ಕರಾವಳಿಯಲ್ಲಿ ವಾರಾಂತ್ಯ ಕರ್ಫ್ಯೂ: ಅನಗತ್ಯ ಓಡಾಟಕ್ಕೆ ಕಡಿವಾಣ
Team Udayavani, Jan 8, 2022, 7:00 AM IST
ಮಂಗಳೂರು/ಉಡುಪಿ: ಕೊರೊನಾ ಸೋಂಕು ಪ್ರಸರಣ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 10ರಿಂದ ಆರಂಭವಾಗಿದೆ. ಸೋಮವಾರ ಬೆಳಗ್ಗೆ 5ರ ತನಕ ಜಾರಿಯಲ್ಲಿರಲಿದೆ.
ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲದೇ ಗ್ರಾಮಾಂತರ ಪ್ರದೇಶಗಳಲ್ಲೂ ಶುಕ್ರವಾರ ರಾತ್ರಿ 8ರ ಬಳಿಕ ಜನಸಂದಣಿ ಕಡಿಮೆಯಾಗತೊಡಗಿತು. ಹತ್ತು ಗಂಟೆಯ ಬಳಿಕ ಜನಜೀವನ, ಸಂಚಾರ ಬಹುತೇಕ ಸ್ತಬ್ಧಗೊಂಡಿತು. ಇದರ ಮಧ್ಯೆಯೂ ಕಾರು, ದ್ವಿಚಕ್ರ ವಾಹನಗಳಲ್ಲಿ ಬಂದ ಕೆಲವರನ್ನು ಪೊಲೀಸರು ಪ್ರಶ್ನಿಸುತ್ತಿದ್ದುದೂ ಕಂಡು ಬಂದಿತು. ಹಲವೆಡೆ ಬ್ಯಾರಿಕೇಡ್ ಗಳನ್ನು ಹಾಕಿ ಬಂದೋಬಸ್ತ್ ಸಹ ಮಾಡಲಾಗಿದೆ.
ಉಡುಪಿ ಬಸ್ ಸ್ಟಾಂಡ್, ಮಂಗಳೂರು ಬಸ್ ಸ್ಟಾಂಡ್ ಸೇರಿದಂತೆ ಎಲ್ಲ ಪ್ರಮುಖ ಸ್ಥಳಗಳು ಖಾಲಿ ಹೊಡೆಯುತ್ತಿದ್ದವು. ಇದೇ ಚಿತ್ರಣ ಕುಂದಾಪುರ, ಕಾರ್ಕಳ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿದಂತೆ ತಾಲೂಕು ಕೇಂದ್ರಗಳಲ್ಲೂ ಇತ್ತು. ಪೊಲೀಸರು ವಾಹನದಲ್ಲಿ ಗಸ್ತು ಹೊಡೆಯುತ್ತಿದ್ದುದೂ ಕಂಡು ಬಂದಿತು.
ಕೆಲವದ್ದಕ್ಕೆ ಅನುಮತಿ
ಸೋಮವಾರ ಬೆಳಗ್ಗೆ 5ರ ವರೆಗೆ ಉಭಯ ಜಿಲ್ಲೆಗಳಲ್ಲಿ ತುರ್ತು ಸೇವೆ, ದಿನಸಿ, ಆಹಾರ ವಸ್ತುಗಳ ಮಾರಾಟ, ಹೊಟೇಲ್‌ಗಳಲ್ಲಿ ಪಾರ್ಸೆಲ್ ಮತ್ತು ಅಗತ್ಯ ಸೇವೆಗಳು ಹೊರತುಪಡಿಸಿ ಬೇರೆ ಯಾವುದೇ ಸೇವೆಗಳು ಇರುವುದಿಲ್ಲ. ತುರ್ತು ಸೇವೆ ಒದಗಿಸುವ ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ. ವಕೀಲರಿಗೆ ಶೇ. 50 ರಷ್ಟು ಸಿಬಂದಿ ನಿಯಮದಡಿ ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಅವಕಾಶವಿದೆ.
ಶನಿವಾರ ಶಾಲಾ ಕಾಲೇಜುಗಳಿಗೆ ರಜಾ ನೀಡಲಾಗಿದ್ದು, ಪರೀಕ್ಷೆ ನಡೆಸಲು ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಉಭಯ ಜಿಲ್ಲೆಗಳ ಗಡಿ ಭಾಗದಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲೂ ತಪಾಸಣೆ ಕಾರ್ಯ ಮತ್ತಷ್ಟು ಬಿಗಿಗೊಳಿಸಲಾಗಿದೆ.
ಇದನ್ನೂ ಓದಿ:ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಕೃಷ್ಣಾಪುರ ಮಠಾಧೀಶರ ಭೇಟಿ
ಉಡುಪಿ: ತಪಾಸಣೆ
ಉಡುಪಿ, ಕುಂದಾಪುರ, ಕಾರ್ಕಳ ನಗರ ಪ್ರದೇಶ ಸಹಿತ ವಾಗಿ ಜಿಲ್ಲೆಯ ಗ್ರಾಮೀಣ ಭಾಗದ ಮುಖ್ಯರಸ್ತೆಗಳು, ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲೂ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯ ಪ್ರಮಾಣವನ್ನು 4 ಸಾವಿರದಿಂದ 8 ಸಾವಿರಕ್ಕೆ ಏರಿಸಲಾಗಿದೆ. ಗೋವಾ, ಮಹಾರಾಷ್ಟ್ರ, ಕೇರಳ ಮೊದಲಾದ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ.
ವೀಕೆಂಡ್‌ಕರ್ಫ್ಯೂ
ಶುಕ್ರವಾರ ರಾತ್ರಿ 10ರಿಂದ ವಾರಾಂತ್ಯ ಕರ್ಫ್ಯೂ ಆರಂಭವಾಗಿದ್ದು ಉಭಯ ಜಿಲ್ಲೆಗಳ ವಿವಿಧೆಡೆ ಪೊಲೀಸರು ಬಿಗು ತಪಾಸಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.