ಆಟೋ ಚಾಲಕನ ಬಗ್ಗೆ ರಚಿತಾ ಹೇಳಿದ್ದೇನು?
Team Udayavani, Jul 4, 2020, 7:38 AM IST
ಚಿತ್ರರಂಗದ ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು ಮತ್ತು ಅವರನ್ನು ಭೇಟಿ ಮಾಡಲು ಅಭಿಮಾನಿಗಳು ಯಾವಾಗಲೂ ಕಾತುರದಿಂದ ಕಾಯುತ್ತಿರುತ್ತಾರೆ. ಹಾಗೆಯೇ ಇಲ್ಲೊಬ್ಬ ಆಟೋ ಚಾಲಕ ತಮ್ಮ ಇಷ್ಟದ ನಟಿಯನ್ನು ನೋಡಲು ಅವರ ಮನೆಯ ಬಳಿಯೇ ಕಾದು, ಕೊನೆಗೆ ಭೇಟಿಯಾಗಿದ್ದಾರೆ.
ಹೌದು! ಸ್ಯಾಂಡಲ್‌ವುಡ್‌ನ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ರಚಿತಾ ಕೂಡಾ ಭಾವುಕರಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾದ ಬರಹವೊಂದನ್ನು ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.
“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ
ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ. ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ’.
ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು: ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ. ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ ನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಹಾಕಿ ನನ್ನನ್ನ ಟ್ಯಾಗ್ ಮಾಡಿ. ನಾನು ರೀ-ಫೊಸ್ಟ್ ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ. ಎಂದು ಭಾವಾತ್ಮಕವಾಗಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.