ಯಡಿಯೂರಪ್ಪ ಭ್ರಮೆಯಲ್ಲಿದ್ದಾರೆ: ವೇಣು

Team Udayavani, Apr 28, 2019, 3:00 AM IST

yadiyuy

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ವೀರಪ್ಪ ಮೊಯ್ಲಿ ಸೋಲುತ್ತಾರೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭ್ರಮೆಯಲ್ಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ತಿರುಗೇಟು ನೀಡಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ 23ರಂದು ಲೋಕಸಭೆ ಚುನಾವಣೆ ಫ‌ಲಿತಾಂಶದ ಪರಿಣಾಮವನ್ನು ಮೊದಲು ಎದುರಿಸುವವರೇ ಯಡಿಯೂರಪ್ಪ. ಚುನಾವಣೆ ಫ‌ಲಿತಾಂಶದ ನಂತರ ಯಡಿಯೂರಪ್ಪ ಅವರೇ ತೊಂದರೆ ಅನುಭವಿಸುತ್ತಾರೆ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಟಕ ನಡೆಯುವುದಿಲ್ಲ. ದೇಶದ ರಾಜಕಾರಣವೇ ಬದಲಾಗುತ್ತಿದೆ. ಕರ್ನಾಟಕದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕೇಂದ್ರದಲ್ಲೂ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಬಿಜೆಪಿಯವರು ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಿಸುವ ಕನಸು ಕಾಣುತ್ತಿದ್ದಾರೆ. ರಾಜ್ಯದ ಜನರು ಮೈತ್ರಿ ಪಕ್ಷದ ಪರವಾಗಿದ್ದಾರೆ. ಬಿಜೆಪಿಯವರು ತಮ್ಮ ಜೊತೆ 20 ಕಾಂಗ್ರೆಸ್‌ ಶಾಸಕರಿದ್ದಾರೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಹೇಳಿದರು.

ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡುವುದಾಗಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಊಹಾತ್ಮಕ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಮೇ 23ಕ್ಕೆ ಎಲ್ಲರೂ ಸೇರಿ ಸಂಭ್ರಮ ಆಚರಣೆ ಮಾಡುತ್ತೇವೆ ಎಂದು ಹೇಳಿದರು.

ದಿನೇಶ್‌ ಗುಂಡೂರಾವ್‌ ಹೇಳಿಕೆ: ಲೋಕಸಭೆ ಚುನಾವಣೆಯ ನಂತರ ಸಚಿವರಿಂದ ವರದಿ ಪಡೆದುಕೊಂಡಿದ್ದೇವೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸೇರಿ ಇಪ್ಪತ್ತಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ಎರಡು ಉಪ ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ನಾವೆಲ್ಲರೂ ಕ್ಷೇತ್ರಗಳನ್ನು ಹಂಚಿಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.