Karnataka: ಕೈಗೆ ಲಿಂಗಾಯತ ಸಂಕಷ್ಟ- ಡಿಸಿಎಂ ಹುದ್ದೆ ತಣ್ಣಗಾದ ಬೆನ್ನಲ್ಲೇ ಮತ್ತೂಂದು ವಿವಾದ
Team Udayavani, Oct 1, 2023, 2:26 AM IST
ಬೆಂಗಳೂರು: ಡಿಸಿಎಂ ಹುದ್ದೆ ವಿವಾದಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ ಬೆನ್ನಲ್ಲೇ ಈಗ ಲಿಂಗಾಯತರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕೂಗು ಬಲವಾಗಿ ಕೇಳಿ ಬರುತ್ತಿದೆ.
ಲಿಂಗಾಯತ ಸಮಾಜ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ
ಈಗ ವಿವಾದದ ಕಿಡಿ ಹೊತ್ತಿಸಿದೆ. ಲಿಂಗಾಯತ ಅಧಿಕಾರಿಗಳನ್ನು ನಿರ್ಲಕ್ಷಿಸಲಾಗುತ್ತಿದೆ, ಅವರಿಗೆ ತೊಂದರೆ ಆಗಿದೆ ಎಂದು ಶಾಮನೂರು ಬೆಂಗಳೂರಿನಲ್ಲಿ ಹೇಳಿದ್ದರು. ದಾವಣ ಗೆರೆಯಲ್ಲಿ ಶನಿವಾರ ಇದನ್ನು ಪುನರುಚ್ಚರಿಸಿರುವ ಅವರು, ವೀರಶೈವ- ಲಿಂಗಾಯತ ಸಮಾಜ ಒಳ ಪಂಗಡಗಳನ್ನು ಮರೆತು ಒಗ್ಗೂಡಿದರೆ ಲಿಂಗಾಯತರದೇ ಸರಕಾರ ತರುವುದು ಕಷ್ಟವಲ್ಲ ಎಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಸಮಾಜ ಪಕ್ಷವನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸಿತ್ತು. ಈಗ ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಮನೂರು ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸರಕಾರ – ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಶಾಮನೂರು ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಸಚಿವ ಸಂಪುಟದಲ್ಲಿ ಏಳು ಲಿಂಗಾಯತ ಸಚಿವರಿದ್ದಾರೆ ಎಂದಿದ್ದಾರೆ.
ಹೇಳಿಕೆಗೆ ಈಗಲೂ ಬದ್ಧ
ದಾವಣಗೆರೆಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತ ನಾಡಿದ ಶಾಮನೂರು, ಈ ಸರಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿರು ವುದು ನಿಜ. ಅವರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಹೀಗಾಗಿಯೇ ಈ ವಿಚಾರ ಈಗ ಬಹಿರಂಗವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿರುಗೇಟಿಗೆ ಪ್ರತಿಕ್ರಿಯಿಸಿ, ನಾನು ಸಚಿವರ ಬಗ್ಗೆ ಅಲ್ಲ, ಅಧಿಕಾರಿಗಳ
ಬಗ್ಗೆ ಹೇಳಿದ್ದೇನೆ ಎಂದರು.
ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ನಮ್ಮ ಸಂಪುಟದಲ್ಲಿದ್ದು, ಈ ಸಮು ದಾಯದ ಅಧಿಕಾರಿಗಳಿಗೆ ಅನ್ಯಾಯವಾಗದು. ಕಾಂಗ್ರೆಸ್ ನಲ್ಲಿ ಯಾವುದೇ ಜಾತಿ, ಧರ್ಮದವರಿಗೂ ಅನ್ಯಾಯವಾಗುವುದಿಲ್ಲ.-ಸಿದ್ದರಾಮಯ್ಯ, ಸಿಎಂ
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಲಿ.
-ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ
ಮುಖ್ಯಮಂತ್ರಿಯವರು ಈ ವಿಷಯವನ್ನು ಗಮನಿಸುತ್ತಾರೆ. ಅಂತಹದೇನಾದರೂ ಇದ್ದರೆ ಸರಿಪಡಿಸಿಕೊಳ್ಳುತ್ತೇವೆ. ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ನೇಮಿಸುವ ಕೆಲಸವನ್ನು ನಮ್ಮ ಸರಕಾರ ಮಾಡುವುದಿಲ್ಲ. ಸಮರ್ಥರು, ಪ್ರಾಮಾಣಿಕರು ಕೆಲಸ ಮಾಡುತ್ತಾರೆ. ನಾವು ಜನರ ಪರ ಕೆಲಸ ಮಾಡುತ್ತೇವೆ.
-ಡಾ| ಪರಮೇಶ್ವರ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.