ಸುಧಾರಣೆಗಳು ಹೇಗಿರಬೇಕು, ಸಲಹೆ ಕೊಡಿ : ಪ್ರಧಾನಿ ನರೇಂದ್ರ ಮೋದಿ
Team Udayavani, Apr 30, 2022, 6:55 AM IST
ಸೂರತ್: “ಬ್ಯಾಂಕಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ಯಾವ ರೀತಿ ಸುಧಾರಣೆಗಳು ಆಗಬೇಕು. ಈ ಬಗ್ಗೆ ಉದ್ಯಮಿಗಳೇ ತಮ್ಮಲ್ಲಿ ಗುಂಪು ರಚನೆ ಮಾಡಿಕೊಂಡು ಸುಧಾರಣೆಗೆ ಸಲಹೆಗಳನ್ನು ನೀಡಿ’ ಹೀಗೆಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸೂರತ್‌ನಲ್ಲಿ ಆಯೋಜಿಸ ಲಾಗಿದ್ದ “ಜಾಗತಿಕ ಪಾಟಿದಾರ್ ವ್ಯಾಪಾರಿ ಸಮ್ಮೇಳನ- 2022’ರಲ್ಲಿ ಭಾಗವಹಿಸಿ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದಾರೆ. ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.
ಸಾಮಾನ್ಯ ಜನರೂ ಉದ್ದಿಮೆದಾರರಾಗಲು ಅನುಕೂಲವಾಗುವಂಥ ನೀತಿಗಳನ್ನು ಕೇಂದ್ರ ರೂಪಿಸಲು ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಹತ್ತರಿಂದ ಹದಿನೈದು ಉದ್ದಿಮೆದಾರರ ಗುಂಪು ಗಳು ರಚನೆಯಾಗಬೇಕು. ಅವರು ಬ್ಯಾಂಕಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಗತ್ತಿನಲ್ಲಿ ಉಂಟಾಗುತ್ತಿರುವ ಬದಲಾವಣೆಗಳನ್ನು ಅಧ್ಯಯನ ನಡೆಸಿ, ದೇಶದಲ್ಲಿಯೂ ಅದರ ಅನುಷ್ಠಾನ ಹೇಗೆ ನಡೆಯಬೇಕು ಎಂಬುದರ ಬಗ್ಗೆ ಸಲಹೆ ನೀಡಬೇಕು. ಜತೆಗೆ ನ್ಯೂನತೆಗಳು ಇದಲ್ಲಿ ಅದನ್ನು ಪ್ರಸ್ತಾವಿಸಿ, ಅದನ್ನು ಸರಿಪಡಿಸುವತ್ತಲೂ ಗಮನ ಹರಿಸಬೇಕು. ಇದರಿಂದಾಗಿ ಕೇಂದ್ರ ಸರಕಾರಕ್ಕೂ ನೀತಿಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇಂಥ ಗುಂಪುಗಳಲ್ಲಿ ಶಿಕ್ಷಣ ಕ್ಷೇತ್ರದ ತಜ್ಞರು ಮತ್ತು ವಿಷಯ ತಜ್ಞರೂ ಸೇರಿ ಕೊಳ್ಳ ಬೇಕಾಗಿರುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಪಿಎಲ್‌ಐನಿಂದ ಅನುಕೂಲ
ಕೇಂದ್ರ ಸರಕಾರ ಜಾರಿಗೊಳಿಸಿದ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ ನೀಡಿಕೆ (ಪಿಎಲ್‌ಐ) ಯೋಜನೆಯಿಂದಾಗಿ ಹಳೆಯ ಉದ್ಯಮ ವಲಯದಲ್ಲಿ ಹೊಸ ಚೇತರಿಕೆ ಕಾಣುವಂತೆ ಮಾಡಿದೆ. ಜತೆಗೆ, “ಮೇಕ್ ಇನ್ ಇಂಡಿಯಾ’ ಯೋಜನೆಗೂ ಅನುಕೂಲವಾಗಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಕೂಡ ಯಾವ ರೀತಿ ಹೊಸತನ ಅಳವಡಿಸಬಹುದು ಎಂಬ ಬಗ್ಗೆಯೂ ಪಾಟಿದಾರ್ ಸಮುದಾಯ ಚಿಂತನೆ ನಡೆಸಬೇಕು ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.