ಸಂಕ್ರಾಂತಿ ನಂತರವೂ ಸಂಪುಟ ವಿಸ್ತರಣೆ ಮುಂದೂಡಿಕೆ?
Team Udayavani, Dec 27, 2019, 6:30 AM IST
ಬೆಂಗಳೂರು: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರೂ ಜನವರಿಯಲ್ಲಿ ಸಂಪುಟ ವಿಸ್ತರಣೆ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆಯಿದೆ.
ವಿಧಾನಮಂಡಲ ಅಧಿವೇಶನವು ಜ.27ಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ
ತರಾತುರಿಯಲ್ಲಿ ಸಂಪುಟ ವಿಸ್ತರಣೆಯಾಗುವುದೇ ಎಂಬ ಪ್ರಶ್ನೆ ಮೂಡಿಸಿದೆ. ಜ.20ರಿಂದ 30ವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ಕರೆಯಲಾಗಿದೆ. ಆದರೆ ಜ. 21ರಿಂದ 24ರವರೆಗೆ ಸ್ವಿಡ್ಜರ್ಲೆಂಡ್‌ನ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯೂಇಎಫ್) 50ನೇ ವಾರ್ಷಿಕ ಸಭೆ ನಡೆಯಲಿದ್ದು, ದೇಶದ ಮುಖ್ಯಮಂತ್ರಿಗಳೆಲ್ಲ ಪಾಲ್ಗೊಳ್ಳುತ್ತಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರು ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದರೆ ವಿಧಾನಮಂಡಲ ಅಧಿವೇಶನ ಹಾಗೂ ಸಂಪುಟ
ವಿಸ್ತರಣೆ ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಿಜೆಪಿ ಸರ್ಕಾರ ಸುಭದ್ರವಾಗುತ್ತಿದ್ದಂತೆ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆಯಾಗುವ ಮಾತು ಕೇಳಿಬಂದಿತು. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರಿ ಗೆದ್ದಿರುವವರು ಪ್ರಭಾವಿ ಖಾತೆಗಳಿಗೆ ಪಟ್ಟು ಹಿಡಿದ್ದಾರೆ ಎನ್ನಲಾಗಿತ್ತು. ಯಡಿಯೂರಪ್ಪ ಅವರು ವರಿಷ್ಠರ ಭೇಟಿಗೆ ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಸಂಪುಟ ವಿಸ್ತರಣೆ ಮುಂದೂಡಿಕೆಯಾಯಿತು. ಬಳಿಕ ಧನುರ್ಮಾಸ ಕಾರಣಕ್ಕೆ ಶಾಸಕರು ಸಹ ಸಂಪುಟ ವಿಸ್ತರಣೆಗೆ ಹೆಚ್ಚು ಒತ್ತಡ ಹೇರಿಲ್ಲ. ಆ ಹಿನ್ನೆಲೆಯಲ್ಲಿ ಜನವರಿ ಮೊದಲ ವಾರದಲ್ಲೇ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಿಎಎ ವಿರುದ್ಧ ರಾಷ್ಟ್ರದ ಹಲವೆಡೆ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರು ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವತ್ತ ಗಮನ ಹರಿಸಿದ್ದಾರೆ.
ಕೇಂದ್ರ ಬಜೆಟ್‌ಗೂ ತಯಾರಿ ನಡೆಸಬೇಕಿರುವುದರಿಂದ ಕಾರ್ಯ ಒತ್ತಡದಲ್ಲಿದ್ದಾರೆ. ಈ ಹೊತ್ತಿನಲ್ಲಿ ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಗೆ ಸಮಯಾವಕಾಶ ಸಿಗುವುದೇ ಎಂಬುದು ಮುಖ್ಯವೆನಿಸಿದೆ.
ಒಂದೊಮ್ಮೆ ಜನವರಿ ಮೊದಲ ವಾರದಲ್ಲಿ ಯಡಿಯೂರಪ್ಪ ವರಿಷ್ಠರನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ ಸಂಕ್ರಾಂತಿ ಹೊತ್ತಿಗೆ ಭೇಟಿಗೆ ಪ್ರಯತ್ನಿಸಬಹುದು. ಅಲ್ಲಿಂದ ಅನುಮೋದನೆ ಪಡೆದು ಸಂಪುಟ ಪುನಾರಚನೆ ಇಲ್ಲವೇ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳುವುದು ವಿಳಂಬವಾದರೆ ನಂತರ ಯಡಿಯೂರಪ್ಪ ಅವರು ಸಿಡ್ಜರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. ಅವರು ರಾಜ್ಯಕ್ಕೆ ಹಿಂತಿರುಗುವ ಹೊತ್ತಿಗೆ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದೆ. ಹಾಗಾಗಿ ಜನವರಿಯಲ್ಲೂ ಸಂಪುಟ ವಿಸ್ತರಣೆ ಬಗ್ಗೆ ಸಚಿವಾಕಾಂಕ್ಷಿಗಳಲ್ಲಿ ಅನುಮಾನ ಮೂಡಿದೆ ಎನ್ನಲಾಗಿದೆ.
ಅಧಿವೇಶನ ಮುಂದಕ್ಕೆ
ಸ್ವಿಡ್ಜರ್ಲೆಂಡ್‌ನಲ್ಲಿ ನಡೆಯಲಿರುವ ಡಬ್ಲ್ಯೂಇಎಫ್ ಸಾಮಾನ್ಯ ಸಭೆಗೆ ಸಚಿವರೊಬ್ಬರನ್ನು ಕಳುಹಿಸಲು ಬಿಎಸ್‌ವೈ ಚಿಂತಿಸಿದ್ದಾರೆ. ಆದರೆ ದೇಶದ ಎಲ್ಲ ಸಿಎಂಗಳು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಅವರೇ ಹೋಗುವುದು ಸೂಕ್ತ ಎಂಬುದಾಗಿ ಆಪ್ತ ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಯಡಿಯೂರಪ್ಪ ಅವರೇ ಪ್ರವಾಸ ಕೈಗೊಂಡರೆ ಅಧಿವೇಶನ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚು ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.