Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ
Team Udayavani, Oct 4, 2024, 1:16 AM IST
ಮಂಗಳೂರು: ಇಪ್ಪತ್ತು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾ.ಪಂ., ತಾ. ಪಂ.ಸದಸ್ಯನಾಗಿ, ಜಿಲ್ಲಾ ಪಂಚಾಯತ್‌ನಲ್ಲಿ 2 ಬಾರಿ ಸದಸ್ಯನಾಗಿ, ಜಿ.ಪಂ. ಅಧ್ಯಕ್ಷನಾಗಿ ಸ್ಥಳೀಯ ಸಂಸ್ಥೆಗಳ ಅರಿವು ಇರುವುದರಿಂದ ಪರಿಷತ್‌ನಲ್ಲಿ ಈ ಬಗ್ಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶ ದೊರೆತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ವೇಳೆ ಮಾತನಾಡಿದ ಅವರು, ಈ ಚುನಾವಣೆಯ ಮತದಾ ರರು ಸ್ಥಳೀಯ ಸಂಸ್ಥೆಗಳ ಜನಪ್ರತಿ ನಿಧಿಗಳು. ಯಾರು ಗೆದ್ದು ಬಂದರೆ ತಮಗೆ ನ್ಯಾಯ ಸಿಗಲಿದೆ ಎನ್ನುವ ಅರಿವು ಅವರಿಗಿದೆ. ಮತದಾರರ ಒಲವು ನನ್ನ ಪರವಿದೆ ಎಂದರು.
30 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿರುವೆ. ಆ ನೆಲೆಯಲ್ಲಿ ಪಕ್ಷ ನನ್ನನ್ನು ಗುರುತಿಸಿ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಜಿ.ಪಂ. ಅಧ್ಯಕ್ಷನಾಗಿದ್ದಾಗ ಸ್ವಂತ ಕಟ್ಟಡ ನಿರ್ಮಾಣ, ಎಲ್ಲ ಗ್ರಾ.ಪಂ.ಗಳ ಕಂಪ್ಯೂಟರೀಕರಣ ಸಾಧ್ಯವಾ ಯಿತು. ಇನ್ನು ಮುಂದಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಸಹಿತ ಎಲ್ಲ ಅಗತ್ಯಗಳನ್ನು ಪೂರೈಸಲು ಬದ್ಧ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಮುನಿಯಾಲು ಉದಯಕುಮಾರ ಶೆಟ್ಟಿ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.