ವಿಟ್ಲ: ಒಂಟಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ
Team Udayavani, Oct 11, 2020, 8:46 PM IST
ವಿಟ್ಲ : ವಿಟ್ಲ ಮೇಗಿನಪೇಟೆಯಲ್ಲಿ ಒಂಟಿಯಾಗಿ ವಾಸವಿದ್ದ ಮಹಿಳೆಯ ಮನೆಗೆ ದಾಳಿ ಹಾಗೂ ಹಲ್ಲೆ ನಡೆಸಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮದ್ ಬಂಧಿತ ಆರೋಪಿ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಹಾಗೂ ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ವಿಟ್ಲ ಪಿಎಸ್ಐ ವಿನೋದ್ ರೆಡ್ಡಿ ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯು ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯಲ್ಲಿನ ಮರದ ಪೀಠೋಪಕರಣ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಮೂರು ದಿನಗಳಿಂದ ಆತ ಮಹಿಳೆಯ ಮನೆಯ ಸುತ್ತ ಅನುಮಾನಾಸ್ಪದ ರೀತಿಯಲ್ಲಿ ಓಡಾಡಿ ದಾಳಿಗೆ ಸಿದ್ಧತೆ ನಡೆಸಿದ್ದ ಎಂಬುದು ಪೊಲೀಸ್ ತನಿಖೆಯ ವೇಳೆ ತಿಳಿದುಬಂದಿದ್ದು, ಇದೇ ಮಾಹಿತಿಯ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಸಂಪುಟದಲ್ಲಿ ಮಹತ್ವದ ಬದಲಾವಣೆ : ಶ್ರೀರಾಮುಲು ಕೈಯಲ್ಲಿದ್ದ ಅರೋಗ್ಯ ಖಾತೆ ಸುಧಾಕರ್ ಹೆಗಲಿಗೆ?
ಪೊಲೀಸರು ಆರೋಪಿಯ ಜತೆಗೆ ಆತ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಹಣದ ಅಭಾವದಿಂದ ಆತ ಈ ಕೃತ್ಯ ನಡೆಸಿದ್ದಾನೆ ಎಂಬುದು ತಿಳಿದುಬಂದಿದೆ.
ಘಟನೆಯ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ವಿಟ್ಲ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು. ಪೊಲೀಸ್ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬಂದಿ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.