15 ವರ್ಷಗಳಲ್ಲೇ ಸಿಎಂ ಆಗುತ್ತಿರುವ ಮೊದಲ ಶಾಸಕ
ಮೊದಲ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದ ಯೋಗಿ
Team Udayavani, Mar 11, 2022, 7:10 AM IST
ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉತ್ತರಪ್ರದೇಶವು “ಶಾಸಕ’ರೊಬ್ಬರನ್ನು “ಮುಖ್ಯಮಂತ್ರಿ’ಯಾಗಿ ಪಡೆಯುತ್ತಿದೆ.
ಹೌದು 2017ರಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುವಾಗ ಅವರು ಅದಾಗಲೇ 5 ಬಾರಿ ಲೋಕಸಭೆ ಸಂಸದರಾಗಿ ಆಯ್ಕೆ ಗೊಂಡಿದ್ದರು. ಅನಂತರ ಅವರು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಬಂದರು. ಅದಕ್ಕೂ ಮೊದಲು ಮುಖ್ಯಮಂತ್ರಿಯಾಗಿದ್ದ ಎಸ್‌ಪಿ ನಾಯಕ ಅಖೀಲೇಶ್ ಯಾದವ್ ಅವರೂ ಎಂಎಲ್‌ಸಿ ಆಗಿಯೇ ಸಿಎಂ ಆದವರು. ಬಿಎಸ್‌ಪಿ ನಾಯಕಿ ಮಾಯಾವತಿ ಅವರೂ ಇದೇ ರೀತಿ ಪರಿಷತ್ ಬಾಗಿಲಿನಿಂದ ಪಟ್ಟಕ್ಕೇರಿದವರು.
ಆದರೆ, ಈಗ ಮೊದಲ ಬಾರಿಗೆ ಯೋಗಿ ಅವರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಬಿಜೆಪಿಯ ಸಿಎಂ ಅಭ್ಯರ್ಥಿಯಾಗಿದ್ದ ಯೋಗಿ ಹಾಗೂ ಎಸ್‌ಪಿ ಸಿಎಂ ಅಭ್ಯರ್ಥಿಯಾಗಿದ್ದ ಅಖೀಲೇಶ್ ಇಬ್ಬರೂ ಈ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದರು. ವಿಶೇಷವೆಂದರೆ, ಇವರಿಬ್ಬರೂ ಗೆಲುವು ಸಾಧಿಸಿದ್ದಾರೆ.
2017ರಲ್ಲಿ ವಿಧಾನಪರಿಷತ್‌ನಿಂದ ಆಯ್ಕೆಗೊಂಡ ಉತ್ತರಪ್ರದೇಶದ ನಾಲ್ಕನೇ ಸಿಎಂ ಎಂಬ ಖ್ಯಾತಿಗೆ ಯೋಗಿ ಪಾತ್ರರಾಗಿದ್ದರು. 1999ಕ್ಕಿಂತ ಹಿಂದೆ ಉ.ಪ್ರದೇಶದಲ್ಲಿ ಎಂಎಲ್‌ಸಿಯೊಬ್ಬರು ಸಿಎಂ ಆಗಿದ್ದಿಲ್ಲ. 1999ರಲ್ಲಿ ಬಿಜೆಪಿಯ ರಾಮ್ ಪ್ರಕಾಶ್ ಗುಪ್ತಾ ಅವರು ರಾಜ್ಯದ ಮೊದಲ ಎಂಎಲ್‌ಸಿ ಸಿಎಂ ಆದರು. ಆದರೆ, ಅವರು ಒಂದು ವರ್ಷವೂ ಅಧಿಕಾರ ಪೂರ್ಣಗೊಳಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.