ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ

Team Udayavani, Sep 1, 2019, 3:06 AM IST

indininda

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು 2020ರ ವಿಶೇಷ ಮತದಾನ ನೋಂದಣಿ ಹಾಗೂ ಪರಿಷ್ಕರಣೆ ಕಾರ್ಯವನ್ನು ಸೆ.1ರಿಂದ 2020ರ ಜ.1ರವರೆಗೆ ನಡೆಸಲಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‌ ಕುಮಾರ್‌, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷವೂ ನಡೆಯುತ್ತದೆ. ಅದ ರಂತೆ 2020ನೇ ಸಾಲಿನ ಪಟ್ಟಿ ನೋಂದಣಿ ಹಾಗೂ ಪರಿಷ್ಕಣೆ ಕಾರ್ಯವನ್ನು ಸೆ.1ರಿಂದ ಆರಂಭಿಸಲಿದ್ದೇವೆ ಎಂದು ಹೇಳಿದರು.

2020 ಜ.1ಕ್ಕೆ 18 ವರ್ಷ ತುಂಬುವ ಯುವಕ, ಯುವತಿಯರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಜತೆಗೆ 18 ವರ್ಷ ತುಂಬಿದ್ದರೂ, ಇನ್ನೂ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಿಕೊಳ್ಳದವರು ಕೂಡ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ, ವಿಳಾಸ ಬದಲಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ. ಸೆ.1ರಿಂದ 2020ರ ಜನವರಿ 1ರ ವರೆಗೆ ಅವಕಾಶ ಇದೆ. ಜ.8ರ ವರೆಗೆ ಸಮಗ್ರ ವರದಿ ಬಿಡುಗಡೆ ಮಾಡಲಿದ್ದೇವೆ. ಮತದಾರರ ಪಟ್ಟಿ ಯಲ್ಲಿ ತಮ್ಮ ಹೆಸರು ಇದೆಯೇ ಅಥವಾ ಇಲ್ಲವೇ ಎಂಬು ದನ್ನು ಓಟರ್‌ ಹೆಲ್ಪ್ಲೈನ್‌ ಮೊಬೈಲ್‌ ಆ್ಯಪ್‌, ಚುನಾವಣಾ ಆಯೋಗದ 6151 ಸರ್ವಿಸ್‌ ಸೆಂಟರ್‌ ಹಾಗೂ 1950 ಕಾಲ್‌ ಸೆಂಟರ್‌ಗೆ ಕರೆ ಮಾಡಿ ಮಾಹಿತಿ ಪಡೆಯ ಬಹುದಾಗಿದೆ ಎಂದು ಹೇಳಿದರು.

ಜ.8ರಂದು ಅಂತಿಮ ಪಟ್ಟಿ ಬಿಡುಗಡೆ: ಸೆ.1ರಿಂದ ಸೆ.30ರ ತನಕ ಆಯೋಗದ ಮತಗಟ್ಟೆ ಅಧಿಕಾರಿಗಳು(ಬಿಎಲ್‌ಓ) ಮನೆ, ಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹೊಸ ಮತದಾರರ ಸೇರ್ಪಡೆ ಮತ್ತು ಡಿಲೀಡ್‌ ಮಾಡಬೇಕಿರುವ ಮತದಾರರ ಮಾಹಿತಿಯನ್ನು ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬಿಎಲ್‌ಒಗಳು ಮತದಾರರಿಗೆ ಸಂಬಂಧಿ ಸಿದ ಎಲ್ಲ ಮಾಹಿತಿಯನ್ನು ಸಂಗ್ರಹ ಮಾಡಲಿದ್ದಾರೆ.

ಸೆ.16ರಿಂದ ಅ.15ರ ತನಕ ವಿಳಾಸ ಮಾಹಿತಿ ಖಚಿತಪಡಿಸಿಕೊಳ್ಳುವುದು, ಪರ್ಯಾಯ ಮತಗಟ್ಟೆ ಇತ್ಯಾದಿ ಎಲ್ಲ ಮಾಹಿತಿಯನ್ನು ಪಡೆ ಯಲಿದ್ದಾರೆ. ಅ.15ಕ್ಕೆ ಮತದಾರರ ಪಟ್ಟಿಯಲ್ಲಿ ಕರಡು ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನ.30ರವರೆಗೆ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ನ.2, 3 ಹಾಗೂ 9 ಮತ್ತು 10ರಂದು ವಿಶೇಷ ಅಭಿಯಾನ ನಡೆಸಲಿದ್ದೇವೆ. ಆಕ್ಷೇ ಪಣೆಗಳ ಪರಿಶೀಲನೆ ಸಹಿತವಾಗಿ ಎಲ್ಲ ಕಾರ್ಯ ಮುಗಿಸಿ ಜ.8 ರಂದು ಅಂತಿಮ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದರು.

ಯುವ ಮತದಾರರ ಸಂಖ್ಯೆ: ರಾಜ್ಯದಲ್ಲಿ 10,19,550 ಯುವ ಮತದಾರರಿದ್ದು, ಈ ಅಭಿಯಾನದಲ್ಲಿ ಇನ್ನಷ್ಟು ಯುವ ಮತ ದಾರರು ಸೇರಿಕೊಳ್ಳುವ ಸಾಧ್ಯತೆ ಇದೆ. ಬೆಳಗಾವಿಯಲ್ಲಿ 82, 230, ಮೈಸೂರಿನಲ್ಲಿ 45,857, ರಾಯ ಚೂರಿನಲ್ಲಿ 36,185, ಬೆಂಗಳೂರು ನಗರದಲ್ಲಿ 42,584, ಉಡುಪಿಯಲ್ಲಿ 22,320, ದಕ್ಷಿಣ ಕನ್ನಡದಲ್ಲಿ 37,375 ಸೇರಿ ರಾಜ್ಯದಲ್ಲಿ ಒಟ್ಟು 10,19, 550 ಯುವ ಮತದಾರಿದ್ದಾರೆ. ಯುವ ಮತದಾರರು ಸೇರಿ ಒಟ್ಟಾರೆ ಯಾಗಿ ರಾಜ್ಯದಲ್ಲಿ 5,10,60,498 ಮತದಾರ ರಿದ್ದು, ಇದರಲ್ಲಿ 2,58,01,694 ಪುರುಷರು, 2,52,54,153 ಮಹಿಳೆ ಯರು, 465 ಇತರ ಮತದಾರರಿದ್ದಾರೆ ಎಂದು ವಿವರ ನೀಡಿದರು.

ಕೈಜೋಡಿಸಬೇಕು: ಮತದಾರರ ಪಟ್ಟಿ ನೋಂದಣಿ ಹಾಗೂ ಪರಿಷ್ಕರಣೆ ಕಾರ್ಯ ಈಗ ಆರಂಭವಾಗಿರುವುದರಿಂದ ರಾಜಕೀಯ ಪಕ್ಷದ ಏಜೆಂಟರು ನಮ್ಮ ಜತೆ ಸೇರಿಕೊಂಡರೆ, ಡಿಲೀಟ್‌ ಆಗಿರುವ ಅಥವಾ ಹೊಸದಾಗಿ ಸೇರಿಸಬೇಕಿರುವ ಮತದಾರರ ಮಾಹಿತಿ ಸುಲಭವಾಗಿ ಸಿಗಲಿದೆ ಎಂದರು.

ಡಿಲೀಟ್‌ ಮಾಡೋದು ಸುಲಭವಲ್ಲ: ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ಸ್ವಲ್ಪ ಕಠಿಣಗೊಳಿಸಲಾಗಿದೆ. ಮತದಾರರ ಪಟ್ಟಿಯಿಂದ ಹೆಸರು ತೆಗೆಯುವ ಮೊದಲು ನೋಟಿಫಿಕೇಷನ್‌ ಹೊರಡಿಸಲಾಗುತ್ತದೆ. ಇದಾದ ನಂತರ ಅವರ ಮನೆ ಬಾಗಿಲಿಗೆ ನೋಟಿಸ್‌ ಕೂಡ ಅಂಟಿಸಲಾಗುತ್ತದೆ. ನೋಟಿಸ್‌ ಅಂಟಿಸಿದ್ದನ್ನು ಅವರು ಗಮನಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕೇ ಅಥವಾ ಡಿಲೀಟ್‌ ಮಾಡುವ ಕ್ರಮ ಸರಿ ಇದೆಯೇ ಎಂಬುದನ್ನು ಖಚಿತಪಡಿಸಿದ ನಂತರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲಿದ್ದೇವೆ ಎಂದು ಸಂಜೀವ್‌ ಕುಮಾರ್‌ ಮಾಹಿತಿ ನೀಡಿದರು.

ಉಪಚುನಾವಣೆ ಯಾವಾಗ ಎಂಬುದನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆದರೆ, ನಾವು ಉಪಚುನಾವಣೆ ನಡೆಸಲು ಸಿದ್ಧರಿದ್ದೇವೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಇರುವುದರಿಂದ ಅಲ್ಲಿನ ತೀರ್ಪು ನೋಡಿಕೊಂಡು ಕೇಂದ್ರ ಚುನಾವಣಾ ಆಯೋಗ ಮುನ್ನಡೆಯಬಹುದು.
-ಸಂಜೀವ್‌ ಕುಮಾರ್‌, ಮುಖ್ಯಚುನಾವಣಾ ಆಯುಕ್ತ

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.