ಕುತೂಹಲ ಮೂಡಿಸಿದ ವಿಶ್ವನಾಥ್-ಪ್ರಸಾದ್ ಭೇಟಿ
Team Udayavani, May 9, 2019, 3:06 AM IST
ಬೆಂಗಳೂರು/ಮೈಸೂರು: ಪ್ರಸ್ತುತ ರಾಜಕೀಯವಾಗಿ ಸಿದ್ದರಾಮಯ್ಯ ಅವರ ಸಮಾನ ವಿರೋಧಿಗಳಾದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹಾಗೂ ಬಿಜೆಪಿಯ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಭೇಟಿಯಾಗಿ, ಮಾತುಕತೆ ನಡೆಸಿದ್ದು, ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಒಂದು ಕಾಲಕ್ಕೆ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿದ್ದ ಈ ಇಬ್ಬರೂ ನಾಯಕರು ಈಗ ಸಿದ್ದರಾಮಯ್ಯನವರ ಪ್ರಬಲ ವಿರೋಧಿಗಳಾಗಿದ್ದಾರೆ. ಇದೀಗ ರಾಜಕೀಯ ಪಕ್ಷಗಳ ನಾಯಕರು ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಬರಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದರೆ,
ಸಿದ್ದರಾಮಯ್ಯ ಆಪ್ತ ಬಳಗದ ಕಾಂಗ್ರೆಸ್ ಶಾಸಕರು ಫಲಿತಾಂಶಕ್ಕೂ ಮುನ್ನವೇ ಸಿದ್ದರಾಮಯ್ಯ ಮತ್ತೂಮ್ಮೆ ಮುಖ್ಯಮಂತ್ರಿಯಾಗಬೇಕು ಎಂಬ ಕೂಗೆಬ್ಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬೇರೆ, ಬೇರೆ ಪಕ್ಷಗಳಲ್ಲಿದ್ದರೂ ಸಿದ್ದರಾಮಯ್ಯ ಅವರ ಸಮಾನ ವಿರೋಧಿಗಳಾಗಿರುವ ಈ ಇಬ್ಬರೂ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಸಹಜ ಭೇಟಿ, ಉಭಯ ಕುಶಲೋಪರಿ ಚರ್ಚೆ: ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀನಿವಾಸಪ್ರಸಾದ್, “ನಾನು ಹಾಗೂ ವಿಶ್ವನಾಥ್ ಅವರು 45 ವರ್ಷದಿಂದ ಸ್ನೇಹಿತರು. ರಾಜಕೀಯದಲ್ಲಿ ಬೇರೆ ಇದ್ದರೂ ನಮ್ಮ ನಡುವಿನ ವಿಶ್ವಾಸಕ್ಕೆ ಧಕ್ಕೆಯಾಗಿಲ್ಲ. ಚುನಾವಣಾ ಒತ್ತಡದಿಂದಾಗಿ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸ್ನೇಹಮಯವಾಗಿ ಭೇಟಿಯಾಗಿದ್ದೇವೆ.
ಸಹಜವಾಗಿ ರಾಜಕೀಯ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ’ ಎಂದರು.
ಈ ಮಧ್ಯೆ, ಬೆಂಗಳೂರಿನಲ್ಲಿ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಎಚ್.ವಿಶ್ವನಾಥ್, ನಾವಿಬ್ಬರೂ ಸ್ನೇಹಿತರು. ಉಭಯ ಕುಶಲೋಪರಿ ವಿಚಾರಿಸಲು ಭೇಟಿ ಮಾಡಿದ್ದೆವು. ಸಹಜವಾಗಿ ರಾಜಕೀಯವೂ ಚರ್ಚೆಯಾಯಿತು. ಚಾಮರಾಜನಗರದಲ್ಲಿ ಅವರು ಗೆಲ್ಲುತ್ತೇನೆ ಎಂದು ಹೇಳಿದ್ದಾರೆ, ಮತದಾರರ ಮನದಾಳ ಯಾರಿಗೆ ಗೊತ್ತು ಎಂದರು.
ಹಿಂದಿನ ಚುನಾವಣೆಯಲ್ಲಿ ನಾವು ಒಂದಾಗಿದ್ದೆವು. ಸಿದ್ದರಾಮಯ್ಯ ಅವರನ್ನು ಸೋಲಿಸಲು ಪ್ರಯತ್ನಿಸಿದ್ದೆವು. ಅದೆಲ್ಲಾ ಮುಗಿದ ಅಧ್ಯಾಯ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿಯ ಬಿ ಟೀಂ ಎಂದು ಸಿದ್ದರಾಮಯ್ಯ ಟೀಕಿಸಿದ್ದರು. ಇದರಿಂದಲೇ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಕಾರಣವಾಯಿತು. ಅದಕ್ಕೆ ಜೆಡಿಎಸ್ ಕಾರಣವಲ್ಲ ಎಂದರು. ಕಾಂಗ್ರೆಸ್ ಜತೆಗಿನ ಮೈತ್ರಿ ಲೋಕಸಭೆ ಚುನಾವಣೆಗೆ ಮಾತ್ರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಪರೂಪಕ್ಕೆ ದೇವಸ್ಥಾನಕ್ಕೆ ಹೋಗುತ್ತಾರೆ. ಆದರೆ, ಬಿಜೆಪಿಯವರು ದೇವಸ್ಥಾನದ ಗಿರಾಕಿಗಳು. ದಿನ ಬೆಳಗಾದ್ರೆ ದೇವಸ್ಥಾನಕ್ಕೆ ಹೋಗ್ತಾರೆ. ರೆಸಾರ್ಟ್‌ನಲ್ಲೂ ದೇವಸ್ಥಾನಗಳಿವೆ. ಪ್ರಹ್ಲಾದ, ಎಲ್ಲೆಲ್ಲೂ ನಾರಾಯಣನಿದ್ದಾನೆ ಎಂದು ಹೇಳಿದಂತೆ ರೆಸಾರ್ಟ್‌ನಲ್ಲೂ ದೇವರಿದ್ದಾನೆ.
-ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.