ಕುಡಿಯುವ ನೀರು ಪೋಲು: ದುರಸ್ತಿ ಕಾಮಗಾರಿ ಆರಂಭ
Team Udayavani, Mar 25, 2021, 4:50 AM IST
ಮಹಾನಗರ: ನಗರದ ಸದಾ ಜನನಿಬಿಡ ಕುದು¾ಲ್ ರಂಗರಾವ್ ರಸ್ತೆಯ ಅಲೋಶಿಯಸ್ ಹಿರಿಯ ಪ್ರಾ. ಶಾಲೆ ಗೇಟ್ ಮುಂಭಾಗ ಹಲವು ತಿಂಗಳುಗಳಿಂದ ಕುಡಿಯುವ ನೀರು ರಸ್ತೆಯಲ್ಲೇ ಹರಿಯುತ್ತಿತ್ತು. ಇದೀಗ ಎಚ್ಚೆತ್ತುಕೊಂಡ ಮನಪಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾಮಗಾರಿಯಲ್ಲಿ ತೊಡಗಿದೆ.
ಈ ಪ್ರದೇಶದಲ್ಲಿ ಕೆಲವು ತಿಂಗಳ ಹಿಂದೆ ರಸ್ತೆ ಅಗೆದು ಕಾಮಗಾರಿ ನಡೆಸಲಾಗಿತ್ತು. ಕಾಂಕ್ರೀಟ್ ರಸ್ತೆಯಡಿಯಲ್ಲಿ ಪೈಪ್ ಒಡೆದು ಅಲ್ಲೇ ಇರುವ ವಿದ್ಯುತ್ ಕಂಬದ ಬುಡದಿಂದ ನೀರು ಹೊರಕ್ಕೆ ಬರುತ್ತಿತ್ತು. ಹೀಗೆ ಹೊರ ಬಂದ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲೇ ಸಂಗ್ರಹಗೊಂಡಿತ್ತು.
ಇದರಿಂದಾಗಿ ಸೊಳ್ಳೆ ಉತ್ಪತ್ತಿಯ ತಾಣವಾಗಿ ಮಾರ್ಪಾಡಾಗಿತ್ತು. ಈ ಕುರಿತಂತೆ ಕೆಲವು ದಿನಗಳ ಹಿಂದೆ “ಉದಯವಾಣಿ ಸುದಿನ’ ವರದಿ ಪ್ರಕಟಿಸಿದ್ದು, ಪಾಲಿಕೆ ಅಧಿಕಾರಿಗಳು ಎಚ್ಚೆತ್ತು, ಕಾಮಗಾರಿ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.