Election: ಪ್ರೌಢ ಮಕ್ಕಳಲ್ಲಿ ಮತದಾನದ ಜಾಗೃತಿ: ಚು.ಆಯೋಗದ ಚಿಂತನೆ ಸ್ವಾಗತಾರ್ಹ


Team Udayavani, Oct 26, 2023, 8:41 PM IST

election

ದೇಶದ ಯುವಪೀಳಿಗೆ ಪ್ರಜಾಪ್ರಭುತ್ವ ಮತ್ತು ಮತದಾನದ ಬಗೆಗೆ ಅರ್ಥೈಸಿಕೊಂಡು, ಹಕ್ಕು ಚಲಾವಣೆಯ ಸಂದರ್ಭದಲ್ಲಿ ತಮ್ಮ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗ ವಿನೂತನ ಚಿಂತನೆಯೊಂದನ್ನು ದೇಶದ ಮುಂದಿಟ್ಟಿದೆ. ಪ್ರಜಾಪ್ರಭುತ್ವದ ಮೂಲೋದ್ದೇಶ, ಇದರ ಪ್ರಯೋಜನ, ಮಹತ್ವ ಮತ್ತು ದೇಶದ ಭವಿಷ್ಯ ರೂಪಣೆಯಲ್ಲಿ ಮತದಾನ ವಹಿಸುವ ಪಾತ್ರದ ಕುರಿತಂತೆ 9ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಂಬಂಧ ಶಿಕ್ಷಣ ಇಲಾಖೆಯೊಂದಿಗೆ ಅತೀ ಶೀಘ್ರದಲ್ಲಿಯೇ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಇತ್ತೀಚಿನ ದಶಕಗಳಲ್ಲಿ ಯುವ ಮತದಾರರನ್ನು ಮತದಾನ ಕೇಂದ್ರಗಳತ್ತ ಸೆಳೆಯುವ ಸಲುವಾಗಿ ಆಯೋಗ, ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಚುನಾವಣೆ ಸಂದರ್ಭದಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಆಯೋಗದ ಈ ಪ್ರಯತ್ನದಿಂದಾಗಿ ಕಳೆದ ಕೆಲವು ವರ್ಷಗಳಿಂದೀಚೆಗೆ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದೇ ವೇಳೆ ಮತದಾನಕ್ಕೆ ನಿಗದಿಪಡಿಸಲಾಗಿರುವ 18 ವರ್ಷ ತಲುಪುವ ವೇಳೆಗೆ ಪ್ರತಿಯೋರ್ವನೂ ಪ್ರಜಾಪ್ರಭುತ್ವ, ಮತದಾನ ಮತ್ತಿತರ ವಿಷಯಗಳ ಬಗೆಗೆ ಪ್ರಾಥಮಿಕ ಜ್ಞಾನವನ್ನು ಹೊಂದಿದ್ದರೆ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಸದೃಢವಾಗಿ ಬೆಳೆಯಲು ಸಾಧ್ಯ. ನೂರು ಪ್ರತಿಶತ ಮತದಾನದ ಗುರಿಯ ಜತೆಜತೆಯಲ್ಲಿ ಅರ್ಹ ಮತ್ತು ಸಮರ್ಥ ಅಭ್ಯರ್ಥಿಗಳ ಆಯ್ಕೆಯೂ ಅತೀಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಚುನಾವಣಾ ಆಯೋಗದ ಈ ಚಿಂತನೆ ಸ್ವಾಗತಾರ್ಹ ಮಾತ್ರವಲ್ಲದೆ ದೂರದೃಷ್ಟಿಯಿಂದ ಕೂಡಿದ್ದಾಗಿದೆ.

ಪ್ರಜಾಪ್ರಭುತ್ವ ಮಾದರಿ ಆಡಳಿತದಲ್ಲಿ ಮತದಾನ ದೇಶದ ಪ್ರತಿಯೋರ್ವ ವಯಸ್ಕ ಪ್ರಜೆಯ ಹಕ್ಕಾಗಿದ್ದು ಚುನಾವಣೆ ವೇಳೆ ಪ್ರತಿಯೋರ್ವ ಅರ್ಹ ಮತದಾರ ತನ್ನ ಹಕ್ಕನ್ನು ತಪ್ಪದೆ ಚಲಾಯಿಸಬೇಕು. ಅಲ್ಲದೆ ಮತ ಚಲಾವಣೆ ವೇಳೆ ತನ್ನ ಪ್ರತಿನಿಧಿಯಾಗಲು ಯಾರು ಅರ್ಹ ಎಂಬುದನ್ನು ನಿರ್ಧರಿಸುವಷ್ಟು ಸಾಮರ್ಥ್ಯವನ್ನು ಆತ ಹೊಂದಿರಬೇಕು. ಇದೇ ಹಿನ್ನೆಲೆಯಲ್ಲಿ ಈ ವಿಷಯಗಳನ್ನು ಪ್ರೌಢ ಶಾಲಾ ಹಂತದ ಪಠ್ಯಗಳಲ್ಲಿ ಸೇರ್ಪಡೆಗೊಳಿಸುವ ಇಂಗಿತವನ್ನು ಮುಖ್ಯ ಚುನಾವಣಾ ಆಯುಕ್ತರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆಯೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ ಆಯೋಗ ಅಂಕಿತ ಹಾಕಲಿದೆ ಎಂದವರು ತಿಳಿಸಿದ್ದಾರೆ.

ಪ್ರೌಢ ಹಂತದಲ್ಲಿಯೇ ಮಕ್ಕಳಿಗೆ ಪ್ರಜಾಪ್ರಭುತ್ವ ಸರ್ಕಾರ, ಚುನಾವಣೆ, ಮತದಾನದ ಮಹತ್ವ, ಹಕ್ಕು ಚಲಾವಣೆ ಸಂದರ್ಭದಲ್ಲಿನ ಅವರ ಹೊಣೆಗಾರಿಕೆಗಳು ಮತ್ತಿತರ ವಿಷಯಗಳ ಬಗೆಗೆ ಸಮರ್ಪಕವಾಗಿ ಅರಿವು ಮೂಡಿಸಿದ್ದೇ ಆದಲ್ಲಿ ಕೇವಲ ಯುವಜನತೆಯ ಮತದಾನ ಪ್ರಮಾಣವನ್ನು ಹೆಚ್ಚಿಸುವುದಷ್ಟೇ ಅಲ್ಲದೆ ಸಮರ್ಥ ಮತ್ತು ಸುಸ್ಥಿರ ಸರಕಾರ ರಚನೆಯ ನಿಟ್ಟಿನಲ್ಲಿ ಮುಂದಡಿ ಇಟ್ಟಂತಾಗಲಿದೆ. ಪ್ರೌಢ ಹಂತದಲ್ಲಿಯೇ ಮಕ್ಕಳನ್ನು ದೇಶದ ಭಾವೀ ಹೊಣೆಗಾರಿಕೆಯುತ ಪ್ರಜೆಗಳನ್ನಾಗಿ ರೂಪಿಸುವ ದೂರಾಲೋಚನೆಯೂ ಆಯೋಗದ ಈ ಚಿಂತನೆಯ ಹಿಂದೆ ಅಡಗಿದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಇದರಿಂದ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಭಾರತದ ಪ್ರಜಾಡಳಿತ ವ್ಯವಸ್ಥೆ ಇನ್ನಷ್ಟು ಸಶಕ್ತವಾಗಿ ಬೆಳೆಯಲು ಸಾಧ್ಯ.

 

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.