Kundapura ಅಪಾರ್ಟ್‌ಮೆಂಟ್‌ನಿಂದ ಬಿದ್ದು ಮಹಿಳೆ ಸಾವು
ಟೆರೇಸ್‌ನಲ್ಲಿದ್ದ ತೆಂಗಿನಕಾಯಿ ತರಲು ಹೋಗಿದ್ದರು
Team Udayavani, Mar 26, 2024, 12:41 AM IST
ಕುಂದಾಪುರ: ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಆಕಸ್ಮಿಕ ವಾಗಿ ಬಿದ್ದು ಮೃತಪಟ್ಟಿದ್ದಾರೆ.
ಅಡಿಟರ್ ಪ್ರತಾಪ್ ನಾಯಕ್ ಹಾಗೂ ಅವರ ಪತ್ನಿ ಲಕ್ಷ್ಮಿ (41) ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್ ಮೆಂಟಿನಲ್ಲಿ ವಾಸವಿದ್ದರು.
ರವಿವಾರ ಸಂಜೆ ಅಪಾರ್ಟ್‌ಮೆಂಟಿನ 5ನೇ ಮಹಡಿಯ ಟೆರೇಸ್‌ನಲ್ಲಿ ತೆಂಗಿನ ಕಾಯಿಗಳನ್ನು ಒಣಗಲು ಇಟ್ಟಿದ್ದನ್ನು ತರಲು ಹೋದ ಲಕ್ಷ್ಮಿ ಅವರು ಆಕಸ್ಮಿಕವಾಗಿ ಟೆರೇಸಿನ ಬದಿಯಲ್ಲಿ ಅಳವಡಿಸಿದ ಫೈಬರ್ ಶೀಟನ್ನು ಮೆಟ್ಟಿ ಅದು ತುಂಡಾಗಿ ಆಯತಪ್ಪಿ ಅಲ್ಲಿಂದ ಎರಡನೇ ಮಹಡಿಗೆ ಬಿದ್ದು, ತಲೆಗೆ ತೀವ್ರ ಗಾಯಗೊಂಡಿದ್ದರು.
ಸುದ್ದಿ ತಿಳಿದ ತತ್‌ಕ್ಷಣ ಪೊಲೀಸರು ಹಾಗೂ ಅಪಾರ್ಟ್‌ಮೆಂಟ್‌ನವರು ಲಿಫ್ಟ್ ಜಾಗದಲ್ಲಿ ಸಿಲುಕಿಕೊಂಡಿದ್ದ ಮಹಿಳೆಯನ್ನು ಹೊರತೆಗೆಯಲು ಸಾಹಸಪಟ್ಟರು. ಕೊನೆಗೆ ಲಿಫ್ಟ್‌ಗಾಗಿ ಅಳವಡಿಸಿದ್ದ ಕಬ್ಬಿಣದ ಸರಳನ್ನು ಕಾರ್ಯಾಚರಣೆ ಮೂಲಕ ಕತ್ತರಿಸಿ ದೇಹವನ್ನು ಹೊರತೆಗೆಯಲಾಯಿತು.
ಕುಂದಾಪುರ ಸರಕಾರಿ ಆಸ್ಪತ್ರೆಗೆ ತಂದಾಗ ಪರೀಕ್ಷಿಸಿದ ವೈದ್ಯರು ಲಕ್ಷ್ಮಿ ಅವರು ಮೃತಪಟ್ಟಿದ್ದಾಗಿ ತಿಳಿಸಿದರು. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.