Udupi ಜಿಲ್ಲಾಧಿಕಾರಿಯಿಂದ ಕೋಟ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ
Team Udayavani, Sep 5, 2024, 12:48 AM IST
ಕೋಟ: ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಸೆ.3ರಂದು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು.
ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ ಕಡಲ್ಕೊರೆತದಿಂದ ತೀರ ಪ್ರದೇಶಕ್ಕೆ ಹಾನಿ ಉಂಟಾಗುತ್ತಿದ್ದು, ಈ ಬಗ್ಗೆ ಶಾಶ್ವತ ಪರಿಹಾರ ಅಗತ್ಯವಿರುವುದಾಗಿ ಉದಯವಾಣಿ ಹಲವು ಬಾರಿ ವರದಿ ಪ್ರಕಟಿಸಿತ್ತು. ಪ್ರಸ್ತುತ ಜಿಲ್ಲೆಯ ಪ್ರಮುಖ ಕಡಲ್ಕೊರೆತ ಪ್ರದೇಶಗಳಲ್ಲಿ ಪರಿಹಾರಕ್ಕೆ 5 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮೀನುಗಾರಿಕೆ ಇಲಾಖೆ ಎಂಜಿನಿಯರ್ ಡಯಾಸ್, ಎ.ಇ.ಇ. ಶೋಭಾ, ಸ್ಥಳೀಯ ಗ್ರಾ.ಪಂ. ಪ್ರತಿನಿಧಿಗಳು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.