T20: ಮತ್ತೆ ಎಡವಿದ ವಿಂಡೀಸ್; ಇಂಗ್ಲೆಂಡ್‌ಗೆ 7 ವಿಕೆಟ್ ಜಯ
2-0 ಮುನ್ನಡೆ ಸಾಧಿಸಿದ ಇಂಗ್ಲೆಂಡ್
Team Udayavani, Nov 11, 2024, 7:05 PM IST
ಬ್ರಿಜ್‌ಟೌನ್ (ಬಾರ್ಬಡಾಸ್): ಆತಿಥೇಯ ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಯಲ್ಲಿ ಇಂಗ್ಲೆಂಡ್‌ನ ಗೆಲುವಿನ ಆಟ ಮುಂದುವರಿದಿದೆ. “ಕೆನ್ಸಿಂಗ್ಟನ್ ಓವಲ್’ನಲ್ಲಿ ನಡೆದ ಸತತ 2ನೇ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ವೆಸ್ಟ್ ಇಂಡೀಸ್ 8 ವಿಕೆಟಿಗೆ 158 ರನ್ ಗಳಿಸಿದರೆ, ಇಂಗ್ಲೆಂಡ್ ಕೇವಲ 14.5 ಓವರ್‌ಗಳಲ್ಲಿ 3 ವಿಕೆಟಿಗೆ 161 ರನ್ ಬಾರಿಸಿತು. ಇಲ್ಲೇ ಆಡಲಾದ ಮೊದಲ ಪಂದ್ಯವನ್ನು ಇಂಗ್ಲೆಂಡ್ 8 ವಿಕೆಟ್‌ಗಳಿಂದ ಜಯಿಸಿತ್ತು. 3ನೇ ಮುಖಾಮುಖೀ ಗುರುವಾರ ಗ್ರಾಸ್ ಐಲೆಟ್‌ನಲ್ಲಿ ನಡೆಯಲಿದೆ. ಇದು 5 ಪಂದ್ಯಗಳ ಸರಣಿಯಾಗಿದೆ.
ಮೊದಲ ಪಂದ್ಯದಲ್ಲಿ ಸೆಂಚುರಿ ಬಾರಿಸಿದ ಫಿಲ್ ಸಾಲ್ಟ್ ಇಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಸಂಕಟಕ್ಕೆ ಸಿಲುಕಿದರು. ಆದರೆ ವಿಲ್ ಜಾಕ್ಸ್ (38) ಮತ್ತು ನಾಯಕ ಜಾಸ್ ಬಟ್ಲರ್ (83) ಸೇರಿಕೊಂಡು ದ್ವಿತೀಯ ವಿಕೆಟಿಗೆ 129 ರನ್ ಜತೆಯಾಟ ನಿಭಾಯಿಸಿ ಆತಂಕವನ್ನು ದೂರ ಮಾಡಿದರು. ಬಟ್ಲರ್‌ಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು. 45 ಎಸೆತ ನಿಭಾಯಿಸಿದ ಅವರು 8 ಬೌಂಡರಿ ಹಾಗೂ 6 ಸಿಕ್ಸರ್ ಸಿಡಿಸಿ ವಿಂಡೀಸ್ ಬೌಲರ್‌ಗಳನ್ನು ಗೋಳಾಡಿಸಿದರು.
ಈ ಪಂದ್ಯದಲ್ಲೂ ವೆಸ್ಟ್ ಇಂಡೀಸ್ ಸರದಿಯಲ್ಲಿ ಯಾರಿಂದಲೂ ಅರ್ಧ ಶತಕ ದಾಖಲಾಗಲಿಲ್ಲ. ನಾಯಕ ರೋವ¾ನ್ ಪೊವೆಲ್ ಸರ್ವಾಧಿಕ 43 ಹೊಡೆದರು. ಇಂಗ್ಲೆಂಡ್ ಪರ ಶಕಿಬ್ ಮಹಮೂದ್, ಲಿವಿಂಗ್‌ಸ್ಟೋನ್ ಮತ್ತು ಮೌಸ್ಲಿ ತಲಾ 2 ವಿಕೆಟ್ ಉರುಳಿಸಿದರು.
ಸಂಕ್ಷಿಪ್ತ ಸ್ಕೋರ್: ವೆಸ್ಟ್ ಇಂಡೀಸ್-8 ವಿಕೆಟಿಗೆ 158 (ಪೊವೆಲ್ 43, ಶೆಫರ್ಡ್ 22, ಲಿವಿಂಗ್‌ಸ್ಟೋನ್ 16ಕ್ಕೆ 2, ಮಹಮೂದ್ 20ಕ್ಕೆ 2, ಮೌಸ್ಲಿ 29ಕ್ಕೆ 2). ಇಂಗ್ಲೆಂಡ್-14.5 ಓವರ್‌ಗಳಲ್ಲಿ 3 ವಿಕೆಟಿಗೆ 161 (ಬಟ್ಲರ್ 83, ಜಾಕ್ಸ್ 38, ಲಿವಿಂಗ್‌ಸ್ಟೋನ್ ಔಟಾಗದೆ 23, ಶೆಫರ್ಡ್ 42ಕ್ಕೆ 2). ಪಂದ್ಯಶ್ರೇಷ್ಠ: ಜಾಸ್ ಬಟ್ಲರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ
INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್
Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್ ಒತ್ತಡ
BGT 2024: ಆಸೀಸ್ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ
Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ
MUST WATCH
ಹೊಸ ಸೇರ್ಪಡೆ
Madikeri: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು
Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ
Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.