ನಿಮ್ಮ ತಪ್ಪು ನಮಗೆ ಕೆಟ್ಟ ಹೆಸರು;ಗೈರಾದ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಟಿ
Team Udayavani, Aug 1, 2019, 1:46 PM IST
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಾರದೊಳಗೆ ಬಿ.ಎಸ್. ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ವಿಧಾನಸೌಧ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ವಿಭಾಗಕ್ಕೆ ಸಿಎಂ ಗುರುವಾರ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿಯಲ್ಲಿ ಅಧಿಕಾರಿಗಳು ಇಲ್ಲದಿರುವುದು ಅವರ ಗಮನಕ್ಕೆ ಬಂದಿದೆ. ಕಚೇರಿಯ ಸಮಯವಾದರೂ ಇನ್ನೂ ಸರಿಯಾಗಿ ಅಧಿಕಾರಿಗಳು ಬಾರದಿರುವುದನ್ನು ನೋಡಿ ಸಿಎಂ ತರಾಟೆಗೆ ತೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ತಪ್ಪು ನಮಗೆ ಕೆಟ್ಟ ಹೆಸರು:
ಕಚೇರಿಗಳಿಗೆ ಸರಿಯಾದ ಸಮಯಕ್ಕೆ ಅಧಿಕಾರಿಗಳು ಬಾರದೇ ಇದ್ದರೆ ಕೆಲಸಗಳು ಸಕಾಲದಲ್ಲಿ ನಡೆಯುವುದಿಲ್ಲ. ಇದರಿಂದ ನಮಗೆ ಕೆಟ್ಟ ಹೆಸರು ಬರುವುದು ಮಾತ್ರವಲ್ಲದೇ ಆಡಳಿತ ಯಂತ್ರವೂ ಕೆಟ್ಟು ಹೋಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಕೆಲಸದ ಸಮಯದಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಇರಲೇಬೇಕು. ಒಂದು ವೇಳೆ ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಇ. ವಿ. ರಮಣ ರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.