ನಾಳೆಯಿಂದ ಯಡಿಯೂರಪ್ಪ , ನಳಿನ್ ಪ್ರಚಾರ
ಉಪ ಚುನಾವಣೆ ಪ್ರಚಾರಕ್ಕೆ ಆಡಳಿತ ಪಕ್ಷದಿಂದ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ
Team Udayavani, Nov 22, 2019, 6:00 AM IST
ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಶನಿವಾರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತರ ಕರ್ನಾಟಕ ಭಾಗದಿಂದ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ದಕ್ಷಿಣ ಭಾಗದಿಂದ ಪ್ರಚಾರ ಪ್ರವಾಸ ಆರಂಭಿಸಲಿದ್ದು, ಸಾರ್ವಜನಿಕ ಸಭೆ, ಕಾರ್ಯಕರ್ತರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
33 ವರ್ಷಗಳ ಬಳಿಕ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರ ಗಳಿವೆ. ಹಾಗಾಗಿ ರಾಜ್ಯ ಸರಕಾರವನ್ನು ಸುಸ್ಥಿರಗೊಳಿಸಲು ಮತ ನೀಡುವಂತೆ ಮನವಿ ಮಾಡಲಾಗುವುದು ಎಂದು ಉಪ ಚುನಾವಣ ಉಸ್ತುವಾರಿಯಾದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಉಪಚುನಾವಣೆಗೆ ಬಿಜೆಪಿ ಸಿದ್ಧತೆ ಮಾಡಿಕೊಂಡಿದ್ದು, ನಮ್ಮ “ಕೇಡರ್’ ಕೂಡ ಸಜ್ಜಾಗಿದೆ. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು ಅವರಲ್ಲದೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಬಿ.ಶ್ರೀರಾಮುಲು ಸಹಿತ ಇತರ ನಾಯಕರು ನಾನಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.
ರವಿವಾರದೊಳಗೆ ಬೂತ್ ಸಮಿತಿ ರಚನೆ
ಉಪ ಚುನಾವಣೆ ನಡೆದಿರುವ 15 ಕ್ಷೇತ್ರಗಳ 4,185 ಬೂತ್‌ಗಳಲ್ಲಿ ರವಿವಾರದೊಳಗೆ ಬೂತ್ ಸಮಿತಿ ರಚನೆಯಾಗಲಿದೆ. ಪ್ರತಿ ಮಹಾಶಕ್ತಿ ಕೇಂದ್ರ ಮಟ್ಟದಲ್ಲಿ ಐದು ಮಂದಿಯ ಸಮಿತಿ ರಚಿಸಲಾಗಿದೆ. ಪ್ರತಿ ಬೂತ್‌ನ ಕಾರ್ಯ ಕರ್ತರ ವಾಟ್ಸ್‌ಆ್ಯಪ್ ಗ್ರೂಪ್ ಸಹ ರವಿವಾರದೊಳಗೆ ರೂಪುಗೊಳ್ಳಲಿದೆ. ಈ ಗ್ರೂಪ್‌ನ ಮೂಲಕ ಬೂತ್ ಮಟ್ಟಕ್ಕೆ ವಿಷಯಗಳನ್ನು ತಲುಪಿಸಲಾಗುವುದು. ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಂ ಮೂಲಕವೂ ನಾಯಕರು, ಅಭ್ಯರ್ಥಿಗಳ ಚುನಾವಣ ಪ್ರಚಾರ ಪ್ರಸಾರವಾಗಲಿದೆ. ಎಂಟು ಮೋರ್ಚಾಗಳ ಪದಾಧಿಕಾರಿಗಳು ಆಯಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ವಿವಾದದ ಹಿನ್ನೆಲೆಯಲ್ಲಿ ಬದಲು
ಕೆ.ಆರ್.ಪೇಟೆ ಕ್ಷೇತ್ರದ ಚುನಾವಣ ಉಸ್ತುವಾರಿಯನ್ನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಬದಲಿಗೆ ಉಪ ಮುಖ್ಯಮಂತ್ರಿ ಡಾ|ಸಿ.ಎನ್.ಅಶ್ವತ್ಥ ನಾರಾಯಣ ಅವರಿಗೆ ವಹಿಸಲಾಗಿದೆ. ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ವಿವಾದ ಸೃಷ್ಟಿಯಾದ ಅನಂತರ ಉಪ ಚುನಾವಣ ಸಂದರ್ಭದಲ್ಲಿ ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ ಉಸ್ತುವಾರಿ ಬದಲಾವಣೆ ಮಾಡಲಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.