ಉಭಯ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಆರಂಭ
Team Udayavani, Jan 15, 2022, 6:15 AM IST
ಮಂಗಳೂರು/ಉಡುಪಿ: ಕೊರೊನಾ ಪ್ರಕರಣಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿಯಿಂದಲೇ ಆರಂಭಗೊಂಡಿದೆ.
ವಾರಾಂತ್ಯ ಕರ್ಫ್ಯೂಗೆ ಸಂಬಂಧಿಸಿ ಜ. 5ರಂದು ರಾಜ್ಯ ಸರಕಾರ ಹೊರಡಿಸಿದ್ದ ಆದೇಶದಲ್ಲಿರುವ ಎಲ್ಲ ನಿಯಮಗಳು ಈ ವಾರಾಂತ್ಯ ಕರ್ಫ್ಯೂಗೆ ಅನ್ವಯವಾಗುತ್ತವೆ ಎಂದು ಉಭಯ ಜಿಲ್ಲಾಧಿಕಾರಿ ಗಳಾದ ಡಾ| ರಾಜೇಂದ್ರ ಕೆ.ವಿ. ಮತ್ತು ಕೂರ್ಮಾ ರಾವ್ ತಿಳಿಸಿದ್ದಾರೆ.
ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ನಡುವೆ ಸಕಾರಣಗಳಿಲ್ಲದೆ ಜನರ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ದಿನಸಿ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರ, ಮೀನು, ಮಾಂಸ, ಹಾಲು, ಔಷಧ ಅಂಗಡಿಗಳು ತೆರೆದಿರುತ್ತವೆ. ಹೊಟೇಲ್‌ಗಳಲ್ಲಿ ಕುಳಿತು ಆಹಾರ ಸೇವಿಸಲು ಅವಕಾಶವಿಲ್ಲ. ಪಾರ್ಸೆಲ್ ಸೇವೆ ಇರಲಿದೆ. ಆನ್‌ಲೈನ್ ಆಹಾರ ಡೆಲಿವರಿ ಇರಲಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶ ನಿರ್ಬಂಧ ಇರಲಿದೆ. ದೂರದ ಊರುಗಳಿಗೆ ಹೋಗುವವರು ಬಸ್, ರೈಲು ಅಥವಾ ವಿಮಾನ ಯಾನದ ಟಿಕೆಟ್‌ನೊಂದಿಗೆ ಸಂಚರಿಸಲು ಅವಕಾಶವಿದೆ.
ತೀರಾ ಕೌಟುಂಬಿಕ ಉದ್ದೇಶದ ಕಾರ್ಯಕ್ರಮಗಳನ್ನು ಸೀಮಿತ ಸಂಖ್ಯೆಯಲ್ಲಿ ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಇದನ್ನೂ ಓದಿ:ವಾರಾಂತ್ಯ ಕರ್ಫ್ಯೂ ಆರಂಭ: ಕಟ್ಟುನಿಟ್ಟಿನ ಜಾರಿಗೆ ಸೂಚನೆ
ಎಲ್ಲ ರಾಜ್ಯ ಮತ್ತು ಕೇಂದ್ರ ಸರಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮ ಇತ್ಯಾದಿಗಳು ತುರ್ತು ಆವಶ್ಯಕತೆ ಇದ್ದರೆ ಮಾತ್ರ ಕಾರ್ಯ ನಿರ್ವಹಿಸಲಿವೆ. ಐಟಿ ಉದ್ಯಮ ಸೇರಿ ದಂತೆ ಎಲ್ಲ ಕೈಗಾರಿಕೆಗಳಿಗೆ ನಿರ್ಬಂಧದಿಂದ ವಿನಾ ಯಿತಿ ಇದೆ ಮತ್ತು ಅಂತಹ ಸಂಸ್ಥೆಗಳ ನೌಕರರು ಸಂಬಂಧಪಟ್ಟ ಸಂಸ್ಥೆ / ಕಂಪೆನಿ ನೀಡಿದ ಅಧಿಕೃತ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸ ಬೇಕು.
ಕನಿಷ್ಠ ಪುರಾವೆಗಳೊಂದಿಗೆ ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯತೆಯ ಅವಶ್ಯವಿರುವ ವ್ಯಕ್ತಿಗಳು, ಲಸಿಕೆಯನ್ನು ತೆಗೆದು ಕೊಳ್ಳಲು ಉದ್ದೇಶಿಸಿರುವ ಅರ್ಹ ವ್ಯಕ್ತಿಗಳು ಸಂಚರಿಸಬಹುದು.
ಶುಕ್ರವಾರ ರಾತ್ರಿ 10 ಗಂಟೆಯ ಬಳಿಕ ವಿವಿಧ ಕಡೆಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ದೃಶ್ಯ ಕಂಡುಬಂತು.
ಕಡಿಮೆ ಬಸ್ ಸಂಚಾರ ಸಾಧ್ಯತೆ
ಕಳೆದ ಶನಿವಾರ ಮತ್ತು ರವಿವಾರ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇದ್ದು, ಈ ಹಿನ್ನೆಲೆಯಲ್ಲಿ ಈ ವಾರ ಕಳೆದ ವಾರಕ್ಕಿಂತಲೂ ಕಡಿಮೆ ಸಂಖ್ಯೆಯ ಬಸ್‌ಗಳು ರಸ್ತೆಗಳಿಯಲಿವೆ. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಬಸ್ ಕಾರ್ಯಾಚರಣೆ ಮಾಡಲಿವೆ ಎಂದು ಖಾಸಗಿ ಬಸ್ ಮಾಲಕರ ಸಂಘದವರು ಮತ್ತು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.