Health: ಝೀಕಾ ವೈರಸ್- ಕೊಡಗಿನಲ್ಲಿ ಕಟ್ಟೆಚ್ಚರ
Team Udayavani, Nov 6, 2023, 8:17 PM IST
ಮಡಿಕೇರಿ: ಕೊರೊನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕೆ.ಎಂ. ಸತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಜ್ವರ, ಕೆಂಪಾದ ಕಣ್ಣು, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪುರಕ್ತ ಮಿಶ್ರಿತ ಗುಳ್ಳೆಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದೆ. ಹೀಗಾಗಿ ಯಾವುದೇ ಜ್ವರವಿರಲಿ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಮನೆ ಪರಿಸರ, ಅಂಗಡಿ ಸಹಿತ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು. ಆರೋಗ್ಯ ಸಿಬ್ಬಂದಿ/ಆಶಾ ಕಾರ್ಯಕರ್ತೆಯರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು ಎಂದವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.