Vitla: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ರಾಜಕಾರಣಿಗಳಿಂದ ದಾಂಧಲೆ
ಸ್ಥಳಕ್ಕೆ ಆಗಮಿಸಿ ಗುಂಪು ಚದುರಿಸಿದ ಪೊಲೀಸರು
Team Udayavani, Nov 12, 2024, 7:15 AM IST
ವಿಟ್ಲ: ಇಲ್ಲಿನ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ರಾಜಕಾರಣಿಗಳಿಂದ ನಡೆದ ದಾಂಧಲೆಯಲ್ಲಿ ಮೇಜಿನ ಗಾಜು ಪುಡಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ವ್ಯವಸ್ಥೆ ಮಾಡಿದ್ದಾರೆ.
ವೀರಕಂಭ ನಿವಾಸಿ ಶೇಖ್ ಶಿಬಾನ್ ಅವರು ಇತ್ತೀಚೆಗೆ ಸರಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಅಡಿ ಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ 94ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಕಂದಾಯ ಅಧಿಕಾರಿಗಳು ಸ್ಥಳ ತನಿಖೆಯನ್ನು ನಡೆಸಿ ವರದಿ ಸಲ್ಲಿಸುವ ಸಂದರ್ಭದಲ್ಲಿ ಮನೆ ಅರಣ್ಯ ಇಲಾಖೆಯಿಂದ ನಿರ್ದಿಷ್ಟ ದೂರದಲ್ಲಿದ್ದು, ಅಲ್ಲಿಂದ ಒಪ್ಪಿಗೆ ಪಡೆಯುವ ಬಗ್ಗೆ ಷರಾ ಬರೆದಿದ್ದಾರೆ.
ಅಧಿಕಾರಿಗಳು ಅದಕ್ಕೆ ಒಪ್ಪಿಗೆ ಸೂಚಿಸದ ಹಿನ್ನಲೆಯಲ್ಲಿ ರಾಜಕಾರಣಿಯೊಬ್ಬರು ಬೆಂಬಲಿಗರ ಜತೆಗೆ ವಿಟ್ಲದ ಅರ್‌ಐ ಕಚೇರಿಗೆ ಆಗಮಿಸಿ ಸರಕಾರಿ ಅ ಧಿಕಾರಿಯನ್ನು ಪ್ರಶ್ನಿಸಿ ಮೇಜಿಗೆ ಗುದ್ದಿ ದಾಂಧಲೆ ನಡೆಸಿದ್ದು, ಈ ವೇಳೆ ಮೇಜಿನ ಮೇಲೆ ಹಾಸಲಾಗಿದ್ದ ಗಾಜು ಪುಡಿ ಪುಡಿಯಾಗಿದೆ. ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.