Udupi; ರಾಷ್ಟ್ರೀಯವಾದಿ ಚಿಂತನೆಯ ಸರಕಾರ ರಚನೆಗೆ ಬಿಜೆಪಿ ಗೆಲ್ಲಿಸಿ: ಯಶ್‌ಪಾಲ್ ಸುವರ್ಣ
ಕೆಮ್ಮಣ್ಣು ಗ್ರಾಮ ವ್ಯಾಪ್ತಿಯ ಕಾರ್ಯಕರ್ತರ ಸಭೆ
Team Udayavani, Apr 27, 2023, 3:10 PM IST
ಮಲ್ಪೆ: ರಾಷ್ಟ್ರೀಯವಾದಿ ಚಿಂತನೆಯ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕಟಿಬದ್ಧವಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯ ಬಿಜೆಪಿ ಸರಕಾರವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರಲು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಶಕ್ತಿ ತುಂಬುವಂತೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಹೇಳಿದರು.
ಅವರು ಕೆಮ್ಮಣ್ಣು ಗ್ರಾ. ಪಂ. ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. 2024ರ ಲೋಕಸಭಾ ಚುನಾವಣೆಗೆ ಈ ಬಾರಿಯ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದ್ದು, ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಂದರ್ಭದಲ್ಲಿ ಮತ್ತೂಮ್ಮೆ ಡಬಲ್ ಇಂಜಿನ್ ಸರಕಾರ ದೇಶ ಹಾಗೂ ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಶಾಸಕ ರಘುಪತಿ ಭಟ್ ಮಾತನಾಡಿ, 3 ಬಾರಿ ನಗರಸಭಾ ಸದಸ್ಯರಾಗಿ ತಮ್ಮ ಕಾರ್ಯವೈಖರಿ ಹಾಗೂ ಬದ್ಧತೆಯ ಮೂಲಕ ಯುವ ನಾಯಕರಾಗಿ ಮೂಡಿಬಂದಿರುವ ಪಕ್ಷದ ಸಮರ್ಥ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಅವರನ್ನು ಉಡುಪಿಯ ಜನತೆ ಪ್ರಚಂಡ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಉಪಾಧ್ಯಕ್ಷ ಪ್ರಶಾಂತ್ ಕಾಂಚನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪಕ್ಷದ ಮುಖಂಡ ಸತೀಶ್ ನಾಯಕ್, ಮಾಲತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.