ಸತತ ಸೋಲಿನ ಬಳಿಕ ಬ್ರಾಡ್ ಕಾಸ್ಟರ್ಸ್ ವಿರುದ್ಧ ರೇಗಾಡಿದ ಮುಂಬೈ ನಾಯಕ ರೋಹಿತ್ ಶರ್ಮಾ
Team Udayavani, Apr 7, 2022, 12:42 PM IST
ಪುಣೆ: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿಯ ಐಪಿಎಲ್ ಕೂಟದಲ್ಲಿ ನಿರಾಶದಾಯಕ ಪ್ರದರ್ಶನ ನೀಡುತ್ತಿದೆ. ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಪಡೆ ಸೋಲನುಭವಿಸಿದೆ.
ಬುಧವಾರ ರಾತ್ರಿ ಪುಣೆಯ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ಜಯ ಸಾಧಿಸಿದೆ. ಪ್ಯಾಟ್ ಕಮಿನ್ಸ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಶ್ರೇಯಸ್ ಅಯ್ಯರ್ ಪಡೆ ಇನ್ನೂ ನಾಲ್ಕು ಓವರ್ ಬಾಕಿ ಇರುವಂತೆ ಜಯ ಸಾಧಿಸಿತು.
ಕೇವಲ 14 ಎಸೆತದಲ್ಲಿ ಅರ್ಧಶತಕ ಬಾರಿಸಿದ ಪ್ಯಾಟ್ ಕಮಿನ್ಸ್, ಐಪಿಎಲ್ ಇತಿಹಾಸದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಜಂಟಿ ದಾಖಲೆ ಬರೆದರು. ಈ ಹಿಂದೆ ಕೆಎಲ್ ರಾಹುಲ್ ಕೂಡಾ 14 ಎಸೆತದಲ್ಲಿ ಅರ್ಧ ಶತಕ ಬಾರಿಸಿದ್ದರು.
ಇದನ್ನೂ ಓದಿ:ಫಾರ್ ರಿಜಿಸ್ಟ್ರೇಶನ್; ದಿಯಾ ಹೀರೋ; ಲವ್ ಮಾಕ್ಟೇಲ್ ಹೀರೋಯಿನ್!
ಪಂದ್ಯದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಶನ್ ನಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಸಿಬ್ಬಂದಿ ವಿರುದ್ಧ ಸಿಟ್ಟಿಗೆದ್ದರು. “ಕಾಮೆಂಟೇಟರ್ ಪ್ರಶ್ನೆ ಸರಿಯಾಗಿ ಕೇಳುತ್ತಿಲ್ಲ, ವಾಲ್ಯುಮ್ ಜಾಸ್ತಿ ಮಾಡಿ” ಎಂದು ಕೋಪದಿಂದ ಹೇಳಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Me at every party when my favourite song starts playing.#TATAIPL2022 #KKRHaiTaiyaar #MI @ImRo45 pic.twitter.com/mm7PUVT7XP
— Saurav Chakraborty (@saurav_MUFC_98) April 6, 2022
ಸೋಲಿಗೆ ಕಾರಣ ತಿಳಿಸಿದ ರೋಹಿತ್, ”15ನೇ ಓವರ್ ತನಕವೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದೆವು. ಆದರೆ ಕಮಿನ್ಸ್ ಅದ್ಭುತವಾಗಿ ಆಡಿದರು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.