ಯಾರಾಗ್ತಾರೆ ರಾಜ್ಯ ಪೊಲೀಸ್‌ ಇಲಾಖೆ ನೂತನ ಸಾರಥಿ?


Team Udayavani, Jan 29, 2020, 3:06 AM IST

yaragtarae

ಬೆಂಗಳೂರು: ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಅವರು ಜ.31ರಂದು ಸೇವೆಯಿಂದ ನಿವೃತ್ತರಾಗಲಿದ್ದು ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ ( ಡಿಜಿ-ಐಜಿ) ಯಾರಾಗಲಿದ್ದಾರೆಂಬ ಕುತೂಹಲ ಗರಿಗೆದರಿದೆ.

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ ಹುದ್ದೆಗೆ ಅರ್ಹ ರೆನಿಸಿದ 8 ಅಧಿಕಾರಿಗಳ ಪಟ್ಟಿಯನ್ನು ರಾಜ್ಯಸರ್ಕಾರ ಕೇಂದ್ರ ಲೋಕ ಸೇವಾ ಆಯೋಗಕ್ಕೆ ಕಳುಹಿಸಿದ್ದು, ಈ ಪಟ್ಟಿಯಲ್ಲಿ 30 ವರ್ಷ ಸೇವಾವಧಿ ಪೂರ್ಣಗೊಳಿಸಿರುವ ಹಾಗೂ 6 ತಿಂಗಳಿಗಿಂತ ಹೆಚ್ಚು ಸೇವಾವಧಿ ಬಾಕಿಯಿರುವ 8 ಅಧಿಕಾರಿಗಳ ಹೆಸರಿದೆ. ಆದರೆ, ಅಂತಿಮವಾಗಿ ಯುಪಿ ಎಸ್‌ಸಿ ಯಾವ ಅಧಿಕಾರಿ ಹೆಸರನ್ನು ವಾಪಸ್‌ ಕಳುಹಿಸಲಿದೆ ಎಂಬುದು ಹಾಗೂ ರಾಜ್ಯ ಸರ್ಕಾರ ತೀರ್ಮಾನದ ಮೇಲೆ ನೂತನ ಡಿಜಿ-ಐಜಿ ನೇಮಕ ಅಂತಿಮವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಕಳುಹಿಸಿರುವ ಪಟ್ಟಿಯಲ್ಲಿ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಅಶಿತ್‌ ಮೋಹನ್‌ ಪ್ರಸಾದ್‌, ಪದಮ್‌ ಕುಮಾರ್‌ ಗರ್ಗ್‌, ಪ್ರವೀಣ್‌ ಸೂದ್‌ ಹೆಸರಿದ್ದು ಈ ಮೂವರಲ್ಲಿ ಒಬ್ಬರು ಆಯ್ಕೆಯಾಗುವ ಸಾಧ್ಯತೆಯಿದೆ. ಈ ಪೈಕಿ ಸಿಐಡಿಯ ಹಾಲಿ ಡಿಜಿ ಪ್ರವೀಣ್‌ ಸೂದ್‌ ಅವರಿಗೆ ಹುದ್ದೆ ದೊರೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಆಂತರಿಕ ಭದ್ರತಾ ದಳದ ಡಿಜಿಪಿ ಅಶಿತ್‌ ಮೋಹನ್‌ ಪ್ರಸಾದ್‌ ಅವರು ಪದಮ್‌ ಕುಮಾರ್‌ ಗರ್ಗ್‌ ಹಾಗೂ ಪ್ರವೀಣ್‌ ಸೂದ್‌ ಅವರಿಗಿಂತ ಒಂದು ವರ್ಷ ಸೇವಾ ಹಿರಿತನ ಹೊಂದಿದ್ದು, 2020ರ ಅಕ್ಟೋಬರ್‌ಗೆ ಸೇವೆ ಯಿಂದ ನಿವೃತ್ತರಾಗಲಿದ್ದಾರೆ. ಹೀಗಾಗಿ, ಡಿಜಿ-ಐಜಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿ ದ್ದಾರೆ.ನೇಮಕಾತಿ ಹಾಗೂ ತರಬೇತಿ ವಿಭಾಗದ ಡಿಜಿಪಿ ಪದಮ್‌ ಕುಮಾರ್‌ ಗರ್ಗ್‌ ಅವರು 2021ರಲ್ಲಿ ಸೇವೆಯಿಂದ ನಿವೃತ್ತರಾ ಗಲಿದ್ದು ಅವರೂ ನೂತನ ಡಿಜಿ- ಐಜಿ ನೇಮಕಾತಿಯ ಅರ್ಹ ಅಧಿಕಾರಿಗಳ ಪಟ್ಟಿಯಲ್ಲಿದ್ದಾರೆ.

ಈ ಹಿಂದೆ ನಗರ ಪೊಲೀಸ್‌ ಆಯುಕ್ತರಾಗಿದ್ದ ಸಿಐಡಿ ಡಿಜಿ ಪ್ರವೀಣ್‌ ಸೂದ್‌ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅವರ ಸೇವಾ ನಿವೃತ್ತಿ 2023ರಲ್ಲಿದೆ. ಒಂದು ವೇಳೆ ಪ್ರವೀಣ್‌ ಸೂದ್‌ ನೇಮಕಗೊಂಡರೆ ಮುಂದಿನ ನಾಲ್ಕು ವರ್ಷ ಡಿಜಿ-ಐಜಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಯುಪಿಎಸ್‌ಸಿ ಹಾಗೂ ರಾಜ್ಯಸರ್ಕಾರ ಅಧಿಕಾರಿಗಳ ಸೇವಾ ಹಿರಿತನ, ದಕ್ಷತೆ, ಬಡ್ತಿ ಸೇರಿ ಹಲವು ಅಂಶಗಳನ್ನು ಪರಿಗಣಿಸಿ ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.