ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ: ಸಿಎಂ ಚರ್ಚೆ
Team Udayavani, May 21, 2019, 6:00 AM IST
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅಲ್ಲಿ ಮತ್ತೂಂದು ಚೆಕ್‌ಡ್ಯಾಂ ನಿರ್ಮಿಸುವ ಅವಶ್ಯಕತೆಯಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಗಿದ್ದು, ಅವರು ನೀಡುವ ವರದಿ ನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಈ ಮಧ್ಯೆ, ಧರ್ಮಸ್ಥಳದಲ್ಲಿ ನೀರಿನ ಕೊರತೆ ಉಂಟಾಗಿರುವ ಸಂಬಂಧ ಸರ್ಕಾರದ ಕಳಕಳಿಗೆ ವಿರೇಂದ್ರ ಹೆಗ್ಗಡೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಿಎಂ ಕಚೇರಿಯ ಸೂಚನೆ ಹಿನ್ನೆಲೆಯಲ್ಲಿ ದ.ಕ.ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ನೇತ್ರಾವತಿ ನದಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.