ಅಭಿವೃದ್ಧಿ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ : ವಿನಯ್ ಶ್ಯಾಮ್ ವಾಗ್ದಾಳಿ


Team Udayavani, Feb 23, 2022, 8:23 PM IST

ಅಭಿವೃದ್ಧಿ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ : ವಿನಯ್ ಶ್ಯಾಮ್ ವಾಗ್ದಾಳಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ದಿಗೊಳಿಸುವುದಾಗಿ ಹೇಳಿ ಕೇವಲ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಜನರನ್ನು ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ತೀವ್ರ ವಾಗ್ದಾಳಿ ನಡೆಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಅವರು ಸಿಲಿಕಾನ್ ಸಿಟಿವೆಂದು ಖ್ಯಾತಿ ಹೊಂದಿರುವ ಬೆಂಗಳೂರು ಮತ್ತು ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಚಿಕ್ಕಬಳ್ಳಾಪುರ ನಗರವನ್ನು ಮಾದರಿಯಾಗಿ ಅಭಿವೃದ್ದಿಗೊಳಿಸುವುದಾಗಿ ಆರೋಗ್ಯ ಸಚಿವರು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಹೊರತು ಅಭಿವೃಧ್ಧಿ ಶೂನ್ಯವಾಗಿದೆ ಟೀಕಿಸಿದ ಅವರು ಚಿಕ್ಕಬಳ್ಳಾಪುರ ವಿಧಾನಸಸಭಾ ಕ್ಷೇತ್ರದಲ್ಲಿ ಕೇವಲ ವೈದ್ಯಕೀಯ ಶಿಕ್ಷಣ ಕಾಲೇಜು ಮಂಜೂರು ಮಾಡಿದರೆ ಎಲ್ಲವೂ ಅಭಿವೃದ್ದಿಯಾಗಿದೆ ಎಂಬ ಅರ್ಥವಲ್ಲ ಕಾಲೇಜಿನ ಜೊತೆಗೆ ಕ್ಷೇತ್ರದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಚಿವರು ಕಾರ್ಯನಿರ್ವಹಿಸಬೇಕೆಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯ ಪ್ರಭಾವದಿಂದ ರೈತರು ಮತ್ತು ಜನಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಮತ್ತೊಂದಡೆ ಕೊರೊನಾ ಸೋಂಕಿನ ಪ್ರಭಾವದಿಂದ ಈಗಲೂ ಸಹ ಜನ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ ಇದರಿಂದ ರೈತರ ಗಾಯದ ಮೇಲೆ ಬರೆ ಎಳೆಯುವ ಕೆಲಸವನ್ನು ಸರ್ಕಾರ ಮಾಡಿದೆ ಎಂದರಲ್ಲದೆ ಕೂಡಲೇ ರಾಗಿ ಮತ್ತು ಜೋಳ ಖರೀದಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುತ್ತಿದ್ದೇನೆ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇನೆ ಕ್ಷೇತ್ರದಲ್ಲಿರುವ ಎಲ್ಲಾ ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಜೊತೆಗೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಾಗಿದೆ ತಮ್ಮ ತಾಯಿಯ ಹೆಸರಿನಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸುವ ಕನಸನ್ನು ಹೊಂದಿದ್ದೇನೆ ಅದನು ನನಸು ಮಾಡುವ ಮೂಲಕ ಕ್ಷೇತ್ರದ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕೆಲಸವನ್ನು ಮಾಡುವುದಾಗಿ ವಾಗ್ದಾನ ಮಾಡಿದರು.

ಇದನ್ನೂ ಓದಿ :  ಮಾರ್ಚ್ 4 ರಂದು ಮಧ್ಯಾಹ್ನ 12.30 ಕ್ಕೆ ಚೊಚ್ಚಲ ಬಜೆಟ್ ಮಂಡಿಸಲಿರುವ ಸಿಎಂ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ಧೋರಣೆಗಳನ್ನು ಅನುಸರಿಸುತ್ತಿವೆ ಇದರ ಕುರಿತು ಜನಜಾಗೃತಿ ಅಭಿಯಾನವನ್ನು ಪ್ರತಿಯೊಂದು ಪಂಚಾಯಿತಿ ಮಟ್ಟದಲ್ಲಿ ನಡೆಸಲಾಗುತ್ತದೆ ಮುಂದಿನ 2023 ರಂದು ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತವನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಪಕ್ಷ ಸಂಘಟನೆ ಮಾಡಿ ಪ್ರತಿಯೊಂದು ಹಳ್ಳಿಯಲ್ಲೂ ಸಹ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ನಗರಸಭೆಯ ಅಧ್ಯಕ್ಷ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ನಗರಸಭಾ ಸದಸ್ಯರನ್ನು ರಾಜಕೀಯ ಒತ್ತಡಗಳಿಗೆ ಜಿಲ್ಲಾಧಿಕಾರಿಗಳು ತೀರ್ಪು ನೀಡಿದ್ದಾರೆ ಅದರ ವಿರುಧ್ಧ ರಾಜ್ಯ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿ ವಿಪ್ ಉಲಂಘಿಸಿ ಮತದಾನ ಮಾಡಿದ ನಗರಸಭಾ ಸದಸ್ಯರನ್ನು ಸದಸ್ಯತ್ವನ್ನು ಅನರ್ಹಗೊಳಿಸಲು ಹೋರಾಟವನ್ನು ಮುಂದುವರೆಸಲಾಗುತ್ತದೆ ಎಂದ ಅವರು ಹೊಸಹುಡ್ಯ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳಿಗೆ ಪರಿಹರಿಸುವ ಬದಲಿಗೆ ಸಚಿವ ಡಾ.ಕೆ.ಸುಧಾಕರ್ ಅವರು ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮವಾಗಿ ಪರಿವರ್ತಿಸಿಕೊಂಡು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಹಾಡುಗಳನ್ನು ಹಾಡಿ ಭಜನೆ ಮಾಡಿದ್ದಾರೆ ಅದು ಹೊರತುಪಡಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಕಲ್ಪಿಸುವ ಕೆಲಸ ಆಗಿಲ್ಲ ಎಂದು ದೂರಿದರು.

ಈ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವಕೀಲ ನಾರಾಯಣಸ್ವಾಮಿ, ಚಂದ್ರಶೇಖರ್,ರಘು,ರಾಮರೆಡ್ಡಿರವರು,ಮುನಿವೆಂಕಟಸ್ವಾಮಿ,ಗಂಗಾಧರ್,
ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.