ತ್ಯಾಜ್ಯ ಮುಕ್ತ ರೇಟಿಂಗ್; ಮಂಗಳೂರು ಸ್ಪರ್ಧಿಸಿಯೇ ಇರಲಿಲ್ಲ!
Team Udayavani, May 21, 2020, 5:45 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ತ್ಯಾಜ್ಯಮುಕ್ತ ನಗರಗಳ ರೇಟಿಂಗ್‌ಗಳನ್ನು ಮಂಗಳವಾರ ಪ್ರಕಟಿ ಸಿದ್ದು, ಈ ಪ್ರಕ್ರಿಯೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸ್ಪರ್ಧೆಯನ್ನೇ ಮಾಡಿರಲಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.
ಕಳೆದ ವರ್ಷದಿಂದ ಕೇಂದ್ರ ಸರಕಾರವು ಈ ಸ್ಪರ್ಧೆಯನ್ನು ಜಾರಿಗೊಳಿಸಿದೆ. ತ್ಯಾಜ್ಯಮುಕ್ತವಾಗಿರುವ ನಗರಗಳು ಮಾತ್ರ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯುತ್ತವೆ. ಆದರೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪಚ್ಚನಾಡಿ ತ್ಯಾಜ್ಯರಾಶಿಯ ಸಮಸ್ಯೆ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರಕ್ಕೆ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅವಕಾಶ ಇರಲಿಲ್ಲ.
ನಗರದಲ್ಲಿ ಇರುವ ತ್ಯಾಜ್ಯಗಳನ್ನೆಲ್ಲ ಸಂಪೂರ್ಣ ಖಾಲಿ ಮಾಡಿದ ಅನಂತರ ವಷ್ಟೇ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳ ಬಹುದು ಎಂಬ ನಿಯಮ ಜಾರಿಯಲ್ಲಿರುವುದರಿಂದ ಮಂಗಳೂರಿಗೆ ಇದು ಸಮಸ್ಯೆಯಾಗಿದೆ. ಪಚ್ಚನಾಡಿ ತ್ಯಾಜ್ಯ ದುರಂತ ಹಾಗೂ ಅಲ್ಲಿನ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಿದ ಕಾರಣದಿಂದ ಈ ಸ್ಪರ್ಧೆ ಮಂಗಳೂರಿಗೆ ಸಮಸ್ಯೆ ಸೃಷ್ಟಿಸಿತ್ತು ಎಂದು ಪಾಲಿಕೆ ಮೂಲಗಳು ತಿಳಿಸಿವೆ.
ದಕ್ಷಿಣ ಭಾರತದಲ್ಲಿ ಮೈಸೂರು ನಗರ ಮಾತ್ರ ಭಾರತದ 5 ಸ್ಟಾರ್ ತ್ಯಾಜ್ಯಮುಕ್ತ ನಗರಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಸ್ವಚ್ಛ ಭಾರತ್‌ನಲ್ಲಿ 2018ರಲ್ಲಿ ಮನಪಾವು ಘನತ್ಯಾಜ್ಯ ವಿಲೇವಾರಿಯಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆ ದಿತ್ತು. ಅದಕ್ಕೂ ಮೊದಲು “ಸ್ವತ್ಛ ಸರ್ವೇಕ್ಷಣ’ಯಲ್ಲಿಯೂ ಮಂಗಳೂರು ಮೂರನೇ ಸ್ಥಾನ ಪಡೆದಿತ್ತು. ಬಳಿಕ 10ರ ನಂತರದ ಸ್ಥಾನವನ್ನು ಮಂಗಳೂರು ಪಡೆಯುತ್ತಾ ಬಂದಿದ್ದು, ಮೊದಲ ಸ್ಥಾನದ ನಿರೀಕ್ಷೆಯಲ್ಲಿದೆ.
ಸ್ಪರ್ಧಿಸಿರಲಿಲ್ಲ
ತ್ಯಾಜ್ಯಮುಕ್ತ ನಗರಗಳ ರೇಟಿಂಗ್‌ಗಳನ್ನು ನಿಗದಿಪಡಿಸುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆ ನಗರವು ತ್ಯಾಜ್ಯ ಮುಕ್ತವಾಗಿರಬೇಕು ಎಂಬ ನಿಯಮವಿದೆ. ಆದರೆ ಪಚ್ಚನಾಡಿಯಲ್ಲಿ ತ್ಯಾಜ್ಯರಾಶಿ ಇರುವ ಕಾರಣದಿಂದ ಮಂಗಳೂರು ನಗರ ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿಲ್ಲ. ಉಳಿದಂತೆ ಸ್ವತ್ಛಭಾರತ್, ಸರ್ವೇಕ್ಷಣ ಸಮೀಕ್ಷೆ, ಸಿಟಿಜನ್ ಸರ್ವೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಮಂಗಳೂರು ಭಾಗವಹಿಸಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ.
– ಮಧು ಎಸ್. ಮನೋಹರ್,
ಪರಿಸರ ಅಭಿಯಂತರರು, ಮನಪಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.