ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ಎಚ್‌ಐವಿ ತಡೆಗಟ್ಟಲು ಜಾಗೃತಿ ಕಾರ್ಯ

Team Udayavani, Dec 2, 2021, 5:22 AM IST

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ಬಂಟ್ವಾಳ: ಲೈಂಗಿಕ ಸಂಪರ್ಕದ ಜತೆಗೆ ರಕ್ತದ ಮೂಲಕವೂ ಎಚ್‌ಐವಿ ಸೋಂಕು ಹರಡುವ ಅಪಾಯವಿದ್ದು, ಪ್ರಸ್ತುತ ಆರೋಗ್ಯ ಇಲಾಖೆಯು ಈ ಕಾಯಿಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಿಕಿತ್ಸೆ, ಜಾಗೃತಿ ಕಾರ್ಯವನ್ನು ನಡೆಸುತ್ತಿದೆ. ಎಚ್‌ಐವಿ ಸೋಂಕಿತರನ್ನು ಯಾರೂ ಕೂಡ ನಿಕೃಷ್ಟವಾಗಿ ಕಾಣದೆ ಅವರಿಗೂ ಸಮಾಜದಲ್ಲಿ ಬದುಕುವ ಹಕ್ಕಿದೆ ಎಂಬ ಸತ್ಯವನ್ನು ಅರಿಯಬೇಕಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌ ಹೇಳಿದರು.

ಅವರು ಬುಧವಾರ ಬಿ.ಸಿ.ರೋಡಿನ ಮೊಡಂ ಕಾಪು ಇನೆ#ಂಟ್‌ ಜೀಸಸ್‌ ಚರ್ಚ್‌ ಸಭಾಂಗಣದಲ್ಲಿ ದ.ಕ.ಜಿಲ್ಲಾಡಳಿತ, ಜಿ. ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಸ್ವಯಂಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ವಿಶ್ವ ಏಡ್ಸ್‌ ದಿನ-2021 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗರ್ಭಿಣಿ ಸೋಂಕಿತೆಯಾಗಿದ್ದರೆ ಮಗುವಿಗೂ ಅದು ಹರಡುವ ಅಪಾಯವಿದ್ದು, ಪ್ರಸ್ತುತ ಚಿಕಿತ್ಸೆಯ ಮೂಲಕ ಅದನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ. ರೋಗ ತಡೆಗಟ್ಟುವುದಕ್ಕೆ ಕೈಗೊಂಡ ಕ್ರಮಗಳಿಂದ ಪ್ರಸ್ತುತ ರೋಗದ ಪ್ರಮಾಣ 0.2 ಶೇ.ದಷ್ಟಿದೆ ಎಂದರು.

ಚರ್ಚ್‌ನ ಧರ್ಮಗುರು ವಂ| ವೆಲೇರಿಯನ್‌ ಡಿ’ಸೋಜಾ ಅವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಬಂಟ್ವಾಳ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪುಷ್ಪಲತಾ, ದೇರಳಕಟ್ಟೆ ಕಣಚೂರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ರೋಹನ್‌ ಮೊನೀಸ್‌, ಬಂಟ್ವಾಳ ನಗರ ಪಿಎಸ್‌ಐ ಅವಿನಾಶ್‌, ಸಂಚಾರ ಪಿಎಸ್‌ಐ ರಾಜೇಶ್‌ ಕೆ.ವಿ., ಭಾರತೀಯ ಮಾನವ ಹಕ್ಕುಗಳ ಸಂರಕ್ಷಣ ವೇದಿಕೆಯ ರಾಜ್ಯಾಧ್ಯಕ್ಷ ಕೋದಂಡರಾಮ, ಜಿಲ್ಲಾಧ್ಯಕ್ಷ ಇಕ್ಬಾಲ್‌ ಪಿ.ಎಂ., ಹೆಚ್ಚುವರಿ ಅಧ್ಯಕ್ಷ ಎಸ್‌. ಮುಸ್ತಾಫಾ, ವಿವಿಧ ರೋಟರಿ ಕ್ಲಬ್‌ಗಳ ಪ್ರಮುಖರಾದ ರಾಘವೇಂದ್ರ ಭಟ್‌, ಸತೀಶ್‌ಕುಮಾರ್‌ ಕೆ., ಪಿ.ಎ. ರಹೀಂ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಡಾ| ವಸಂತ ಬಾಳಿಗಾ ಮೊದಲಾದವರಿದ್ದರು.

ಇದನ್ನೂ ಓದಿ:ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ| ಬದ್ರುದ್ದೀನ್‌ ಎಂ. ಸ್ವಾಗತಿಸಿದರು. ಚಂದ್ರಶೇಖರ್‌ ಪುತ್ತೂರು ಕಾರ್ಯಕ್ರಮ ನಿರ್ವಹಿಸಿದರು.

ಸಮಾರಂಭಕ್ಕೆ ಪೂರ್ವಭಾವಿಯಾಗಿ ಬಿ.ಸಿ.ರೋಡಿನ ಸರ್ಕಲ್‌ ಬಳಿಯಿಂದ ಮೆರವಣಿಗೆ ನಡೆದಿದ್ದು, ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌. ಅವರು ಚಾಲನೆ ನೀಡಿದರು.

ಸಮುದಾಯದ ಜತೆ ಸಹಭಾಗಿತ್ವ ಅಗತ್ಯ
ಉಡುಪಿ: ಜಿಲ್ಲೆಯಲ್ಲಿ 2016ರಿಂದ 2021ರ ವರೆಗೆ ಗರ್ಭಿಣಿಯಿಂದ ಮಗುವಿಗೆ ಎಚ್‌ಐವಿ ಸೋಂಕು ಹರಡಿದ ಪ್ರಕರಣ ವರದಿಯಾಗಿಲ್ಲ ಎನ್ನುವುದು ಉಡುಪಿಗೆ ಹೆಮ್ಮೆಯ ವಿಚಾರವಾಗಿದೆ. ಸಮುದಾಯದ ಜತೆಗೆ ಸಹಭಾಗಿತ್ವ ಆದರೆ ಮಾತ್ರ ವಿವಿಧ ರೀತಿಯ ಸೋಂಕು ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ವಿದ್ಯಾರತ್ನ ಸ್ಕೂಲ್‌ ಕಾಲೇಜ್‌ ಆಫ್ ನರ್ಸಿಂಗ್‌, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್‌ ದಿನ -2021 ಜಾಗೃತಿ ಕಾರ್ಯಕ್ರಮವನ್ನು ಅಂಬಲ ಪಾಡಿಯ ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಎಚ್‌ಐವಿ ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಕೋವಿಡ್‌ನಿಂದ ಇವರನ್ನು ರಕ್ಷಿಸಬೇಕು. ಅಸಮಾನತೆಯನ್ನು ತೊಲಗಿಸಿದರೆ ಸಾಂಕ್ರಾಮಿ ಕತೆಯನ್ನು ತಡೆಗಟ್ಟಬಹುದು. ಅದಕ್ಕಾಗಿ ಸಮಾಜದ ಜನತೆ ಒಂದಾಗಿ ಜಾಗೃತಿಗಾಗಿ ಕೈ ಜೋಡಿಸಬೇಕು ಎಂದರು.

ಏಡ್ಸ್‌ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯದಲ್ಲಿ ಸೇವೆಗೈದವರನ್ನು ಗುರುತಿಸಿ, ಸಮ್ಮಾನಿಸಲಾಯಿತು. ಜಿ. ಪಂ. ಸಿಇಒ ಡಾ| ನವೀನ್‌ ಭಟ್‌, ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್‌., ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿಯ ಹಿರಿಯ ನಿರ್ದೇಶಕ ಗಣೇಶ್‌ ವಿ., ಲಯನ್ಸ್‌ ಕ್ಲಬ್‌ ಉಡುಪಿ ಲಕ್ಷ್ಯ ದ ರವಿರಾಜ್‌ ನಾಯಕ್‌, ವಂಡ್ಸೆ ಆಸರೆ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಸಂಜೀವ ವಂಡ್ಸೆ ಉಪಸ್ಥಿತರಿದ್ದರು. ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಎಸ್‌.ವಿ. ಮಾತನಾಡಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.