ಗ್ರಾಮ ವಾಸ್ತವ್ಯ: ಬಿಎಸ್‌ವೈ-ಎಚ್ಡಿಕೆ ವಾಗ್ಯುದ್ಧ
Team Udayavani, Jun 25, 2019, 3:10 AM IST
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯ ಕುರಿತು ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ “ಗ್ರಾಮವಾಸ್ತವ್ಯ ಶೂನ್ಯ ಸಾಧನೆ’ ಪುಸ್ತಕ ಬಿಡುಗಡೆ ಮೂಲಕ ಕುಮಾರಸ್ವಾಮಿ ಅವರ ಕಾಲೆಳೆದಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, “ಯಡಿಯೂರಪ್ಪ ಅವರು ವಾಸ್ತವ ಅರಿತು ಮಾತನಾಡಬೇಕು. ಗ್ರಾಮ ವಾಸ್ತವ್ಯ ಪ್ರಚಾರದ ಗಿಮಿಕ್ ಅಲ್ಲ’ ಎನ್ನುವ ಮೂಲಕ ಸರ್ಕಾರದ ಹಲವು ಕಾರ್ಯಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ.
ಶೂನ್ಯ ಸಾಧನೆ ಕಿರುಹೊತ್ತಿಗೆ ಹೊರತಂದ ಬಿಜೆಪಿ
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಹಿಂದೆ ಕೈಗೊಂಡಿದ್ದ 42 ಹಳ್ಳಿಗಳ ಗ್ರಾಮ ವಾಸ್ತವ್ಯದ ಸ್ಥಿತಿಗತಿ ಅಧ್ಯಯನ ಮಾಡಿ ರಾಜ್ಯ ಬಿಜೆಪಿ ಹೊರತಂದಿರುವ “ಅಂದು ಗ್ರಾಮವಾಸ್ತವ್ಯ- ಶೂನ್ಯ ಸಾಧನೆ, ಈವರೆಗೆ ಸ್ಟಾರ್ ಹೋಟೆಲ್‌ನಿಂದ ಆಡಳಿತ ಖಜಾನೆ ಲೂಟಿ’ ಕಿರು ಹೊತ್ತಿಗೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ಡ್ರಾಮಾದ ಸಲುವಾಗಿ ಕೋಟ್ಯಂತರ ರೂ. ಖಜಾನೆ ಹಣ ಪೋಲು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚಂಡರಕಿ ಗ್ರಾಮದಲ್ಲಿನ ವಾಸ್ತವ್ಯಕ್ಕೆ 1ಕೋಟಿ ರೂ. ವೆಚ್ಚ ಮಾಡಿರುವುದು ಮುಖ್ಯಮಂತ್ರಿಗಳ ಐಷಾರಾಮಿ ಬದುಕಿನ ಚಿತ್ರಣ ಗ್ರಾಮದಲ್ಲೂ ಅನಾವರಣಗೊಳಿಸಿದೆ. ಜೂ.26ರಂದು ರಾಯಚೂರು ಜಿಲ್ಲೆಯ ಕರೇಗುಡ್ಡ ಗ್ರಾಮದಲ್ಲಿ ವಾಸ್ತವ್ಯಕ್ಕೆ ತಯಾರಿ ನಡೆದಿದ್ದು ಇಲ್ಲೂ ಕೂಡ ಕನಿಷ್ಠ 1 ಕೋಟಿ ರೂ.ಗಳನ್ನು ವೆಚ್ಚ ಮಾಡುವ ತಯಾರಿ ನಡೆಯುತ್ತಿದೆ ಎಂದು ದೂರಿದರು.
ಸರಳತೆ ಲವಲೇಶವೂ ಇಲ್ಲದ ಮುಖ್ಯಮಂತ್ರಿಯವರು ಮಾತೆತ್ತಿದರೆ ರೈತರ ಸಮಸ್ಯೆಗಳಿಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಪಂಚತಾರಾ ಹೋಟೆಲ್‌ನಿಂದಲೇ ಆಡಳಿತ ಎನ್ನುವ ಹೊಸ ಪರಿಕಲ್ಪನೆಯನ್ನು ರಾಜ್ಯಕ್ಕೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್, ಮಾಜಿ ಸಚಿವ ಡಾ ಎ.ಬಿ. ಮಾಲಕರೆಡ್ಡಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ವೈ.ವಿಜಯೇಂದ್ರ, ತಮ್ಮೇಶ ಗೌಡ, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎಸ್. ಶಾಂತಾರಾಮ್, ರಾಜ್ಯ ಬಿಜೆಪಿ ಸಹವಕ್ತಾರ ಎ.ಎಚ್. ಆನಂದ ಉಪಸ್ಥಿತರಿದ್ದರು.
ಸಮಸ್ಯೆ ಹಾಗೆ ಇದೆ!: 2006-2007ರ ಅವಧಿಯಲ್ಲಿ ಕುಮಾರಸ್ವಾಮಿಯವರು 42ಗ್ರಾಮಗಳಿಗೆ ಭೇಟಿ ನೀಡಿ ಅನೇಕ ಭರವಸೆ ನೀಡಿ ಬಂದಿದ್ದರು. ಅವುಗಳಲ್ಲಿ ಬಹುತೇಕ ಭರವಸೆಗಳು ಈಡೇರಿಲ್ಲ. ಎನ್.ರವಿಕುಮಾರ್ ಅವರು ವಿವಿಧ ಜಿಲ್ಲೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಸೇರಿ ಸಮಾಲೋಚಿಸಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಈ ದೇಶದ ಇತಿಹಾಸದಲ್ಲಿ ಯಾವುದಾದರೂ ಮುಖ್ಯಮಂತ್ರಿ ಪಂಚತಾರ ಹೋಟೆಲ್‌ನಲ್ಲಿ ವಾಸವಿದ್ದು, ಜನರ ಸಮಸ್ಯೆ ಬಗೆಹರಿಸಿದ ನಿದರ್ಶನ ಇದೆಯೇ? ಸಿಎಂ ನಿವಾಸ ಕೃಷ್ಣಾದಲ್ಲೇ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಇನ್ನು ಪಂಚತಾರ ಹೋಟೆಲ್‌ನಲ್ಲಿ ಸಿಗುವುದೇ?
-ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ
ಮುಖ್ಯಮಂತ್ರಿಗೆ ಯಡಿಯೂರಪ್ಪ ದಶಪ್ರಶ್ನೆ
ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಟೀಕಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.
* 13 ತಿಂಗಳ ತಾಜ್ ವೆಸ್ಟೆಂಡ್ ಸ್ಟಾರ್ ಹೋಟೆಲ್‌ನಲ್ಲಿ ವಿಲಾಸಿ ಆಡಳಿತ ನಡೆಸುವಾಗಲೇ 1500 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ನಿಮ್ಮ ಉತ್ತರವೇನು?
* ರೈತರ 48 ಸಾವಿರ ಕೋಟಿ ರೂ. ಸಾಲಮನ್ನಾ 24 ಗಂಟೆಗಳಲ್ಲಿ ಮಾಡುತ್ತೇನೆಂದು ಹೇಳಿದ್ದ ತಾವು 13 ತಿಂಗಳಾದರೂ ರೈತರ ಸಾಲಮನ್ನಾ ಮಾಡಿಲ್ಲ. ರೈತರಿಗೆ ಹೊಸ ಸಾಲ ನೀಡುತ್ತಿಲ್ಲ. ಋಣಮುಕ್ತ ಪತ್ರ ಕೋಡುತ್ತೇನೆಂದು ಭಾಷಣ ಬಿಗಿಯುತ್ತೀರಿ? ಕಣ್ಣೀರು ಸುರಿಸುತ್ತೀರಿ. ಇಂತಹ ಡ್ರಾಮಗಳನ್ನು ಜನರು ನಂಬಬೇಕೆ?
* ರಾಜ್ಯಾದ್ಯಂತ ಬರದ ಛಾಯೆಯಿದೆ ಜನರಿಗೆ ಕುಡಿಯಲು ನೀರು ಸಿಗುತ್ತಿಲ್ಲ. ದನಕರುಗಳಿಗೆ, ಪಶು ಪಕ್ಷಿಗಳಿಗೆ ಮೇವು, ನೀರಿಲ್ಲದ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ ಜಿಲ್ಲೆಗಳ ಜನ ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ಇಂತಹ ಸಮಯದಲ್ಲಿ ಗ್ರಾಮ ವಾಸ್ತವ್ಯ ನಾಟಕ ಸರಿಯೇ?
* ಐಎಂಎ ಹಗರಣದಲ್ಲಿ 6 ಸಾವಿರ ಕೋಟಿ ಅಲ್ಪಸಂಖ್ಯಾತ ಬಡ ಜನರ ಹಣದೊಂದಿಗೆ ಪರಾರಿಯಾದ ಮನ್ಸೂರ್ ಅಹ್ಮದ್ ಜತೆ ಬಿರಿಯಾನಿ ಊಟ ಮಾಡಿದ ನೀವು ಈ ಹಗರಣವನ್ನು ಸಿಬಿಐಗೆ ಕೊಡಬೇಕೆಂದು ಶೋಷಣೆಗೊಳಗಾಗಿರುವ ಅಲ್ಪಸಂಖ್ಯಾತರು ಮತ್ತು ವಿಪಕ್ಷವೂ ಬೇಡಿಕೆ ಮಂಡಿಸಿದ್ದರೂ ಏಕೆ ಮೌನವಹಿಸಿದ್ದೀರಿ? ನಿಮ್ಮ ಶಾಸಕರಾದ ರೋಷನ್ ಬೇಗ್ ಮತ್ತು ಜಮೀರ್ ಅಹ್ಮದ್ ಅವರ ವಿರುದ್ಧ ಕ್ರಮ ಜರುಗಿಸುವ ಧೈರ್ಯವಿದೆಯೇ?
* ರಾಜ್ಯದಲ್ಲಿ ಸಾವಿರಾರು ಶಾಲಾ ಕಾಲೇಜುಗಳ ಸುಣ್ಣಬಣ್ಣ ಶೌಚಾಲಯಗಳಿಗೆ ಹಣವಿಲ್ಲ. ವಿಶ್ವವಿದ್ಯಾಲಯಗಳಿಗೆ ಹಣಕಾಸಿನ ನೆರವು ನೀಡುತ್ತಿಲ್ಲ. 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 4 ತಿಂಗಳಿಂದ ಶಿಕ್ಷಕರಿಗೆ, ವೈದ್ಯರಿಗೆ ವೇತನ ಕೊಡುತ್ತಿಲ್ಲ. ಮಕ್ಕಳಿಗೆ ಸಮವಸ್ತ್ರ, ಸೈಕಲ್, ಶೂ, ಸಾಕ್ಸ್ ಸಿಕ್ಕಿಲ್ಲ. ಈಗ ಶಾಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂಬ ಜ್ಞಾನೋದಯ ತಾಜ್ ವೆಸ್ಟೆಂಡ್ ಸ್ಟಾರ್ ಹೋಟೆಲ್‌ನಲ್ಲಿ ಆಯಿತೇ?
* ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪೆನಿಗೆ 3667 ಎಕರೆ ಜಮೀನನ್ನು 1.22 ಲಕ್ಷ ರೂ.ಗೆ 1 ಎಕರೆಯಂತೆ ಅತಿ ಕನಿಷ್ಠ ಬೆಲೆಗೆ ಮಾರಾಟ ಮಾಡಲು ತಾವು ಪಡೆದಿರುವ ಕಿಕ್‌ಬ್ಯಾಕ್ ಎಷ್ಟು?
* ದೇಶದಲ್ಲಿ ವಿಜ್ಞಾನ, ತಂತ್ರಜ್ಞಾನ ಪ್ರಗತಿಯಾಗಿರುವ ಈ ದಿನಗಳಲ್ಲಿ ಗ್ರಾಮ ವಾಸ್ತವ್ಯ ಮಾಡಿಯೇ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಗ್ರಾಮ-ಡ್ರಾಮಾ ಏಕೆ? ಇದು ಪ್ರಚಾರದ ಗಿಮಿಕ್ ಅಲ್ಲವೇ? ಹಿಂದಿನ ಗ್ರಾಮ ವಾಸ್ತವ್ಯದ ಸಾಧನೆಯ ಶ್ವೇತಪತ್ರ ನೀಡುವಿರಾ?
* ಮುಖ್ಯಮಂತ್ರಿಗಳೇ ದಿಕ್ಕು ತಪ್ಪಿದ ಆಡಳಿತ ಹಾಗೂ ದಿನನಿತ್ಯ ನಿಮ್ಮ ಮೈತ್ರಿ ಪಕ್ಷಗಳ ಬೀದಿ ಜಗಳದಿಂದ ಕಂಗೆಟ್ಟಿರುವ ರಾಜ್ಯ ಜನರಿಗೆ ಮುಕ್ತಿ ಯಾವಾಗ?
* ನಿಮ್ಮ ಕನಸಿನ ಬಜೆಟ್ ಕೆಲವೇ ಬೆರಳೆಣಿಕೆಯ ಜಿಲ್ಲೆಗಳಿಗೆ ಸೀಮಿತವಾಗಿ ಈಗ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡುವೆ ಎಂದು ಗ್ರಾಮ ವಾಸ್ತವ್ಯ ಮಾಡುವ ನೀವು ಬಜೆಟ್‌ನಲ್ಲಿ ಎಷ್ಟು ಹಣ ಇಟ್ಟಿದ್ದೀರಿ? ಸರ್ಕಾರದಲ್ಲಿ ನಿಮ್ಮ ಘೋಷಣೆಗಳನ್ನು ಪೂರ್ತಿ ಮಾಡಲು ಹಣ ಎಲ್ಲಿಂದ ತರುತ್ತೀರಿ?
* ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನಾಯಕರ ನಡುವಿನ ಬೀದಿ ಜಗಳವನ್ನು ಟಿವಿ, ಪತ್ರಿಕೆಗಳಲ್ಲಿ ನೋಡಿ ಜನರು ಶಾಪ ಹಾಕುತ್ತಿದ್ದಾರೆ. ಸರ್ಕಾರದ ಇಲಾಖೆಗಳಲ್ಲಿ ಹಗಲು ಲೂಟಿ ನಿತ್ಯ ನಡೆಯುತ್ತಿದೆ. ಆದರೂ ಸಿಎಂ ಅವರೇ ರಾಜ್ಯದ ಅಭಿವೃದ್ಧಿ ಮಾಡುತ್ತೇನೆಂದು ಭಾಷಣ ಬಿಗಿಯುತ್ತೀರಿ ಇಂತಹ ಭ್ರಮೆಗೆ ಮುಕ್ತಿ ಯಾವಾಗ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.