ವಾರಾಂತ್ಯ ಕರ್ಫ್ಯೂ: ಪ್ರವಾಸಿಗರ ಸಂಖ್ಯೆ ಇಳಿಕೆ

ನಿತ್ಯ ಒಂದೂವರೆ ಸಾವಿರ ಪ್ರವಾಸಿಗರು ಮಾತ್ರ ಆಗಮನ; ಕೋವಿಡ್‌ ಪರೀಕ್ಷಿಸಿದ ಬಳಿಕ ಅರಮನೆ ವೀಕ್ಷಣೆಗೆ ಅವಕಾಶ

Team Udayavani, Aug 13, 2021, 5:11 PM IST

ವಾರಾಂತ್ಯ ಕರ್ಫ್ಯೂ: ಪ್ರವಾಸಿಗರ ಸಂಖ್ಯೆ ಇಳಿಕೆ

ಮೈಸೂರು: ಸಂಭವನೀಯ ಕೋವಿಡ್‌ 3ನೇ ಅಲೆ ಭೀತಿ ಹಿನ್ನೆಲೆ ಜಿಲ್ಲೆಯಲ್ಲಿ ವಾರಾಂತ್ಯಕರ್ಫ್ಯೂ ಹಾಗೂ ನಿತ್ಯ ನೈಟ್‌ ಕರ್ಫ್ಯೂ ಜಾರಿಯಲಿ
ರುವುದರಿಂದ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪ್ರವಾಸಿ ತಾಣಗಳು ಜನರಿಲ್ಲದೇ ಭಣಗುಡುತ್ತಿವೆ.

ಕೋವಿಡ್‌ ಸೋಂಕು ಕಾಲಿಡುವುದಕ್ಕೂ ಮುನ್ನ ಮೈಸೂರು ಜಿಲ್ಲೆಗೆ ನಿತ್ಯ 10ರಿಂದ 12 ಸಾವಿರ ಮಂದಿ ಪ್ರವಾಸಿಗರು ಭೇಟಿ ನೀಡಿ ಒಂದೆರೆಡು ದಿನ ತಂಗುತ್ತಿದ್ದರು.ಆದರೆ ಕೋವಿಡ್‌ ಮೊದಲ ಅಲೆಯ ನಂತರ ಪ್ರವಾಸಿಗರ ಸಂಖ್ಯೆ 4ರಿಂದ 5 ಸಾವಿರಕ್ಕೆ ಇಳಿಕೆಯಾಗಿತ್ತು. ಆದರೆ ಮತ್ತೊಮ್ಮೆ 2ನೇ ಅಲೆಯಿಂದ ಲಾಕ್‌ಡೌನ್‌ ಹೇರಿದ್ದರಿಂದ ಪ್ರವಾಸೋದ್ಯಮ ಕ್ಷೇತ್ರ ಸಂಪೂರ್ಣ ನೆಲ ಕಚ್ಚಿದ್ದು, ನಿತ್ಯ 2 ಸಾವಿರ ಮಂದಿ ಪ್ರವಾಸಿಗರು ಮಾತ್ರ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ.

ಈ ನಡುವೆ, ಕೇರಳಕ್ಕೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಕಳೆದ ವಾರ ವೀಕೆಂಡ್‌ ಕರ್ಫ್ಯೂ ಹಾಗೂ ನೈಟ್‌ ಕರ್ಫ್ಯೂ ಜಾರಿ ಗೊಳಿಸಿದ್ದರಿಂದ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಒಂದು ಸಾವಿರದಿಂದ ಒಂದೂವರೆ ಸಾವಿರಕ್ಕೆ ಇಳಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲಾ ಪ್ರವಾಸಿ ಕೇಂದ್ರಗಳು ಪುನಾರಂಭವಾಗಿದ್ದರೂ ಪ್ರವಾಸಿಗರು ಮಾತ್ರ ಮೈಸೂರಿನತ್ತ ತಲೆ ಹಾಕದಿರುವುದು ಪ್ರವಾಸೋದ್ಯಮಕ್ಷೇತ್ರಕ್ಕೆ ಹೊಡೆತ ಬಿದ್ದಿದೆ.

ಇದನ್ನೂ ಓದಿ:55 ಸಾವಿರ ಅಂಕ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್; ಸಾರ್ವಕಾಲಿಕ ಗರಿಷ್ಠ ದಾಖಲೆ

ಹೊರ ರಾಜ್ಯದವರಿಗೆ ಕೋವಿಡ್‌ ಟೆಸ್ಟ್‌: ಮೈಸೂರು ಅರಮನೆಗೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸಿ ನಂತರ ಅರಮನೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಇದರ ಜೊತೆಗೆ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಜೇಶನ್‌ ಮಾಡಲಾಗುತ್ತಿದೆ. ನಂತರ ದಿನಕ್ಕೆ ಮೂರು ಬಾರಿಯಂತೆ ಅರಮನೆಯಲ್ಲಿ ಸ್ಯಾನಿಟೈಸ್‌ಕಾರ್ಯ ನಡೆಸಲಾಗುತ್ತಿದೆ.ಜೊತೆಗೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲೂ ಕೋವಿಡ್‌ ಮಾರ್ಗಸೂಚಿ ಅನುಸರಿಸಿ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದ್ದು, ನಿತ್ಯ ಮೂರು ಬಾರಿ ಮೃಗಾಲಯ ಆವರಣವನ್ನು ಸ್ಯಾನಿಟೈಸ್‌ ಮಾಡಲಾಗುತ್ತಿದೆ. ಹಾಗೆಯೇ ಹೊರಗಿನಿಂದ ಬರುವವರು ವೆಟ್‌ ಮ್ಯಾಟ್‌ ತುಳಿದು ಒಳ ಬರುವಂತೆ ಪ್ರವೇಶ ದ್ವಾರದಲ್ಲಿ ವೆಟ್‌ ಮ್ಯಾಟ್‌ ಅಳವಡಿಸಲಾಗಿದೆ.

ಮಾಸ್ಕ್ ಇದ್ದವರಿಗಷ್ಟೇ ಪ್ರವೇಶ:ಮೈಸೂರಿನ ಚಾಮುಂಡಿಬೆಟ್ಟ ಮತ್ತು ನಂಜನಗೂಡು ಶ್ರೀಕಂಠೇಶ್ವರ ದೇಗುಲಕ್ಕೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.ಜೊತೆಗೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್‌ ವ್ಯವಸ್ಥೆ ಮಾಡಲಾಗಿದೆ.

ದೇಗುಲದ ಪ್ರವೇಶ ದ್ವಾರದಲ್ಲಿ ಸಿಬ್ಬಂದಿಯಿಂದ ಕೋವಿಡ್‌ ಮಾರ್ಗಸೂಚಿಸಿ ಪಾಲಿಸುವಂತೆ ಸಲಹೆ ಕೊಡಿಸುವುದು,ಸ್ಯಾನಿಟೈಸರ್‌ ನೀಡುವುದು ಹಾಗೂ ಥರ್ಮಲ್‌ ಸ್ಕ್ಯಾನಿಂಗ್‌ ಮಾಡುವ ಕೆಲಸ ನಡೆಯುತ್ತಿದೆ. ಶ್ರೀಕಂಠೇಶ್ವರ ದೇವಾಲಯದಲ್ಲಿ ದೇವರ ದರ್ಶ  ನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು, ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಶ್ರಾವಣಮಾಸ: ದೇಗುಲಗಳಿಗೆ ನಿರ್ಬಂಧ
ಮೈಸೂರು: ಕೋವಿಡ್‌ ಹಿನ್ನೆಲೆ ನಾಲ್ಕು ಶ್ರಾವಣ ಶನಿವಾರಗಳಂದು ಹಾಗೂ ಶ್ರಾವಣ ಮಾಸದ ಶುಕ್ರವಾರ ಮತ್ತು ಭಾನುವಾರಗಳಂದು
ಮೈಸೂರಿನ ವಿವಿ ಪುರಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಸುತ್ತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್‌
ಆಯುಕ್ತ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಅವರು ಶ್ರಾವಣ ಮಾಸದ ವಿಶೇಷ ದಿನಗಳಂದು ಮೈಸೂರು ನಗರದ ವಿ.ವಿ.ಪುರಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಕೋವಿಡ್‌-19 ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತ 200 ಮೀ.ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕೋವಿಡ್‌ ಆತಂಕವಿರುವ ಹಿನ್ನಲೆಯಲ್ಲಿ ನಾಲ್ಕು ಶ್ರಾವಣ ಶನಿವಾರಗಳಂದು ಹಾಗೂ ಶ್ರಾವಣ ಮಾಸದ ಶುಕ್ರವಾರ ಮತ್ತು ಭಾನುವಾರಗಳಂದು ದೇವಸ್ಥಾನದಲ್ಲಿ ಹೆಚ್ಚಿನ ಜನಸಂದಣಿ ಸೇರುವ ಸಾಧ್ಯತೆ ಇರುವುದರಿಂದ ಮೊದಲನೇ ಶ್ರಾವಣ ಮಾಸದ ಆ.13, 14, 15ರಂದು ಹಾಗೂ 2ನೇ ಶ್ರಾವಣ ಶುಕ್ರವಾರ ಆ.20, 21, 22 ರಂದು, ಮೂರನೇ ಶ್ರಾವಣ ಮಾಸದ ಆ.27, 28, 29ರಂದು ಹಾಗೂ 4 ನೇ ಶ್ರಾವಣ ಮಾಸದ ಸೆ.03, 04, 05ರಂದು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮಾತ್ರ ಪೂಜೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಿ, ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕೋವಿಡ್‌ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ರಜಾ ದಿನ ಹಾಗೂ ಶನಿವಾರ ಮತ್ತು ಭಾನುವಾರ ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.