ಯಕ್ಷಗಾನದಿಂದ ಪುರಾಣ ಚಿಂತನೆಗಳ ಪ್ರಚಾರ: ಅದಮಾರು ಶ್ರೀ

17 ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

Team Udayavani, Nov 29, 2021, 5:23 AM IST

ಯಕ್ಷಗಾನದಿಂದ ಪುರಾಣ ಚಿಂತನೆಗಳ ಪ್ರಚಾರ: ಅದಮಾರು ಶ್ರೀ

ಉಡುಪಿ: ಉತ್ತಮ ಸಮಾಜ ನಿರ್ಮಾಣಕ್ಕೆ ಪುರಾಣ ಚಿಂತನೆಗಳು ಅಗತ್ಯವಾಗಿದ್ದು, ಅವುಗಳನ್ನು ಪ್ರಚುರಪಡಿಸುವಲ್ಲಿ, ಪ್ರಸ್ತುತಗೊಳಿಸುವಲ್ಲಿ ಯಕ್ಷಗಾನ ಕಲೆಯ ಪಾತ್ರ ಹಿರಿದು ಎಂದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ನುಡಿದರು.

ರವಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾರಂಗದ ವತಿಯಿಂದ 17 ಮಂದಿ ಹಿರಿಯ ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಸಮ್ಮಾನಿಸಿ ಅವರು ಆಶೀರ್ವಚನ ನೀಡಿದರು. ಉತ್ತಮ ಸಮಾಜ ನಿರ್ಮಾಣಕ್ಕೆ ಪುರಾಣದ ಚಿಂತನೆಗಳು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಯಕ್ಷಗಾನ ಸಹಿತ ಭಾರತದ ಎಲ್ಲ ಸ್ಥಳೀಯ ಕಲಾಪ್ರಕಾರಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದಾಗಬೇಕು ಎಂದು ಅನುಗ್ರಹಿಸಿದರು.

ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ಶಾಸಕ ಕೆ. ರಘುಪತಿ ಭಟ್‌, ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಯಕ್ಷಗಾನ ಚಿಂತಕ ಡಾ| ಚಂದ್ರಶೇಖರ ದಾಮ್ಲೆ ಇದ್ದರು.

ಇದನ್ನೂ ಓದಿ:ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಯಕ್ಷಗಾನ ಕಲಾವಿದರಾದ ಸುರೇಂದ್ರ ಆಲೂರು, ಶಾಂತಾರಾಮ ಆಚಾರ್‌ ಬ್ರಹ್ಮಾವರ, ಸದಾಶಿವ ಕುಲಾಲ್‌ ವೇಣೂರು, ಕೊರಗಪ್ಪ ರೈ ಮಡಾವು, ಕೃಷ್ಣ ಜಿ. ನಾಯ್ಕ ಬೇಡ್ಕಣಿ, ದಿನಕರ ಗೋಖಲೆ ಬೆಳ್ತಂಗಡಿ, ನಾರಾಯಣ ಶಬರಾಯ, ಬಿ. ಜನಾರ್ದನ ಗುಡಿಗಾರ, ಕೊಂಡದಕುಳಿ ರಾಮಚಂದ್ರ ಹೆಗಡೆ, ಕೃಷ್ಣ ಮೊಗವೀರ ಮೊಳಹಳ್ಳಿ, ಬೋಳ್ಗೆರೆ ಗಜಾನನ ಭಂಡಾರಿ, ವಿಶ್ವೇಶ್ವರ ರಾವ್‌ ಕಟೀಲು, ನಿಟ್ಟೂರು ಸುಬ್ರಹ್ಮಣ್ಯ ಭಟ್‌ ಹೊಸನಗರ, ಎ. ಸದಾನಂದ ಶೆಣೈ ಕಮಲಶಿಲೆ, ಅಪ್ಪುಕುಂಞ ಮಣಿಯಾಣಿ ಕಾಸರಗೋಡು, ರಾಜೀವ ಶೆಟ್ಟಿ ಹೊಸಂಗಡಿ, ಬಾಲಕೃಷ್ಣ ಶೆಟ್ಟಿ ಮುಂಡಾಜೆ ಅವರಿಗೆ ಪ್ರದಾನ ಮಾಡಲಾಯಿತು. ಸಂಸ್ಥೆಯ ಕೋಶಾಧಿಕಾರಿ ಮನೋಹರ್‌ ಕೆ. ಅವರಿಗೆ ಯಕ್ಷ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಮೃತಪಟ್ಟ ಯಕ್ಷಗಾನ ಕಲಾವಿದ ಗೋಪಾಲಗೌಡ ಅವರ ಪತ್ನಿಗೆ ಕಲಾರಂಗ ವತಿಯಿಂದ 50 ಸಾವಿರ ರೂ. ನೆರವು ನೀಡಲಾಯಿತು.ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌ ಸ್ವಾಗತಿಸಿ, ಎಚ್‌.ಎಂ. ಶೃಂಗೇಶ್ವರ ವಂದಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.