CID: ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ ಹಸ್ತಾಂತರ
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಸರಕಾರದ ಕ್ರಮ
Team Udayavani, Dec 17, 2023, 11:28 PM IST
ಬೆಳಗಾವಿ: ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರಿಸಿದೆ.
ಮಹಿಳೆ ಮೇಲೆ ನಡೆದ ಹೀನ ಕೃತ್ಯದ ವಿರುದ್ಧ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಸರಕಾರದ ವಿರುದ್ಧ ಬಿಜೆಪಿಯೂ ಮುಗಿ ಬಿದ್ದಿದೆ. ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಒಂದು ವಾರದಿಂದ ಅನೇಕ ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.
ಪ್ರಕರಣದ ಹಾದಿ ತಪ್ಪಬಾರದು ಎಂಬ ಉದ್ದೇಶದಿಂದ ಎಡಿಜಿಪಿ (ಕಾನೂನು ಸುವ್ಯವಸ್ಥೆ ) ಆರ್.ಹಿತೇಂದ್ರ ಅವರು ಸಿಐಡಿ ಡಿಜಿಪಿಗೆ ತನಿಖೆ ನಡೆಸುವಂತೆ ಪತ್ರ ಬರೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿ ಸಿ 11 ಆರೋಪಿಗಳನ್ನು ಬಂ ಧಿಸಲಾಗಿದೆ. ಎಫ್ಐಆರ್ನಲ್ಲಿ 12 ಮಂದಿಯಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಆದರೆ ಶನಿವಾರ ಬೆಳಗಾವಿಗೆ ಭೇಟಿ ನೀಡಿದ್ದ ಬಿಜೆಪಿಯ ಸತ್ಯಶೋಧನಾ ಸಮಿತಿ ಪ್ರಕಾರ, ಪ್ರಕರಣದಲ್ಲಿ ಭಾಗಿಯಾದ ಇನ್ನೂ ಇಬ್ಬರು ಹೊರಗಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಗೊಳಗಾದ ಮಹಿಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಹಾಗೂ ಸರಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿತ್ತು. ಈ ಹಿನ್ನೆಲೆಯಲ್ಲಿ ಡಿ.18ರಂದು ಹೈಕೋರ್ಟ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ವರದಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.