ಸ್ಥಾನ ಭದ್ರಪಡಿಸಿಕೊಳ್ಳುವತ್ತ ಯಡಿಯೂರಪ್ಪ ಚಿತ್ತ


Team Udayavani, Nov 17, 2019, 3:10 AM IST

stana-badra

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ರಚನೆಗೆ ನೆರವಾದರೆಂಬ ಕಾರಣರಾದ ಅನರ್ಹ ಶಾಸಕರ ಪೈಕಿ 13 ಮಂದಿಗೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಹೆಚ್ಚು ಸ್ಥಾನಗಳನ್ನು ಗೆದ್ದು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ. ಹಾಗಾಗಿ, ತಾವೇ ಖುದ್ದಾಗಿ ಬಂಡಾಯಗಾರರ ಮನವೊಲಿಸುತ್ತಿದ್ದು, ಬಿರುಸಿನ ಪ್ರಚಾರಕ್ಕೂ ಅಣಿಯಾಗುತ್ತಿದ್ದಾರೆ.

ಇನ್ನೊಂದೆಡೆ, ಸಮುದಾಯದಲ್ಲಿ ಪರ್ಯಾಯ ನಾಯಕರಾಗಿ ಬೆಳೆಯಲಿದ್ದಾರೆ ಎಂದೇ ಬಿಂಬಿತವಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿ ಟಿಕೆಟ್‌ ಕೈತಪ್ಪಿರುವುದು ಸಹ ಯಡಿಯೂರಪ್ಪ ಅವರ ಜಾಣ್ಮೆಯ ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆ ಮೂಲಕ ವರಿಷ್ಠರ ಮೂಲಕವೇ ಸಮುದಾಯ ಹಾಗೂ ಸರ್ಕಾರದಲ್ಲಿ ಪರ್ಯಾಯ ನಾಯಕರಾಗಿ ರೂಪುಗೊಳುವ ಲಕ್ಷ್ಮಣ ಸವದಿ ಅವರ ಪ್ರಯತ್ನಕ್ಕೂ “ಬ್ರೇಕ್‌’ ಹಾಕುವ ಪ್ರಯತ್ನ ನಡೆದಂತಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ರಾಷ್ಟ್ರಪತಿ ಆಳ್ವಿಕೆ ಹೇರುವ ಇಲ್ಲವೇ ಮಧ್ಯಂತರ ಚುನಾ ವಣೆ ಎದುರಾಗುವ ಮಾತು ಕೇಳಿ ಬಂದಿತ್ತು. ಹಾಗಿದ್ದರೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ವಿಧಾನಸಭೆಯಲ್ಲಿ ಬಹುಮತವನ್ನೂ ಸಾಬೀತುಪಡಿಸಿ ಸರ್ಕಾರ ಮುನ್ನಡೆಸುತ್ತಿದ್ದಾರೆ. ನಂತರದ ದಿನಗಳಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸೇರಿದಂತೆ ಇತರ ವಿಚಾರಗಳಲ್ಲಿ ಹೈಕಮಾಂಡ್‌ ಸೂಚನೆ, ಆಡಳಿತಕ್ಕೆ ಸಂಬಂಧಪಟ್ಟಂತೆ ಕೆಲ ನಿರ್ದೇಶನ ಗಳನ್ನು ನೀಡಿತ್ತು. ಅದನ್ನೆಲ್ಲಾ ಯಡಿಯೂರಪ್ಪ ಅವರು ಒಪ್ಪಿಕೊಂಡೇ ಪಾಲಿಸುತ್ತಾ ಬಂದಿದ್ದು, ಪರೋಕ್ಷವಾಗಿ ಹೈಕಮಾಂಡ್‌ ನಿಯಂತ್ರಣ ಹೇರುತ್ತಿದೆ ಎಂಬ ಮಾತು ಕೇಳಿ ಬಂದಿತ್ತು.

ಹೆಚ್ಚು ಕ್ರಿಯಾಶೀಲರಾದ ಸಿಎಂ: ಅನರ್ಹಗೊಂಡ ಶಾಸಕರಿಗೆ ಸದ್ಯ ಘೋಷಣೆಯಾಗಿರುವ ಉಪಚುನಾವಣೆಯಲ್ಲೇ ಸ್ಪರ್ಧಿಸಲು ಸುಪ್ರೀಂಕೋರ್ಟ್‌ ಅವಕಾಶ ನೀಡುತ್ತಿದ್ದಂತೆ ಯಡಿಯೂರಪ್ಪ ಹೆಚ್ಚು ಕ್ರಿಯಾಶೀಲರಾಗಿದ್ದು, ಉಪಚುನಾವಣೆಯನ್ನು ಎದುರಿಸಲು ಭರ್ಜರಿಯಾಗಿಯೇ ಸಜ್ಜಾಗುತ್ತಿದ್ದಾರೆ. ಮೊದಲಿಗೆ ಅನರ್ಹ 17 ಶಾಸಕರ ಪೈಕಿ ರೋಷನ್‌ ಬೇಗ್‌ ಹೊರತುಪಡಿಸಿ ಉಳಿದ ಎಲ್ಲರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆರ್‌.ರೋಷನ್‌ ಬೇಗ್‌ ಇಲ್ಲವೇ ಅವರ ಪುತ್ರ ರುಮಾನ್‌ ಬೇಗ್‌ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಶಿವಾಜಿನಗರ ಕ್ಷೇತ್ರದ ಟಿಕೆಟ್‌ ನೀಡುವ ಬಗ್ಗೆಯೂ ಯಡಿಯೂರಪ್ಪ ಚಿಂತಿಸಿದ್ದರು. ಆದರೆ, ಸಂಘ ಪರಿವಾರದ ಸೂಚನೆಯಂತೆ ಅವರೊಬ್ಬರನ್ನು ಪಕ್ಷಕ್ಕೆ ಸೇರ್ಪಡೆ ಮಾಡಕೊಂಡಿಲ್ಲ ಎನ್ನಲಾಗಿದೆ.

ಪಕ್ಷ ಸೇರ್ಪಡೆ ಮಾತ್ರವಲ್ಲದೆ ಉಪಚುನಾವಣೆ ಎದುರಾಗಿರುವ 15 ಕ್ಷೇತ್ರಗಳ ಪೈಕಿ 13 ಕಡೆ ಅನರ್ಹ ಶಾಸಕರಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಣೆಬೆನ್ನೂರು ಕ್ಷೇತ್ರದಿಂದ ಆರ್‌. ಶಂಕರ್‌ ಬಿಜೆಪಿಯಿಂದ ಕಣಕ್ಕಿಳಿದರೆ ಹಿನ್ನಡೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನೀಡಿಲ್ಲ. ಬದಲಿಗೆ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಆಯ್ಕೆ ಮಾಡಿ ಸಚಿವರನ್ನಾಗಿ ಮಾಡುವ ಭರವಸೆಯನ್ನು ಸಾರ್ವಜನಿಕವಾಗಿಯೇ ನೀಡಿದ್ದಾರೆ. ಅನರ್ಹ ಶಾಸಕರ ಪಕ್ಷ ಸೇರ್ಪಡೆ ಹಾಗೂ ಟಿಕೆಟ್‌ ಹಂಚಿಕೆ ಬಳಿಕ ಕೊಟ್ಟ ಮಾತಿಗೆ ಎಂದೂ ತಪ್ಪುವುದಿಲ್ಲ ಎಂದು ಯಡಿ ಯೂರಪ್ಪ ಅವರು ಪುನರುಚ್ಚರಿಸುವ ಮೂಲಕ ಪಕ್ಷದಲ್ಲಿ ತಮ್ಮ ಮಾತು- ನಿರ್ಧಾರವೇ ನಿರ್ಣಾಯಕ ಎಂಬುದನ್ನು ಪುನರುಚ್ಚರಿಸಿದ್ದಾರೆ. ಆ ಮೂಲಕ ಒಂದು ಹಂತದ ಹಿಡಿತ ಸಾಧಿಸಿದಂತಾಗಿದೆ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿ ಬಂದಿದೆ.

ಬಂಡಾಯ ಉಪಶಮನಕ್ಕೆ ಒತ್ತು: ಅನರ್ಹ ಶಾಸಕರಿಗೆ ಟಿಕೆಟ್‌ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ಪಕ್ಷದ ಮುಖಂಡರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರನ್ನು ಖುದ್ದು ಯಡಿಯೂರಪ್ಪ ಅವರೇ ಸಮಾಧಾನಪಡಿಸುತ್ತಿರುವುದು ಗಮನಾರ್ಹ ಸಂಗತಿ. ಎಸ್‌.ಟಿ.ಸೋಮಶೇಖರ್‌, ಕೆ.ಗೋಪಾಲಯ್ಯ ಅವರ ಕ್ಷೇತ್ರದಲ್ಲಿ ಬಂಡಾಯದ ಅಪಸ್ವರ ತೆಗೆದವರೊಂದಿಗೆ ಯಡಿಯೂರಪ್ಪ ಅವರೇ ಮಾತುಕತೆ ನಡೆಸಿದ್ದು, ಅವರೆಲ್ಲ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸು ವುದಾಗಿ ಪ್ರಕಟಿಸಿದ್ದಾರೆ. ಉಳಿದ ಕ್ಷೇತ್ರಗಳಲ್ಲೂ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಸಚಿವರು, ಕೇಂದ್ರ ಸಚಿವರ ಮೂಲಕ ಮನವೊಲಿಕೆ ಪ್ರಯತ್ನ ನಡೆಸುವ ಮೂಲಕ ಭಿನ್ನಮತ ತಲೆದೋರದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಸ್ಥಾನ ಭದ್ರಕ್ಕೆ ಆದ್ಯತೆ: ಅನರ್ಹ ಶಾಸಕರು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ತಾವೇ ಖುದ್ದು ಪ್ರಚಾರ ನಡೆಸಲು ಯಡಿಯೂರಪ್ಪ ಸಜ್ಜಾಗಿದ್ದಾರೆ. ಜತೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉಪಚುನಾವಣೆಯನ್ನು ಎದುರಿಸಬೇಕು ಎಂದು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಸದ್ಯ ವಿಧಾನಸಭೆಯಲ್ಲಿ ಬಿಜೆಪಿ 105 ಶಾಸಕರ ಬಲವಿದ್ದು, ಪಕ್ಷೇತರ ಎಚ್‌.ನಾಗೇಶ್‌ ಬೆಂಬಲ ನೀಡಿದ್ದು 106 ಸದಸ್ಯ ಬಲವಿದೆ. ಉಪಚುನಾವಣೆ ನಡೆದಿರುವ 15 ಕ್ಷೇತ್ರಗಳ ಪೈಕಿ 10 ಸ್ಥಾನ ಗೆದ್ದರೂ ಬಿಜೆಪಿ ಸರ್ಕಾರವು ಸ್ಪಷ್ಟ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಕ್ಕೆ ಏರಲಿದೆ. ಆ ಮೂಲಕ ಬಾಕಿಯಿರುವ ಮೂರು ವರ್ಷಗಳ ಆಡಳಿತವನ್ನೂ ಪೂರ್ಣಗೊಳಿಸುವ ಲೆಕ್ಕಾಚಾರದಲ್ಲಿ ಯಡಿಯೂರಪ್ಪ ಅವರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಹೆಚ್ಚು ಸ್ಥಾನ ಗೆದ್ದು ಸ್ಥಾನ ಭದ್ರಪಡಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ.

ಸವದಿ ವೇಗಕ್ಕೆ ಬ್ರೇಕ್‌: ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಯಡಿಯೂರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಅಲ್ಲದೇ ನೆರೆ ಪರಿಹಾರಕ್ಕೆ ಮನವಿ ಮಾಡುವ ಸಂಬಂಧ ಯಡಿಯೂರಪ್ಪ ಅವರು ಪ್ರಧಾನಿ ಸೇರಿದಂತೆ ವರಿಷ್ಠರ ಭೇಟಿಗೆ ಪ್ರಯತ್ನ ನಡೆಸಿದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಲಕ್ಷ್ಮಣ ಸವದಿಯವರು ನೇರವಾಗಿ ವರಿಷ್ಠರನ್ನು ಭೇಟಿಯಾಗಿ ಚರ್ಚಿಸುತ್ತಿದ್ದುದು ಅಸಮಾಧಾನ ಹೆಚ್ಚಿಸಿದ್ದರೂ, ಯಡಿಯೂರಪ್ಪ ಸುಮ್ಮನಿದ್ದರು. ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಹಿತ ಕಾಪಾಡುವುದು, ಕೊಟ್ಟ ಮಾತು ಉಳಿಸಿ ಕೊಳ್ಳಬೇಕಾದ ಕಾರಣ ಅಥಣಿ ಕ್ಷೇತ್ರದ ಟಿಕೆಟ್‌ ಅನ್ನು ಮಹೇಶ್‌ ಕುಮಟಳ್ಳಿ ಅವರಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಆರು ತಿಂಗಳಲ್ಲಿ ವಿಧಾನ ಸಭೆಗೆ ಆಯ್ಕೆಯಾಗಿ ಉಪಮುಖ್ಯಮಂತ್ರಿ ಸ್ಥಾನ ಭದ್ರಪಡಿಸಿಕೊಳ್ಳುವ ಲಕ್ಷ್ಮಣ ಸವದಿ ಅವರ ಲೆಕ್ಕಾಚಾರ ತಲೆಕೆಳಗಾದಂತಾಗಿದೆ ಎನ್ನಲಾಗಿದೆ.

* ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.