Independence Day: 2047ರ ವೇಳೆಗೆ ‘ವಿಕಸಿತ ಭಾರತ’ ಸಂಕಲ್ಪಕ್ಕೆ ಬದ್ಧ: ಪ್ರಧಾನಿ ಮೋದಿ
Team Udayavani, Aug 15, 2024, 8:54 AM IST
ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವನ್ನಾಗಿ ಮಾಡುವ ನಮ್ಮ ಸಂಕಲ್ಪಕ್ಕೆ ಬದ್ಧರಾಗಿದ್ದೇವೆ. ವಿಕಸಿತ ಭಾರತ ಎಂಬುದು ಬರೇ ಒಂದು ಪದವಷ್ಟೇ ಅಲ್ಲ ಇದು 140 ಕೋಟಿ ಭಾರತೀಯರ ಸಂಕಲ್ಪ ಮತ್ತು ಕನಸುಗಳ ಪ್ರತಿಬಿಂಬವಾಗಿದೆ’ ಎಂದು ಹೇಳಿದರು.
ದೇಶವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು. ಬೆಳಗ್ಗೆ 7 ಗಂಟೆ ಸುಮಾರಿಗೆ ರಾಜ್‌ಘಾಟ್ ತಲುಪಿ ಗಾಂಧಿ ಸ್ಮೃತಿಯಲ್ಲಿ ಪುಷ್ಪ ನಮನ ಸಲ್ಲಿಸಿದ ನಂತರ ಪ್ರಧಾನಿ ಕೆಂಪುಕೋಟೆಗೆ ಆಗಮಿಸಿದರು.
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ. ನಮ್ಮ ರೈತರು ಮತ್ತು ಸೈನಿಕರು ರಾಷ್ಟ್ರ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಪವಿತ್ರ ಸ್ಮರಣೆಗೆ ನಾವು ನಮನ ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದರು. ಪ್ರಕೃತಿ ವಿಕೋಪದಲ್ಲಿ ಪ್ರಾಣ ಕಳೆದುಕೊಂಡವರನ್ನು ನೋವಿನಿಂದ ಸ್ಮರಿಸಲಾಗುತ್ತದೆ ಮತ್ತು ಅವರ ಜೊತೆ ದೇಶ ನಿಂತಿದೆ ಎಂದು ಪ್ರಧಾನಿ ಹೇಳಿದರು.
ವಸಾಹತುಶಾಹಿ ಆಡಳಿತದ ವಿರುದ್ಧ ದೇಶ ಸುದೀರ್ಘ ಹೋರಾಟ ನಡೆಸಿತು. ಹೋರಾಟಕ್ಕೆ ಸ್ವಾತಂತ್ರ್ಯ ಎಂಬ ಒಂದೇ ಗುರಿ ಇತ್ತು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲಾಗುವುದು. ಅದಕ್ಕಾಗಿ ಸುಧೀರ್ಘ ಪ್ರಯತ್ನಗಳ ಅಗತ್ಯವಿದ್ದು, ಪ್ರತಿಯೊಬ್ಬ ನಾಗರಿಕನ ಕನಸು ಇದರಲ್ಲಿ ಪ್ರತಿಫಲನಗೊಳ್ಳಬೇಕು ಎಂದು ತಿಳಿಸಿದರು.
ಈ ವರ್ಷದ ಆಚರಣೆಯ ಥೀಮ್, ‘ವಿಕ್ಷಿತ್ ಭಾರತ್ @ 2047’, ಅಂದರೆ 2047 ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮುನ್ನಡೆಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ಈ ವರ್ಷದ ಆಚರಣೆಯು ವಿಶಿಷ್ಟ ಭಾರತ 2047 ಅನ್ನು ಆಧರಿಸಿದೆ. ಈ ಬಾರಿಯ ಸಮಾರಂಭದಲ್ಲಿ ರೈತರು, ಬುಡಕಟ್ಟು ಜನಾಂಗದ ಮಹಿಳೆಯರು ಸೇರಿದಂತೆ ಆರು ಸಾವಿರ ಮಂದಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ವಿವಿಧ ರಾಜ್ಯಗಳ ಸುಮಾರು 2000 ಕಲಾವಿದರು ಕೆಂಪು ಕೋಟೆಯಲ್ಲಿ ಪ್ರದರ್ಶನ ನೀಡಿದರು. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಭಾರತ ತಂಡವೂ ಸಂಭ್ರಮಾಚರಣೆಯ ಭಾಗವಾಗಿತ್ತು. ಏತನ್ಮಧ್ಯೆ, ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಎಲ್ಲಾ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.
Addressing the nation on Independence Day. https://t.co/KamX6DiI4Y
— Narendra Modi (@narendramodi) August 15, 2024
ಮಹಿಳೆಯರ ವಿರುದ್ಧದ ಅಪರಾಧಗಳಿಗೆ ತ್ವರಿತ ತನಿಖೆ, ಶಿಕ್ಷೆ ಅಗತ್ಯ:
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತನಿಖೆ ಮತ್ತು ಕಠಿಣ ಶಿಕ್ಷೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ಆಕ್ರೋಶ ವ್ಯಕ್ತಗೊಳ್ಳುತ್ತಿದ್ದು, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ” ಎಂದು ಹೇಳಿದ ಪ್ರಧಾನಿ ಮೋದಿ, “ಸಾರ್ವಜನಿಕ ನಂಬಿಕೆಗಾಗಿ ತ್ವರಿತ ತನಿಖೆ ಮತ್ತು ಶಿಕ್ಷೆಯ ಅಗತ್ಯವಿದೆ” ಎಂದು ಹೇಳಿದರು.
ನೈಸರ್ಗಿಕ ವಿಕೋಪಗಳು ಆತಂಕಕ್ಕೆ ಕಾರಣ:
ಕೇರಳಡಾ ವಯನಾಡು ಸೇರಿದಂತೆ ಉತ್ತರಾಖಂಡ್ ನಲ್ಲಿ ಇತ್ತೀಚಿಗೆ ನಡೆದ ನೈಸರ್ಗಿಕ ವಿಕೋಪಗಳಿಂದಾಗಿ ರಾಷ್ಟ್ರ ಎದುರಿಸುತ್ತಿರುವ ಸವಾಲುಗಳನ್ನು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ. ಹಲವಾರು ಜನರು ತಮ್ಮ ಕುಟುಂಬ ಸದಸ್ಯರನ್ನು, ಆಸ್ತಿಯನ್ನು ನೈಸರ್ಗಿಕ ವಿಕೋಪದಲ್ಲಿ ಕಳೆದುಕೊಂಡಿದ್ದಾರೆ; ರಾಷ್ಟ್ರವೂ ನಷ್ಟವನ್ನು ಅನುಭವಿಸಿದೆ. ಪ್ರಧಾನಿ ಮೋದಿಯವರು ರಾಷ್ಟ್ರಕ್ಕೆ ತಮ್ಮ ಬೆಂಬಲದ ಭರವಸೆ ನೀಡಿದರು, “ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.