ಲಸಿತ್ ಮಾಲಿಂಗ ದಾಖಲೆ ಮುರಿಯಲು ಡ್ವೇನ್ ಬ್ರಾವೋಗೆ ಬೇಕು ಕೇವಲ ಒಂದು ವಿಕೆಟ್
Team Udayavani, Mar 31, 2022, 12:56 PM IST
ಮುಂಬೈ: ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು ಮುಖಾಮುಖಿಯಾಗುತ್ತಿದೆ. ಇಂದಿನ ಪಂದ್ಯದಲ್ಲಿ ಸಿಎಸ್ ಕೆ ಬೌಲರ್ ಡ್ವೇನ್ ಬ್ರಾವೋ ಅವರು ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಲಕ್ನೋ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಕಿತ್ತರೆ ಬ್ರಾವೋ ಹೊಸ ದಾಖಲೆ ಬರೆಯಲಿದ್ದಾರೆ. ಐಪಿಎಲ್ ಕೂಟದಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದವರ ಸಾಲಿನಲ್ಲಿ ಬ್ರಾವೋ ಸದ್ಯ ಲಸಿತ್ ಮಾಲಿಂಗ ದಾಖಲೆಯನ್ನು ಸರಿಗಟ್ಟಿದ್ದಾರೆ. ಮಾಲಿಂಗ ಮತ್ತು ಬ್ರಾವೋ ತಲಾ 170 ವಿಕೆಟ್ ಪಡೆದಿದ್ದು, ಈ ದಾಖಲೆ ಮುರಿದು ಮೊದಲ ಸ್ಥಾನಕ್ಕೆ ಬರಲು ಬ್ರಾವೋಗೆ ಒಂದು ವಿಕೆಟ್ ಅಗತ್ಯವಿದೆ.
ಬ್ರಾವೋ 152 ಪಂದ್ಯಗಳಲ್ಲಿ 170 ವಿಕೆಟ್ ಕಬಳಿಸಿದ್ದಾರೆ. ಮಾಜಿ ಮುಂಬೈ ಇಂಡಿಯನ್ಸ್ ಆಟಗಾರ ಲಸಿತ್ ಮಾಲಿಂಗ 122 ಪಂದ್ಯಗಳಲ್ಲಿ 170 ವಿಕೆಟ್ ಕಿತ್ತಿದ್ದರು.
ಇದನ್ನೂ ಓದಿ:ಮತ್ತೆ ಒಂದಾದ ಗಣೇಶ್ – ಪ್ರೀತಂ ಗುಬ್ಬಿ; ಯುಗಾದಿಯಂದು ಹೊಸ ಚಿತ್ರದ ಟೈಟಲ್ ರಿಲೀಸ್
ಲಸಿತ್ ಮಾಲಿಂಗ ಮತ್ತು ಡ್ವೇನ್ ಬ್ರಾವೋ ಮುಂಬೈ ಇಂಡಿಯನ್ಸ್ ಪರವಾಗಿಯೇ ಐಪಿಎಲ್ ಅಭಿಯಾನ ಆರಂಭಿಸಿದ್ದರು. ಆದರೆ 2011ರಲ್ಲಿ ಬ್ರಾವೋ ಸಿಎಸ್ ಕೆ ಪಾಲಾಗಿದ್ದರು.
15ನೇ ಆವೃತ್ತಿಯ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಬ್ರಾವೋ ನಾಲ್ಕು ವಿಕೆಟ್ ಕಬಳಿಸಿದ್ದರು. ಕೆಕೆಆರ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ನಾಲ್ಕು ಓವರ್ ಗಳಲ್ಲಿ ಕೇವಲ 20 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.