ಮುಖ್ಯಮಂತ್ರಿ ಜತೆ ನಾವಿದ್ದೇವೆ: ಸ್ವಾಮೀಜಿಗಳ ಭರವಸೆ

Team Udayavani, Jan 18, 2020, 3:07 AM IST

mukyamat

ಬೆಂಗಳೂರು: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾಗಿ ತಾವೆಲ್ಲಾ ಅವರೊಂದಿಗೆ ಇರುವುದಾಗಿ ಭರವಸೆ ನೀಡಿದರು.

ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸಕ್ಕೆ ಶನಿವಾರ ಮಧ್ಯಾಹ್ನ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಯಾದವ ಗುರುಪೀಠದ ಕೃಷ್ಣ ಯಾದವಾನಂದ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನಿಯೋಗ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯ ದರ್ಶಿ ಎಂ.ಪಿ.ರೇಣುಕಾಚಾರ್ಯ ಉಪಸ್ಥಿತರಿದ್ದರು.

ನಂತರ ಪ್ರತಿಕ್ರಿಯಿಸಿದ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ವೀರಶೈವ- ಲಿಂಗಾಯತ ಪಂಚಮಸಾಲಿ ಮಠದ ಕಾರ್ಯಕ್ರಮದಲ್ಲಿ ಒಂದು ಅಚಾತುರ್ಯ ನಡೆದಿದೆ. “ಪಂಚಮಸಾಲಿಗಳು ಕೈಬಿಡಲಿದ್ದಾರೆ’ ಎಂಬ ಶಬ್ದ ಸಮುದಾಯದಲ್ಲಿ ನಿರಾಸೆ ಉಂಟು ಮಾಡಿದೆ. ಯಾವುದೇ ಒಂದು ಸಮುದಾಯದ ಬೆಂಬಲದಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲ. ಎಲ್ಲ ಜನಾಂಗದವರು ಬೆಂಬಲ ನೀಡಿದರೆ ಸರ್ಕಾರ ರಚನೆಯಾಗುತ್ತದೆ. ಅದರಂತೆ ನಮ್ಮ ಸಮುದಾಯ ಆಶೀರ್ವಾದ ಮಾಡುತ್ತದೆ. ಸಮುದಾಯ ಕೈಬಿಡುತ್ತದೆ ಎಂದು ಹೇಳುವುದು ಸರಿಯಲ್ಲ. ಬಹುಮತದ ಸರ್ಕಾರಕ್ಕೆ ಸಮುದಾಯ ಆಶೀರ್ವಾದ ಮಾಡುತ್ತದೆ ಎಂದು ಹೇಳಿದರು.

ಮಠಾಧಿಪತಿಗಳೆಲ್ಲಾ ಸೇರಿ ಚರ್ಚೆ ನಡೆಸಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೇವೆ. ನಾವು ಯಾವುದೇ ಅನುದಾನ, ಸಚಿವ ಸ್ಥಾನಕ್ಕಾಗಿ ಬಂದಿಲ್ಲ. ಅವರೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ಧರ್ಮಗುರುಗಳ ಮೇಲೆ ಮುಖ್ಯಮಂತ್ರಿಗಳೂ ಇಟ್ಟಿರುವ ನಂಬಿಕೆಗೆ ಎಂದೂ ಧಕ್ಕೆಯಾಗಬಾರದು. ಅದೇ ಗೌರವ ಮುಂದುವರಿಯಲಿ. ನಾವೆಲ್ಲಾ ನಿಮ್ಮೊಂದಿಗಿದ್ದೇವೆ ಎಂಬ ನೈತಿಕ ಬಲ ನೀಡಲು ಬಂದಿದ್ದೇವೆ ಎಂದರು.

ಪಂಚಮಸಾಲಿ ಸಮುದಾಯದ 15 ಬಿಜೆಪಿ ಶಾಸಕರಿದ್ದು, ಎಲ್ಲರೂ ಸಚಿವಕಾಂಕ್ಷಿಗಳಾಗಿದ್ದಾರೆ. ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಗುರುಗಳಾದವರು ಈ ಸಮಾಜಕ್ಕೆ ಕೊಡಿ ಎನ್ನಬಹುದು. ಇತ್ತೀಚೆಗೆ ಆದ ಘಟನೆಯಿಂದ ಸಮುದಾಯದ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುರುಗೇಶ್‌ ನಿರಾಣಿ ಅವರ ಅಭಿಮಾನಿಗಳಲ್ಲಿ ಗೊಂದಲ ಮೂಡಿದೆ. ಶೀಘ್ರವೇ ಮುಖ್ಯಮಂತ್ರಿಗಳು ಕರೆಸಿ ಗೊಂದಲ ಪರಿಹರಿಸುವುದಾಗಿ ಹೇಳಿದ್ದಾರೆ ಎಂದರು.

ಹರ ಜಾತ್ರೆಯಲ್ಲಿ ನಡೆದ ಘಟನೆಗೆ ವಚನಾನಂದ ಸ್ವಾಮೀಜಿ ಈಗಾಗಲೇ ಕ್ಷಮೆ ಕೇಳಿದ್ದಾರೆ. ಅದನ್ನು ಮತ್ತೆ ಮುಂದುವರಿಸುವುದಿಲ್ಲ. ಕೇಳುವುದಕ್ಕೆ ಎಲ್ಲರಿಗೂ ಅವಕಾಶವಿದೆ. ಕೇಳುವ ಶೈಲಿಯಲ್ಲಿ ವ್ಯತ್ಯಾಸವಿರುವುದು ಸರಿಯಲ್ಲ. ಆ ರೀತಿ ಆಗುವುದು ಬೇಡ. ನಿಮ್ಮೊಂದಿಗೆ ಪಂಚಮಸಾಲಿ ಸಮಾಜ ಕೈಬಿಡುವ ವಿಚಾರ ಸರಿಯಲ್ಲ. ಎಲ್ಲರೂ ಜತೆಯಲ್ಲಿರುತ್ತೇವೆ ಎಂದು ಹೇಳಲು ಬಂದಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.