HC: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಹೈಕೋರ್ಟ್ ಗರಂ
- ದುಶ್ಯಾಸನರ ಜಗತ್ತಿನಲ್ಲಿ ದ್ರೌಪದಿಯ ರಕ್ಷಣೆಗೆ ಕೃಷ್ಣನಿಲ್ಲ ಎಂದ ನ್ಯಾಯಪೀಠ
Team Udayavani, Dec 14, 2023, 10:10 PM IST
ಬೆಂಗಳೂರು: “ಮಹಾಭಾರತದ ಕಾಲದಲ್ಲಿಯೂ ಇಂತಹ ಘಟನೆ ನಡೆದಿಲ್ಲ. ಮಹಾಭಾರತದಲ್ಲಿ ದ್ರೌಪದಿಗೆ ಸಹಾಯ ಮಾಡಲು ಶ್ರೀಕೃಷ್ಣನಿದ್ದ. ಇಂದಿನ ಆಧುನಿಕ ಕಾಲಮಾನದಲ್ಲಿ ಈ ಬಡ ದ್ರೌಪದಿಗೆ (ಸಂತ್ರಸ್ತೆ) ಸಹಾಯ ಮಾಡುವವರು ಯಾರು? ದುರದೃಷ್ಟವಶಾತ್ ಇದು ದುರ್ಯೋಧನ ಮತ್ತು ದುಶ್ಯಾಸನರ ಜಗತ್ತು! ಇಲ್ಲಿ ಶ್ರೀಕೃಷ್ಣ ಪರಮಾತ್ಮನಂತಹ ಒಬ್ಬನೇ ಒಬ್ಬ ಇಲ್ಲ…’
ಇದು ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ ಪ್ರಕರಣ ಮತ್ತು ಅದರ ತನಿಖಾ ವಿಧಾನದ ಬಗ್ಗೆ ರಾಜ್ಯ ಹೈಕೋರ್ಟ್ ಮಮ್ಮಲ ಮರುಗಿದ ರೀತಿ.
ಘಟನೆ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಲೆ ಮತ್ತು ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ, “ನಾವು ಮೂಕರಾಗಿದ್ದೇವೆ. ನಾವು ಏನು ಹೇಳಬಹುದು? ನಾವು ನಮ್ಮನ್ನು ಮನುಷ್ಯರು ಎಂದು ಕರೆಸಿಕೊಳ್ಳಲು ಸಾಧ್ಯವಿಲ್ಲ. 21ನೇ ಶತಮಾನದಲ್ಲಿ ಮುಂದುವರಿಯುವುದರ ಬದಲು ಮತ್ತೆ 16ನೇ ಶತಮಾನಕ್ಕೆ ಹಿಂದಿರುಗಿದಂತೆ ಇದು. ಇದು ನಮಗೆಲ್ಲರಿಗೂ ನಾಚಿಕೆಗೇಡಿನ ಘಟನೆ’ ಎಂದು ದುಃಖ ವ್ಯಕ್ತಪಡಿಸಿತು.
ಸರಕಾರಕ್ಕೆ ತಾಕೀತು
ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ ಮುಂದಿನ ಸೋಮವಾರ, ಡಿ. 18ರಂದು ಹೆಚ್ಚುವರಿ ಸ್ಥಿತಿಗತಿ ವರದಿ ಸಲ್ಲಿಸಬೇಕು. ಅಂದಿನ ವಿಚಾರಣೆಯ ಸಂದರ್ಭದಲ್ಲಿ ಬೆಳಗಾವಿಯ ಪೊಲೀಸ್ ಆಯುಕ್ತ ಮತ್ತು ಪ್ರಕರಣದ ತನಿಖೆ ನಡೆಸುತ್ತಿರುವ ಸಹಾಯಕ ಪೊಲೀಸ್ ಆಯುಕ್ತರು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸರಕಾರಕ್ಕೆ ತಾಕೀತು ಮಾಡಿದೆ. ಹಾಗೆಯೇ ಸಂತ್ರಸ್ತೆಗೆ ಸಂತ್ರಸ್ತರ ಪರಿಹಾರ ಯೋಜನೆಯಡಿ ನೆರವು ನೀಡಲು ಪರಿಶೀಲಿಸುವಂತೆಯೂ ಸೂಚಿಸಿತು.
ಇದೊಂದು ಅಸಾಮಾನ್ಯ ಪ್ರಕರಣ, ನ್ಯಾಯಾಲಯ ಇದನ್ನು ಅಸಾಮಾನ್ಯ ರೀತಿಯಲ್ಲಿಯೇ ನಿರ್ವಹಣೆ ನಡೆಸಲಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.ಸಂತ್ರಸ್ತೆಯ ಪುತ್ರ ತನ್ನದೇ ಸಮುದಾಯದ ಯುವತಿಯೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರು ಹುಡುಗನ ತಾಯಿಯನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಸಂದರ್ಭದಲ್ಲಿ ತತ್‌ಕ್ಷಣ ಪೊಲೀಸರು ಸಂತ್ರಸ್ತೆಯ ನೆರವಿಗೆ ಏಕೆ ಧಾವಿಸಲಿಲ್ಲ? ಇಂಥ ಘಟನೆ ನಡೆಯುವುದಕ್ಕೆ ಅವಕಾಶ ಸಿಕ್ಕಿದ್ದಾದರೂ ಹೇಗೆ? ಪೊಲೀಸರ ಕೆಲಸ ತನಿಖೆ ಮಾಡುವುದಷ್ಟೇ ಅಲ್ಲ, ಘಟನೆಯನ್ನು ತಡೆಯುವುದೂ ಆಗಿದೆ. ಸ್ಥಳೀಯ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಪೀಠವು ಸರಕಾರವನ್ನು ಪ್ರಶ್ನಿಸಿತು.
ರಾಜ್ಯ ಸರಕಾರ ಸಲ್ಲಿಸಿರುವ ಸ್ಥಿತಿಗತಿ ವರದಿ ತೃಪ್ತಿ ತಂದಿಲ್ಲ. ವರದಿಯಲ್ಲಿ ಸಂತ್ರಸ್ತ ಮಹಿಳೆಗೆ ಆಪ್ತಸಮಾಲೋಚನೆ, ಚಿಕಿತ್ಸೆ ನೀಡಿರುವುದು, ಗಾಯದ ಮಾಹಿತಿ ನೀಡಿಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಟಿವಿಗಳಲ್ಲಿ ಹೇಳಿಕೆಗಳ ಬಗ್ಗೆ ಕ್ರಮಕ್ಕೆ ಮುಂದಾಗುವ ಮಹಿಳಾ ಆಯೋಗ ಇಂತಹ ಹೇಯ ಘಟನೆ ನಡೆದಾಗ ಯಾವ ಕ್ರಮ ಕೈಗೊಂಡಿದೆ? ಮಾನವ ಹಕ್ಕುಗಳ ಆಯೋಗ ಏನು ಮಾಡಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು ಹೆಚ್ಚುವರಿ ಸ್ಥಿತಿಗತಿ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.