ಸದಾ ನೆನಪಿನಲ್ಲಿ ಉಳಿಯುವಂತಾದ ಪುನೀತ್ ಜೋಯಿಡಾ ಭೇಟಿ
Team Udayavani, Nov 7, 2021, 2:27 PM IST
ಜೋಯಿಡಾ: ಕನ್ನಡದ ಎಲ್ಲರ ಮೆಚ್ಚುಗೆಯ ನಟ ಪುನೀತ್ ರಾಜಕುಮಾರ್ ಅವರ ಅಗಲಿಕೆಯ ನೋವಿನಿಂದ ಇನ್ನೂ ಹೊರಬರಲಾಗದಿದ್ದರೂ, ಅವರ ಜೀವನದಲ್ಲಿ ನಡೆದು ಬಂದ ಹಾದಿ, ಆಯಾಯ ಊರಿಗೆ ಭೇಟಿ ನೀಡಿದ ಕ್ಷಣಗಳು ಇನ್ನೂ ಅಚ್ಚಳಿಯದೆ ಸ್ಮರಣೆಗೆ ಬರುತ್ತಿರುವುದರ ಜೊತೆಯಲ್ಲಿ ಅವರ ಅಪರೂಪದ ಭೇಟಿಗಳ ದೃಶ್ಯಗಳು ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗುತ್ತಿವೆ. ಅಂತಹದ್ದೆ ವಿಡಿಯೋ ಒಂದು ಜೋಯಿಡಾ ತಾಲೂಕಿನೆಲ್ಲೆಡೆ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗುತ್ತಿದೆ.
ಕಳೆದ 6 ತಿಂಗಳ ಹಿಂದೆ ವನ್ಯಜೀವಿ ಇಲಾಖೆಗೆ ಸಂಬಂಧಪಟ್ಟಂತೆ ಸಾಕ್ಷ್ಯಚಿತ್ರಕ್ಕಾಗಿ ಜೋಯಿಡಾಕ್ಕೆ ಆಗಮಿಸಿದ್ದ ಪುನೀತ್ ರಾಜಕುಮಾರ್, ಜೋಯಿಡಾ ತಾಲೂಕು ಕೇಂದ್ರದಲ್ಲಿರುವ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದರು. ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ಕಾರ್ಯಚಟುವಟಿಕೆಗಳ ಬಗ್ಗೆ ಆ ಸಂದರ್ಭದಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಟೀಂ ಇಂಡಿಯಾ ಮುಂದಿನ ನಾಯಕನ ಹೆಸರು ಸೂಚಿಸಿದ ನೆಹ್ರಾ: ರೋಹಿತ್,ರಾಹುಲ್, ಪಂತ್ ಪಟ್ಟಿಯಲ್ಲಿಲ್ಲ
ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡ್ಕರ್, ಈಶ್ವರಿ ವಿದ್ಯಾಲಯದ ಸಂಚಾಲಕಿ ಬಿ.ಕೆ.ಗೀತಕ್ಕ, ವಿದ್ಯಾಧಿರಾಜ, ಸುನೀತಾ ಬಾಂದೇಕರ ಹಾಗೂ ಊರ ನಾಗರೀಕರು ಮತ್ತು ಕೇಂದ್ರದ ಸದಸ್ಯರುಗಳು ಪುನೀತ್ ಭೇಟಿಯ ವೇಳೆ ಉಪಸ್ಥಿತರಿದ್ದು, ಇದೀಗ ಪುನೀತ್ ಅವರ ಸರಳ ಸಹೃದಯಿ ನಡವಳಿಕೆಗಳನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.