ಬೆಂಗಳೂರಿನಲ್ಲಿ ವಿಶ್ವದರ್ಜೆಯ ಸಿಟಿ: ಎಂ.ಬಿ.ಪಾಟೀಲ್
Team Udayavani, Nov 10, 2023, 11:47 PM IST
ಬೆಂಗಳೂರು: ರಾಜ್ಯದ ಆರ್ಥಿಕ ವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡುವುದರ ಜತೆಗೆ ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ವಿಶ್ವದರ್ಜೆಯ ಜ್ಞಾನ, ಆರೋಗ್ಯ, ಆವಿಷ್ಕಾರ ಮತ್ತು ಸಂಶೋಧನಾ ನಗರ(ಕೆಎಚ್‌ಐಆರ್ ಸಿಟಿ)ವನ್ನು ಅಭಿವೃದ್ಧಿಪಡಿಸಲು ಸರಕಾರ ಉದ್ದೇಶಿಸಿದ್ದು, ಬೆಂಗಳೂರಿನಿಂದ ಕೇವಲ 50-80 ಕಿ.ಮೀ. ದೂರದಲ್ಲಿ ಈ ನಗರ ತಲೆಯೆತ್ತಲಿದೆ.
ಜಗತ್ತಿನ ಪ್ರಸಿದ್ಧ ಕಂಪೆನಿಗಳು, ಕೇಂಬ್ರಿಡ್ಜ್ಗೆ
ಸರಿಸಮನಾದ ವಿಶ್ವವಿದ್ಯಾನಿಲಯಗಳು, ಆಸ್ಪತ್ರೆಗಳು, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು, ಅತ್ಯಾಧುನಿಕ ಸ್ಟಾರ್ಟ್‌ಅಪ್‌ಗ್ಳು, ತಯಾರಿಕೆ ಕಂಪೆನಿಗಳು ಈ ನಗರದಲ್ಲಿರಲಿವೆ. ಈಗಾಗಲೇ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸಿಲಿಕಾನ್ ಸಿಟಿಯು ಈ ಪ್ರಾಜೆಕ್ಟ್ನಿಂದ ಮತ್ತೂಂದು ಸ್ತರಕ್ಕೆ ಏರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಈ ಸಂಬಂಧ ಏರ್ಪಡಿಸಿದ್ದ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ದುಂಡು ಮೇಜಿನ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇವಿ ನೀತಿ ಇನ್ನು ಕ್ಲೀನ್ ಮೊಬಿಲಿಟಿ ನೀತಿ
ಇವಿ- ನೀತಿ’ (ವಿದ್ಯುತ್‌ಚಾಲಿತ ವಾಹನ ನೀತಿ)ಯನ್ನು ಕ್ಲೀನ್ ಮೊಬಿಲಿಟಿ ನೀತಿ’ ಎಂದು ಮರುನಾಮಕರಣ ಮಾಡಲು ಉದ್ದೇಶಿಸಿದ್ದು, ಹಲವು ಮಾರ್ಪಾಡುಗಳೊಂದಿಗೆ ಅಸ್ತಿತ್ವಕ್ಕೆ ಬರಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.