ರೈತರನ್ನು ಒಕ್ಕಲೆಬ್ಬಿಸದಂತೆ ಯಡಿಯೂರಪ್ಪ ಸೂಚನೆ
Team Udayavani, Oct 31, 2019, 9:53 PM IST
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಳಸೇಶ್ವರ ಇನಾಮ್ ಭೂಮಿ, ಸಾರಗೋಡು, ಹಾಗೂ ಮಸಗಲಿ ಮೀಸಲು ಅರಣ್ಯ ಒತ್ತುವರಿಗೆ ಸಂಬಂಧಪಟ್ಟಂತೆ ರೈತರನ್ನು ಒಕ್ಕಲೆಬ್ಬಿಸದೆ ಕೃಷಿ ಚಟುವಟಿಕೆಗೆ ಅವಕಾಶ ಕಲ್ಪಿಸಬೇಕು. ಈ ಸಂಬಂಧ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಇನಾಮ್ ಭೂಮಿ, ಮೀಸಲು ಅರಣ್ಯ ಒತ್ತುವರಿ ತೆರವಿಗೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಇದಕ್ಕೂ ಮೊದಲು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದೆ ಶೋಭಾ ಕರಂದ್ಲಾಜೆ, ಕೇರಳ ಮಾದರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ ಕೋರ್ಟ್‌ನಲ್ಲಿ ಪ್ರಮಾಣ ಪತ್ರ ಸಲ್ಲಿಸಿ ರೈತರ ಭೂಮಿ ಉಳಿಸಿಕೊಳ್ಳಬಹುದು. ಒಂದೊಮ್ಮೆ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸದೇ ಹೋದರೆ ಊರಿಗೆ ಊರನ್ನೇ ಸ್ಥಳಾಂತರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಊರುಗಳ ಸ್ಥಳಾಂತರವೇ ಸವಾಲು. ಜತೆಗೆ ಪರ್ಯಾಯ ಭೂಮಿ ಹುಡುಕುವುದು ಅದಕ್ಕಿಂತಲೂ ಕಷ್ಟಕರವಾಗಲಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅರಣ್ಯ ಭೂಮಿ ಎಂಬ ಕಾರಣಕ್ಕೆ ರೈತರನ್ನು ಒಕ್ಕಲೆಬ್ಬಿಸುತ್ತಿ¤ದ್ದಾರೆ. ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ, ರೈತರ ಹಿತ ಕಾಪಾಡಬೇಕು. ಇಂದು ಅರಣ್ಯ ಉಳಿದಿದೆ ಎಂದರೆ ಅದಕ್ಕೆ ಕಾರಣ ರೈತರು. ಯಾವ ರೈತರನ್ನೂ ಒಕ್ಕಲೆಬ್ಬಿಸಬಾರದು. ಅವರು ಕೃಷಿ ಚಟುವಟಿಕೆ ನಡೆಸಲು ಅವಕಾಶ ನೀಡಬೇಕು. ನ್ಯಾಯಾಲಯಕ್ಕೆ ಈ ಬಗ್ಗೆ ಕೂಡಲೇ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿದ್ದ ಕೆಲ ಶಾಸಕರು, ಈಗಾಗಲೇ ರೈತರ ವಿರುದ್ಧ ದೂರುಗಳನ್ನು ದಾಖಲಿಸಲಾಗಿದೆ. ಅವರು ವಿಚಾರಣೆಗೆಂದು ಬೆಂಗಳೂರಿಗೆ ಓಡಾಡುವಂತಾಗಿದ್ದು, ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.
ದೂರು ದಾಖಲಿಸದಿರಲು ತಾಕೀತು
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ರೈತರ ವಿರುದ್ಧ ದೂರು ದಾಖಲಿಸಬಾರದು. ರೈತರ ಹಿತದೃಷ್ಟಿಯಿಂದ ಅವರ ಜಮೀನಿಗೆ ಸಂಬಂಧಪಟ್ಟಂತೆ ತೊಂದರೆ ನೀಡಬಾರದು. ಸುಪ್ರೀಂ ಕೋರ್ಟ್‌ಗೆ ಸರ್ಕಾರದಿಂದಲೇ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಡಿಕೆ ಗುಟ್ಕಾ ಅಲ್ಲ, ಅಡಿಕೆಯಿಂದ ಆರೋಗ್ಯಕ್ಕೆ ಹಾನಿಯೂ ಇಲ್ಲ. ಹಾಗಾಗಿ ಅಡಿಕೆಯನ್ನು ನಿಷೇಧಿಸಬಾರದು ಎಂದು ಪ್ರಧಾನಿಯವರಿಗೆ ಮನವಿ ಮಾಡಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಸರ್ಕಾರ ಈ ವಿಷಯವಾಗಿ ನ್ಯಾಯಾಲಯಕ್ಕೆ ಹೋಗಿತ್ತು. ಇದರ ಸಾಧಕ- ಬಾಧಕದ ಬಗ್ಗೆ ಚರ್ಚೆಯಾಗಿದೆ. ನ್ಯಾಯಾಲಯದಲ್ಲಿ ಹೋರಾಟ ನಡೆಸಲು ವಕೀಲರನ್ನು ನೇಮಿಸಲಾಗುವುದು. ಶಾಸಕ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಅಡಿಕೆ ಬಗ್ಗೆಯೂ ಒಂದು ಸಂಶೋಧನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.