ಕುರುಗೋಡು: ನೀರಿಗಾಗಿ ನಾರಿಯರು ಖಾಲಿ ಕೊಡ ಹಿಡಿದು ಪ್ರದರ್ಶನ
Team Udayavani, Oct 27, 2022, 7:32 PM IST
ಕುರುಗೋಡು: ಸಮೀಪದ ಎಮ್ಮಿಗನೂರು ಗ್ರಾಮದ ಇಂದಿರಾ ನಗರದಲ್ಲಿ ಕಳೆದ ವಾರದಿಂದ ನಳ್ಳಿಯಲ್ಲಿ ನೀರು ಬರದೇ ಪಕ್ಕದ ವಾರ್ಡಿಗೆ ತೆರಳಬೇಕಾದ ಪರಸ್ಥಿತಿ ನಿರ್ಮಾಣವಾಗಿದೆ. ಸಮರ್ಕಕವಾಗಿ ನೀರು ಬರದ ಕಾರಣ ಇಲ್ಲಿನ ಮಹಿಳೆಯರು ಖಾಲಿ ಕೊಡ ಪ್ರದರ್ಶನ ಮಾಡಿದ ಪ್ರಸಂಗ ನಡೆಯಿತು.
ಗ್ರಾಮದ 6 ವಾರ್ಡಿನ ಜನರಿಗೆ ನಳ್ಳಿಯಲ್ಲಿ ನೀರು ಬರದಿರುವ ಪರಿಣಾಮ ನಿತ್ಯ ಬಳಕೆಗೆ ಹಾಗೂ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ ಎಂದು ವಾರ್ಡಿನ ಗ್ರಾಮಸ್ಥರು ಗ್ರಾ.ಪಂ. ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ರಾಜಕೀಯ ಪ್ರತಿನಿಧಿಗಳು ಕೂಡ ಇದರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ದೂರಿದ್ದಾರೆ.
ದೀಪಾವಳಿ ಹಬ್ಬದ ಸಮಯದಲ್ಲಿ ಸರಿಯಾಗಿ ನೀರು ಸರಬರಾಜು ಆಗದೆ ಕಳೆದ ವಾರದಿಂದ ವಾರ್ಡಿನಲ್ಲಿ ನೀರಿನ ಸಮಸ್ಯೆ ಕಾಡುತಿದ್ದು, ಜನರು ತಲ್ಲಣಗೊಂಡಿದ್ದಾರೆ. ಇಲ್ಲಿ ಹಲವು ವರ್ಷಗಳಿಂದ ಬೋವಿ ಸಮಾಜದವರು ನೆಲೆಸುತ್ತಿದ್ದು, ಕೂಲಿ ಕೆಲಸದ ಮೇಲೆ ಅವಲಂಭಿತರಾಗಿದ್ದಾರೆ. ಇವರು ಸಂಜೆ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೀರು ಸಂಗ್ರಹಿಸಲು ನೋಡಿದರೆ ಇಲ್ಲಿ ನೀರೇ ಬರುವುದಿಲ್ಲ. ಇಲ್ಲಿನ ವಾಸ್ತವದ ಪರಸ್ಥಿತಿಯ ಬಗ್ಗೆ ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ ಎನ್ನುತ್ತಾರೆ ಅಲ್ಲಿನ ಸಾರ್ವಜನಿಕರು.
ಸ್ಥಳೀಯ ಜನತೆಗೆ ಮಾತ್ರ ನಿತ್ಯ ಕುಡಿಯುವ ನೀರಿಗಾಗಿ ಪರದಾಟ ತಪ್ಪಿಲ್ಲ. ಇದರ ಬಗ್ಗೆ ಕಿಂಚತ್ತು ಅಧಿಕಾರಿಗಳು ಗಮನ ವಹಿಸದೇ ಕುರುಡು ಜಾಣತನ ತೊರುತ್ತಿದ್ದಾರೆ ಎಂದು ಇಲ್ಲಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೀಪಾವಳಿ ಹಬ್ಬದ ಸಮಯದಲ್ಲಿ ವಾರ್ಡಿನಲ್ಲಿ ವಿದ್ಯುತ್ ಹಾಗೂ ನೀರಿನ ವ್ಯವಸ್ಥೆ ಇಲ್ಲದೆ ಹಬ್ಬ ಹೇಗೆ ಆಚರಿಸಬೇಕು ಮತ್ತು ಮಕ್ಕಳ ವಿದ್ಯಾಭ್ಯಾಸ ಹೇಗೆ ನೋಡಿಕೊಳ್ಳಬೇಕು. ತುಂಬಾ ತೊಂದರೆ ಅನುಭವಿಸುವಂತಾಯಿತು. ನೀರು ಇರದೆ, ವಿದ್ಯುತ್ ಇಲ್ಲದೆ ಕತ್ತಲಿನಲ್ಲಿ ಹಬ್ಬ ಆಚರಿಸುವಂತಾಯಿತು. – ವಡ್ಡರ ಮಾರೆಮ್ಮ ಇಂದಿರ ನಗರ ಎಮ್ಮಿಗನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.