Udupi ವಿಶ್ವ ಬಂಟರ ಸಮ್ಮೇಳನ: ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮಕ್ಕೆ ಕ್ರಮ
ಸಮ್ಮೇಳನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Oct 28, 2023, 11:38 PM IST
ಉಡುಪಿ: ಸಮುದಾಯದ ಸಮಗ್ರ ಅಭಿವೃದ್ಧಿಗೆ ಮುಂ ದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಮ್ಮಿಕೊಂಡಿರುವ ಎರಡು ದಿನಗಳ ವಿಶ್ವ ಬಂಟರ ಸಮ್ಮೇಳನವನ್ನು ಶನಿವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ. ವಿಶ್ವಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿ ರುವುದು ಈ ಸಮುದಾಯದ ಹೆಗ್ಗಳಿಕೆ. ಈ ಸಮುದಾಯ ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವರು ಉದ್ಯಮ, ಕ್ರೀಡೆ, ಸಿನೆಮಾ, ಶಿಕ್ಷಣ, ಹೊಟೇಲ್ ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಎಲ್ಲೇ ಹೋದರೂ ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿ ಸುತ್ತಾರೆ. ತುಳುಭಾಷೆ ಮೇಲಿನ ಬಂಟರ ಪ್ರೇಮ ಮತ್ತು ಅಕ್ಕರೆ ಅನುಕ ರಣೀಯ. ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಗೆ ಗೌರವ ಕೊಟ್ಟರೆ ನಮ್ಮ ಸಂಸ್ಕೃತಿ ಇನ್ನಷ್ಟು ಬೆಳೆಯಲಿದೆ ಎಂದರು.
ಬಂಟರದು ಜಾತ್ಯತೀತ ಸಮು ದಾಯ. ಮನುಷ್ಯ ದ್ವೇಷವನ್ನು ಎಂದೂ ಬೆಂಬಲಿಸದು. ಯಾರು ಯಾರನ್ನೂ ದ್ವೇಷಿಸಬಾರದು. ಮನುಷ್ಯತ್ವ ಅತಿ ಮುಖ್ಯ. ಎಲ್ಲರೂ ವಿಶ್ವಮಾನವರಾಗಲು ಪ್ರಯತ್ನ ಮಾಡಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಬಾರಕೂರು ಭಾರ್ಗವ ಮಹಾಸಂಸ್ಥಾನದ ಡಾ| ವಿಶ್ವಸಂತೋಷ ಗುರೂಜಿ, ಶಾಸಕರಾದ ಯಶ್‌ಪಾಲ್ ಸುವರ್ಣ, ಅಶೋಕ್ ರೈ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜಿ.ಎ. ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಎಂಎಲ್‌ಸಿ ಐವನ್ ಡಿ’ಸೋಜಾ, ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಒಕ್ಕೂಟದ ಜತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾಕೂಟದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್, ಸಹ ಸಂಚಾಲಕ ಡಾ| ರೋಷನ್ ಶೆಟ್ಟಿ, ಸಾಂಸ್ಕೃತಿ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಸಂಯೋಜಕ ಮೋಹನ್ ಶೆಟ್ಟಿ ಉಪಸ್ಥಿತರಿದ್ದರು.
ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿ, ಪ್ರಸ್ತಾವನೆಗೈದು, ಬಂಟರ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಬೇಕು. ಬಂಟ ಸಮುದಾಯವರು ಎಲ್ಲರೊಂದಿಗೂ ಇದ್ದಾರೆ ಎಂದು ಹೇಳಿದರು.
ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್ ಶೆಟ್ಟಿ ವಂದಿಸಿದರು. ಕದ್ರಿ ನವನೀತ್ ಶೆಟ್ಟಿ ಹಾಗೂ ಸಾಹಿಲ್ ರೈ ನಿರೂಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೆನಪಿನ ಕಾಣಿಕೆಯಾಗಿ ಗಣಪತಿ ಹಾಗೂ ಲಕ್ಷ್ಮೀ ದೇವರ ಬೆಳ್ಳಿಮೂರ್ತಿ ನೀಡಲಾಯಿತು.
ಬಂಟರ ಕೊಡುಗೆ ಅಪಾರ: ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕ ಸಹಿತ ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬಂದಿದ್ದಾರೆ. ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತೀ ಕ್ಷೇತ್ರಗಳಲ್ಲೂ ಅವರನ್ನು ಕಾಣಬಹುದು. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂ ಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮರಿಸಿದರು.
ಹೊರ ರಾಜ್ಯ, ವಿದೇಶಗಳಲ್ಲಿನ ಸಮುದಾಯವನ್ನು ಒಗ್ಗೂಡಿಸುವ ಕೆಲಸ ವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಮಾಡಿದ್ದಾರೆ. ಹೊಟೇಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ ಎಂದರು.
ತುಳು ಭಾಷೆಯಲ್ಲಿ ಸಿಎಂ ಭಾಷಣ
ನಿಕಲೆಗ್ ಎನ್ನ ನಮಸ್ಕಾರ, ಎಂಚ್ ಉಲ್ಲೇರ್…ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಮೊದಲ ಸಾಲುಗಳು.ಸಮ್ಮೇಳನ ಉದ್ಘಾಟಿಸಿದ ಸಿದ್ದರಾಮಯ್ಯ ತುಳುವಿನಲ್ಲೇ ಭಾಷಣ ಆರಂಭಿಸಿದ್ದು ಎಲ್ಲರನ್ನೂ ಅಚ್ಚರಿಗೆ ಕಾರಣವಾಯಿತು. ಅನಂತರ ಅವರು ನನಗೆ ತುಳು ಮಾತನಾ ಡಲು ಬರುವುದಿಲ್ಲ. ಬರೆದುಕೊಟ್ಟಿದ್ದನ್ನು ಮಾತನಾಡಿದ್ದೇನೆ. ಅವಿಭಜಿತ ದ.ಕ. ಜಿಲ್ಲೆಯ ಇಬ್ಬರೂ ಒಟ್ಟಾದಾಗ ತುಳು ಭಾಷಯಲ್ಲೇ ಮಾತನಾಡುತ್ತಾರೆ. ತುಳು ಭಾಷಿಕರ ಭಾಷೆ ಮೇಲಿನ ಪ್ರೀತಿ ಎಲ್ಲರಿಗೂ ಮಾದರಿಎಂದರು.
ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಬಂಟರಿಗಿದೆ: ಖಾದರ್
ಸಮ್ಮೇಳನದಲ್ಲಿ ವಿಧಾನಸಭೆ ಸಭಾಧ್ಯಕ್ಷನಾಗಿ ಭಾಗವಹಿಸಿಲ್ಲ. ಬಂಟರ ಸಹೋದರನಾಗಿ ಪಾಲ್ಗೊಂಡಿದ್ದೇನೆ. ಬಂಟರ ಪ್ರೀತಿ, ವಿಶ್ವಾಸವು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿದೆ. ಸಮಾಜದ ಕಟ್ಟ ಕಡೆಯ ನಿರ್ಗತಿಕರು, ಶೋಷಿತರ, ದಲಿತ, ಅಲ್ಪಸಂಖ್ಯಾಕರು ಸಹಿತ ಎಲ್ಲ ವರ್ಗವರನ್ನು ಪ್ರತಿ ಗ್ರಾಮದಲ್ಲಿ ಅತ್ಯಂತ ಪ್ರೀತಿ, ವಿಶ್ವಾಸದಿಂದ ಎಲ್ಲರನ್ನು ಸಮಾನವಾಗಿ ನೋಡುವ ಪರಂಪರೆ, ಸಂಸ್ಕೃತಿಯು ಬಂಟ ಸಮುದಾಯಕ್ಕೆ ಇದೆ. ಈ ಸಂಸ್ಕೃತಿ, ಪರಂಪರೆಯನ್ನು ಯುವ ಸಮೂಹ ಮುಂದಕ್ಕೆ ಕೊಂಡೊಯ್ಯಬೇಕು ಎಂದು ಹೇಳಿದ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳದರು.
ನಿಗಮ ಘೋಷಣೆಗೆ ಕೋರಿಕೆ
ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿಯವರನ್ನು ಕೋರಿಕೊಂಡಿದ್ದರು. ಅದರಂತೆ ಮುಖ್ಯಮಂ ತ್ರಿಯವರು ತಮ್ಮ ಭಾಷಣದಲ್ಲಿ ಇಬ್ಬರ ಹೆಸರನ್ನು ಉಲ್ಲೇಖೀಸಿ, ಮುಂದಿನ ಬಜೆಟ್‌ನಲ್ಲಿ ನಿಗಮ ಘೋಷಿಸುವುದಾಗಿ ತಿಳಿಸಿದರು.
ಡಾ| ರಾಜೇಂದ್ರ ಕುಮಾರ್‌ಗೆ ಸಮ್ಮಾನ, ಗೌರವ
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸಮ್ಮಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಎಂ. ಶೆಟ್ಟಿ ಹಾಗೂ ಶಶಿರೇಖಾ ಆನಂದ ಶೆಟ್ಟಿ ದಂಪತಿ, ಕೆ. ಪ್ರಕಾಶ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ ಹಾಗೂ ನೈನಿತಾ ಪ್ರವೀಣ್ ಶೆಟ್ಟಿ ದಂಪತಿ, ಶಶಿಧರ ಶೆಟ್ಟಿ ಬರೋಡ, ರಾಜೇಶ್ ಎನ್. ಶೆಟ್ಟಿ, ದುಬಾೖ ಪ್ರವೀಣ್ ಶೆಟ್ಟಿ ವಕ್ವಾಡಿ, ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ, ಡಾ| ಎ. ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಡಾ| ದೇವಿಪ್ರಸಾದ್ ಶೆಟ್ಟಿ, ಅರವಿಂದ ಶೆಟ್ಟಿ, ಡಾ| ಪಿ.ವಿ. ಶೆಟ್ಟಿ, ಪ್ರಕಾಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ ಮೊದಲಾದವರನ್ನು ಶಾಲು ಹೊದೆಸಿ ಗೌರವಿಸಲಾಯಿತು.
ಬೃಹತ್ ಮೆರವಣಿಗೆಗೆ ಶ್ರೀಪಾದರಿಂದ ಚಾಲನೆ
ಉಡುಪಿ: ಸಮ್ಮೇಳನದ ಪೂರ್ವಭಾವಿಯಾಗಿ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮೈದಾನದವರೆಗೆ ಆಯೋಜಿಸಲಾದ ಬೃಹತ್ ಸಾಲಂಕೃತ ಮೆರವಣಿಗೆಗೆ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಬಾರಕೂರು ಭಾರ್ಗವ ಮಹಾ ಸಂಸ್ಥಾನದ ಶ್ರೀ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಬೋರ್ಡ್ ಹೈಸ್ಕೂಲ್‌ನಲ್ಲಿ ದೀಪ ಪ್ರಜ್ವಲಿಸಿ, ತೆಂಗಿನಕಾಯಿ ಒಡೆದು ಚಾಲನೆ ನೀಡಿ ಆಶೀರ್ವಚನ ನೀಡಿದರು. 62 ಬಂಟರ ಸಂಘದ ಸದಸ್ಯರು ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ಟ್ಯಾಬ್ಲೋಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದರು.
ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಒಕ್ಕೂಟ ಮತ್ತು ಬಂಟ್ಸ್ ಸಂಘದ ಪ್ರಮುಖ ಮುಖಂಡರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಪುರುಷೋತ್ತಮ ಪಿ. ಶೆಟ್ಟಿ, ಅಜಿತ್ ರೈ ಮಾಲಾಡಿ, ಪಟ್ಲ ಸತೀಶ್ ಶೆಟ್ಟಿ, ಬೈಕಾಡಿ ಸುಪ್ರಸಾದ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಉಳೂ¤ರು ಮೋಹನದಾಸ ಶೆಟ್ಟಿ, ಸುಚರಿತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಶೋಕ್ ಪಕ್ಕಳ ನಿರೂಪಿಸಿದರು.
ಕ್ರೀಡಾ ಸಂಗಮ ಸಮಾರೋಪ
ಉಡುಪಿ: ಸಮ್ಮೇಳನ ಪ್ರಯುಕ್ತ ಅಜ್ಜರಕಾಡು ಮೈದಾನದಲ್ಲಿ ನಡೆದ ಕ್ರೀಡಾಕೂಟ ಸಮಾರೋಪ ಶನಿವಾರ ಸಂಜೆ ಸಂಪನ್ನಗೊಂಡಿತು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮುದಾಯದ ಸಾಧಕರನ್ನು ಸಮ್ಮಾ ನಿಸಲಾಯಿತು. ಆ್ಯತ್ಲೆಟಿಕ್ ಸಹಿತ ವಿವಿಧ ಕ್ರೀಡೆಗಳಲ್ಲಿ (ವೈಯಕ್ತಿಕ ಕ್ರೀಡೆ) ವಿಜೇತರಾದವರಿಗೆ ಬಹು ಮಾನ ವಿತರಿಸಲಾಯಿತು. ಗುಂಪು ಕ್ರೀಡೆಗಳಲ್ಲಿ ವಿಜೇತರಾದವರಿಗೆ ಸಾಂಸ್ಕೃತಿಕ ವೈಭವದಲ್ಲಿ ಬಹುಮಾನ ವಿತರಿಸಲಾಗುವುದು.
ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು. ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶ ವಿಟಲದಾಸ ಸ್ವಾಮೀಜಿ, ಶಾಸಕರಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜ, ಡಾ| ವೈ. ಭರತ್ ಶೆಟ್ಟಿ, ಮಂಗಳೂರು ಮಹಾಪೌರ ಸುಧೀರ್ ಶೆಟ್ಟಿ ಕಣ್ಣೂರು, ಒಕ್ಕೂಟದ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಎಂ. ಶೆಟ್ಟಿ, ಶಶಿಧರ ಶೆಟ್ಟಿ ಬರೋಡ, ಪ್ರಮುಖರಾದ ನಳಿನ ಭೋಜ ಶೆಟ್ಟಿ, ಸಂತೋಷ್ ಶೆಟ್ಟಿ ಪುಣೆ, ಉದಯ ಶೆಟ್ಟಿ, ಶಿವಪ್ರಸಾದ್ ಹೆಗ್ಡೆ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಬಂಟರ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಒಕ್ಕೂಟದ ಕೋಶಾಧಿಕಾರಿ ಉಳೂ¤ರು ಮೋಹನ್ ದಾಸ್ ಶೆಟ್ಟಿ ವಂದಿಸಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿದರು. ಸಾಯಿನಾಥ್ ಶೆಟ್ಟಿ ಮುಂಡ್ಕೂರು, ನವೀನ್ ಎಡೆ¾ಮಾರ್ ನಿರೂಪಿಸಿದರು.
ವಿಶ್ವ ಬಂಟರ ಸಮ್ಮೇಳನದಲ್ಲಿ ಅ.29 ಸಾಂಸ್ಕೃತಿಕ ವೈಭವ
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುತ್ತಿರುವ ವಿಶ್ವ ಬಂಟರ ಸಮ್ಮೇಳನದ ಸಾಂಸ್ಕೃತಿಕ ವೈಭವ ರವಿವಾರ(ಅ.29) ನಗರದ ಅಮ್ಮಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿ ನಡೆಯಲಿದೆ. ಗೃಹ ಸಚಿವ ಡಾ| ಜಿ. ಪರಮೇಶ್ವರ್ ಭಾಗವಹಿಸಲಿದ್ದಾರೆ.
ಸ್ಥಿತ್ಯಂತರದಲ್ಲಿ ಬಂಟರು: ಶಿಕ್ಷಣ ಮತ್ತು ಉದ್ಯೋಗ, ಕವಿ ಸಮಯ-ಕಾವ್ಯನಮನ-ಚಿತ್ತ ಚಿತ್ತಾರ ಎರಡು ಗೋಷ್ಠಿಗಳು ನಡೆಯಲಿವೆ. ಸಿನೆಮಾ ತಾರೆಯರಾದ ಸುನಿಲ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಐಶ್ವರ್ಯ ರೈ ಬಚ್ಚನ್, ಶಿಲ್ಪಾ ಶೆಟ್ಟಿ ಕುಂದ್ರಾ, ರಿಷಬ್ ಶೆಟ್ಟಿ, ಗುರುಕಿರಣ್ ಶೆಟ್ಟಿ, ಶ್ರೀನಿಧಿ ಶೆಟ್ಟಿ, ಶಿವಧ್ವಜ, ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ರಾಜ್ ಬಿ. ಶೆಟ್ಟಿ, ರೂಪೇಶ್ ಶೆಟ್ಟಿ, ಯಶ್ ಸಹಿತ ಹಲವರು ಭಾಗವಹಿಸಲಿದ್ದಾರೆ. ವಿಶ್ವ ಬಂಟರ ಸಂಘಗಳ ತಂಡದಿಂದ ದಿನ ಪೂರ್ತಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಸಾಧಕರಿಗೆ ಸಮ್ಮಾನವೂ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿಯೇ ವಿನೂತನವಾಗಿ ವೇದಿಕೆ ನಿರ್ಮಿಸಲಾಗಿದೆ. ತುಳುನಾಡಿನ ಹಲವು ವಿಶೇಷಗಳು ಇಲ್ಲಿರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.