BJP ಪ್ರತಿಭಟನೆ ಯಾವಾಗ?
Team Udayavani, Nov 30, 2023, 12:00 AM IST
ಬೆಂಗಳೂರು: ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಬಿ.ಎಸ್. ಯಡಿಯೂರಪ್ಪ ಸರಕಾರ ನೀಡಿದ್ದ ಸಮ್ಮತಿಯನ್ನು ಸಚಿವ ಸಂಪುಟ ಸಭೆಯಲ್ಲಿ ರದ್ದುಗೊಳಿಸಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆಗೆ ಕರೆ ನೀಡಿದ್ದ ಬಿಜೆಪಿ ಹಠಾತ್ ಮೌನಕ್ಕೆ ಶರಣಾಗಿರುವುದು ಪಕ್ಷದ ವಲಯದಲ್ಲಿ ಹಲವು ಅನುಮಾನವನ್ನು ಸೃಷ್ಟಿಸಿದೆ.
ಸಂಪುಟ ಸಭೆಯಲ್ಲಿ ಸರಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಘಟಾನುಘಟಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾರೀ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತಿಮ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನವೆಂಬರ್ 25ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು ಬಿಜೆಪಿ ಮುಂದೂಡಿತ್ತು.
ಆದರೆ ಬಿಜೆಪಿಯ ಹೋರಾಟದ ಕರೆ ಸಾಮಾಜಿಕ ಜಾಲ ವೇದಿಕೆ “ಎಕ್ಸ್’ಗೆ ಮಾತ್ರ ಸೀಮಿತವಾಗಿದೆ. ಹೈಕೋರ್ಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ತಾತ್ಕಾಲಿಕ ಉಪಶಮನ ಸಿಕ್ಕಿರುವುದರಿಂದ ಬಿಜೆಪಿ ಈ ವಿಚಾರವನ್ನು ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನಿಸುವುದೇ? ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಆರ್. ಅಶೋಕ್ ಅವರಿಗೆ ಸರಕಾರದ ವಿರುದ್ಧ ಹೋರಾಟ ನಡೆಸಲು ಸಿಕ್ಕ ಮೊದಲ ಪ್ರಬಲ ಅವಕಾಶವನ್ನೇ ಇದರೊಂದಿಗೆ ನಿಷ್ಪಲವಾಯಿತೇ? ಎಂಬ ಪ್ರಶ್ನೆ ಮೂಡಿದೆ.
ಹೊಂದಾಣಿಕೆ ರಾಜಕೀಯ?
ಬಿಜೆಪಿ ಮೂಲಗಳು ಯಾವುದೇ ಪ್ರತಿಕ್ರಿಯೆ ನೀಡಲು ತಯಾರಿಲ್ಲ. ಎಲ್ಲರೂ ಬರ ಪ್ರವಾಸದಲ್ಲಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಿಲ್ಲ ಎಂಬ ಹಾರಿಕೆ ಉತ್ತರ ಲಭಿಸಿದ್ದು, ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡೀತೆ? ಅಥವಾ ಶಸ್ತ್ರತ್ಯಾಗ ಮಾಡೀತೇ? ಎಂಬ ಅನುಮಾನಕ್ಕೆ ಬಲ ನೀಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.