ವೆನ್ಲಾಕ್: ಅತ್ಯಾಧುನಿಕ ಐಸಿಯು ಉದ್ಘಾಟನೆ
Team Udayavani, May 17, 2020, 5:15 AM IST
ಮಂಗಳೂರು: ಕೋವಿಡ್-19 ಆಸ್ಪತ್ರೆಯಾಗಿರುವ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನಲ್ಲಿ 37 ಬೆಡ್‌ಗಳನ್ನೊಳಗೊಂಡ ಅತ್ಯಾಧುನಿಕವಾದ ತೀವ್ರ ನಿಗಾ ಘಟಕವನ್ನು ಶನಿವಾರ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯವರ ಕೊಡುಗೆಯಾದ 2 ವೆಂಟಿಲೇಟರ್ ವ್ಯವಸ್ಥೆಗೂ ಚಾಲನೆ ನೀಡಲಾಯಿತು.
ಹೊಸ ಐಸಿಯುವನ್ನು ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಿಸ ಲಾಗಿದೆ. ಹೊಸ ಐಸಿಯು ಘಟಕ ದಲ್ಲಿ ಸದ್ಯಕ್ಕೆ ಅಗತ್ಯ ಬಿದ್ದರೆ ಕೊರೊನಾ ಸೋಂಕಿತ ರಿಗೆ ಚಿಕಿತ್ಸೆ ನೀಡಲಾಗುವುದು. ಮುಂದೆ ಅದು ವೆನ್ಲಾಕ್‌ನ ಇತರ ರೋಗಿಗಳ ಚಿಕಿತ್ಸೆಗೆ ಬಳಕೆಯಾಗಲಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಕೇತಿಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ , ಮೇಯರ್ ದಿವಾಕರ ಪಾಂಡೇಶ್ವರ, ಡಿಎಚ್‌ಒ ಡಾ| ರಾಮಚಂದ್ರ ಬಾಯರಿ, ವೆನ್ಲಾಕ್ಅಧೀಕ್ಷಕ ಡಾ| ಸದಾಶಿವ ಪಾಲ್ಗೊಂಡಿದ್ದರು.
30 ವೆಂಟಿಲೇಟರ್‌ಗಳಿಗೆ ಬೇಡಿಕೆ
ವೆನ್ಲಾಕ್‌ನಲ್ಲಿ ಸದ್ಯ ಮಕ್ಕಳ ವಿಭಾಗ ಹೊರತು ಪಡಿಸಿದರೆ 20 ವೆಂಟಿಲೇಟರ್‌ಗಳು ಲಭ್ಯವಿವೆ. ಮತ್ತೆ 30 ವೆಂಟಿಲೇಟರ್‌ಗಳಿಗೆ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿ ದೊರೆಯುವ ನಿರೀಕ್ಷೆ ಇದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.