆಯ ಪರಿಷ್ಕತ ವೇಳಾಪಟ್ಟಿ
ವಿಜಯಪುರದಿಂದ ಸಂಜೆ 4 ಗಂಟೆಗೆ ಹೊರಟು ರಾತ್ರಿ 9.30ಕ್ಕೆ ಹುಬ್ಬಳ್ಳಿ, ಬೆಳಗ್ಗೆ 9.30ಕ್ಕೆ ಮಂಗಳೂರು ಸೆಂಟ್ರಲ್ ತಲುಪುವುದು. ಸಂಜೆ 5ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಗ್ಗೆ 5ಕ್ಕೆ ಹುಬ್ಬಳ್ಳಿ, 10.30ಕ್ಕೆ ವಿಜಯಪುರಕ್ಕೆ ತಲುಪುವುದು. ವೇಳಾಪಟ್ಟಿಯ ಪರಿಷ್ಕರಣೆ ಜತೆಗೆ ಮಂಗಳೂರು ಸೆಂಟ್ರಲ್ ತನಕ ವಿಸ್ತರಿಸಲು ರೈಲ್ವೇ ಇಲಾಖೆ ಮನಸ್ಸು ಮಾಡಬೇಕು ಎನ್ನುವುದು ಸಹಿ ಅಭಿಯಾನದ ಉದ್ದೇಶ.
ಪ್ರತಿದಿನ ಸಾವಿರಾರು ಜನರನ್ನು ಕರಾವಳಿ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜತೆ ಸಂಪರ್ಕಿಸುತ್ತದೆ. ಆದರೆ ಈ ರೈಲಿನ ವೇಳಾಪಟ್ಟಿ ಪ್ರಯಾಣಿಕರಿಗೆ ಅನುಕೂಲವಲ್ಲದ ಕಾರಣ ವೇಳಾಪಟ್ಟಿಯನ್ನು ಪರಿಷ್ಕರಿಸಬೇಕು ಹಾಗೂ ಮಂಗಳೂರಿನ ಮುಖ್ಯ ರೈಲು ನಿಲ್ದಾಣವಾದ ಮಂಗಳೂರು ಸೆಂಟ್ರಲ್ ತನಕ ಓಡಿಸಬೇಕೆಂಬ ಎನ್ನುವುದು ಬಳಕೆದಾರರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.