ಬಂಡೀಪುರದಲ್ಲಿ ಸ್ವಯಂ ಸೇವಕರ ಸೇವೆ ಅನಗತ್ಯ
Team Udayavani, Apr 25, 2019, 3:41 AM IST
ಗುಂಡ್ಲುಪೇಟೆ: ಸ್ವಯಂ ಸೇವಕರು ಎಂಬ ಹೆಸರಿನಲ್ಲಿ ಅರಣ್ಯದೊಳಗೆ ಪ್ರವೇಶಿಸಿ, ಸೆಲ್ಫಿ ತೆಗೆದು ಹೊರಜಗತ್ತಿಗೆ ತಪ್ಪು ಮಾಹಿತಿ ನೀಡುತ್ತಿರುವ ಕಾರಣ, ಎಂತಹ ತುರ್ತು ಪರಿಸ್ಥಿತಿಯಲ್ಲೂ ಸ್ವಯಂ ಸೇವಕರ ಸೇವೆ ಅನಗತ್ಯ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಂಡೀಪುರ ಹುಲಿ ಯೋಜನೆಯ ಹಿಮವದ್ ಗೋಪಾಲಸ್ವಾಮಿ ಅರಣ್ಯ ವಲಯದಲ್ಲಿ ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಲಂಟಾನಾ ಪೊದೆಗಳು, ಭೂಮಿಯಲ್ಲಿ ತೆವಳುವ ಸಣ್ಣ ಪ್ರಾಣಿಗಳು ಮತ್ತು ಅಲ್ಪ ಪ್ರಮಾಣದ ಹುಲ್ಲು, ಒಣಗಿ ನಿಂತ ದೊಡ್ಡ ಮರಗಳು ಮತ್ತು ಒಣ ಹುಲ್ಲು ಬೆಂಕಿಯಲ್ಲಿ ಸುಟ್ಟುಹೋಗಿದ್ದವು. ಸ್ವಲ್ಪ ಕಾಲದ ನಂತರ ಅವು ಮತ್ತೆ ಬೆಳೆಯುತ್ತವೆ.
ಆದರೆ, ಹಸಿರು ಹೊದ್ದಿದ್ದ ಯಾವುದೇ ಮರಗಳೂ ಸುಟ್ಟಿರಲಿಲ್ಲ. ಆದರೆ, ಕೆಲವು ದುಷ್ಕರ್ಮಿಗಳು ಕೆಲವು ದಿನಗಳಿಂದ ಬಂಡೀಪುರ ಬೆಂಕಿ ಆಕಸ್ಮಿಕದಲ್ಲಿ ಹಲವಾರು ಪ್ರಾಣಿಗಳು ಮೃತಪಟ್ಟಿದ್ದು, ಹಲವಾರು ಮರಗಳು ಸುಟ್ಟುಹೋಗಿವೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಅಲ್ಲದೆ, ಬಂಡೀಪುರ ಅರಣ್ಯ ಪ್ರದೇಶವನ್ನು ಪುನರುಜ್ಜೀವನಗೊಳಿಸಲು ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸುವಿಕೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಆದರೆ, ಬಂಡೀಪುರದ ಪುನರುತ್ಥಾನಕ್ಕಾಗಿ ಯಾವುದೇ ರೀತಿಯ ಹಣ ಸಹಾಯ ಬೇಡ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.