ಯೆಮನ್ ಸೋಂಕಿಗೆ ಮೊದಲ ಬಲಿ
Team Udayavani, May 1, 2020, 3:14 PM IST
ಯೆಮೆನ್: ಯೆಮೆನ್ ದೇಶದಲ್ಲಿ ಕೋವಿಡ್-19ನಿಂದ ಇಬ್ಬರು ಮೃತಪಟ್ಟಿದ್ದು, ಮೊದಲ ಸಾವಿನ ಪ್ರಕರಣ ದಾಖಲಾಗಿದೆ. ಜತೆಗೆ ಕೆಲವು ಕ್ಲಸ್ಟರ್ ಪ್ರದೇಶಗಳಲ್ಲಿ ಸೋಂಕು ಹರಡುತ್ತಿದೆ ಎಂಬ ಕಳವಳ ವ್ಯಕ್ತವಾಗುತ್ತಿದ್ದು, ಈ ಬಿಕ್ಕಟ್ಟನ್ನು ಎದುರಿಸಲು ದೇಶ ವಿಫಲವಾಗುತ್ತಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ.
ಯೆಮೆನ್‌ನಿಂದ ಸುಮಾರು 540 ಕಿ.ಮೀ ದೂರದ ಅಲ್-ಶಿಹರ್‌ಪಟ್ಟಣದ ಬಂದರು ಕೆಲಸಗಾರನಲ್ಲಿ ಮೊದಲು ಸೋಂಕು ಪತ್ತೆಯಾಗಿದ್ದು, ಆ ವ್ಯಕ್ತಿ ಚೇತರಿಕೆ ಕಂಡಿದ್ದಾನೆ. ಆದರೆ ಈಗ ಇಬ್ಬರು ಮೃತಪಟ್ಟಿದ್ದಾರೆ.
ಲಾಕ್‌ಡೌನ್ ತೆರವುಗೊಳಿಸುವಂತೆ ಪ್ರತಿಭಟನೆ
ಪ್ರತ್ಯೇಕತಾವಾದಿ ಆಡಳಿತವನ್ನು ನಡೆಸುತ್ತಿರುವ ಇಲ್ಲಿನ ಸ್ಥಳೀಯ ನಗರ ಅಡೆನ್‌ನಲ್ಲಿ ಬುಧವಾರ ಐದು ಹೊಸ ಪ್ರಕರಣಗಳು ದೃಢಪಟ್ಟಿದ್ದು, ಮತ್ತೇ 2 ವಾರ ಲಾಕ್‌ಡೌನ್ ವಿಧಿಸಲಾಗಿತ್ತು. ಆದರೆ ಈ ನಡುವೆಯೂ ಇಲ್ಲಿನ ಸ್ಥಳೀಯರು ಕಳೆದ ವಾರ ಲಾಕ್‌ಡೌನ್ ತೆರವುಗೊಳಿಸುವಂತೆ ಪ್ರತಿಭಟನೆ ನಡೆಸಿದ್ದರು.
ಐದು ವರ್ಷದ ಹಿಂದೆ ನಡೆದ ಯುದ್ಧದ ವೇಳೆ ಇಲ್ಲಿನ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದ್ದು, ಪ್ರಸ್ತುತ ಎದುರಾಗಿರುವ ಸೋಂಕು ಬಿಕ್ಕಟ್ಟನ್ನು ಎದುರಿಸಲು ಕನಿಷ್ಠ ಮಟ್ಟದ ಸವಲತ್ತೂ¤ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ಪರೀಕ್ಷಾ ಮಾದರಿಯನ್ನು ಅನುಸರಿಸುವಲ್ಲಿ ದೇಶ ವಿಫಲಗೊಂಡಿದೆ.
ಕೆಲ ವೈದ್ಯರು ಮತ್ತು ಕೆಲವು ವೈದ್ಯಕೀಯ ನೆರವು ಸಂಸ್ಥೆಗಳು ಯೆಮನ್‌ನಲ್ಲಿ ಸೋಂಕು ವ್ಯಾಪಕವಾಗಿ ಹರಡಲಿದೆ ಎಂದು ಎಚ್ಚರಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಯು ಯೆಮೆನ್‌ನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಶೇ. 93ರಷ್ಟು ಜನರು ಸೋಂಕಿಗೆ ಒಳಗಾಗಬಹುದು ಎಂದು ಎಚ್ಚರಿಸಿದೆ.
ಈಗಾಗಲೇ ಯೆಮೆನ್ ದೇಶ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಲಕ್ಷಾಂತರ ಮಂದಿ ಆಹಾರವಿಲ್ಲದೇ ಕಂಗಾಲಾಗಿದ್ದಾರೆ ಇದರೊಂದಿಗೆ ಆರೋಗ್ಯ ವ್ಯವಸ್ಥೆ ಸರಿ ಇಲ್ಲದ ಯೆಮನ್‌ನಲ್ಲಿ ಸೋಂಕು ತೀವ್ರಗೊಂಡರೆ ಮಹಾ ದುರಂತವೇ ಘಟಿಸುತ್ತದೆ ಎನ್ನುತ್ತಾರೆ ವಿಶ್ವಸಂಸ್ಥೆಯ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.