ರಹಾನೆಗೆ ಕೊಕ್‌, ಸ್ಮಿತ್‌ಗೆ ನಾಯಕತ್ವ

Team Udayavani, Apr 21, 2019, 6:00 AM IST

41

ಜೈಪುರ: ರಾಜಸ್ಥಾನ್‌ ರಾಯಲ್ಸ್ ತಂಡದ ನಾಯಕತ್ವದಲ್ಲಿ ದಿಢೀರ್‌ ಬದಲಾವಣೆ ಸಂಭವಿಸಿದೆ. ಅಜಿಂಕ್ಯ ರಹಾನೆ ಅವರನ್ನು ಕೆಳಗಿಳಿಸಿ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಅವ ರನ್ನು ನೂತನ ನಾಯಕನನ್ನಾಗಿ ನೇಮಿ ಸಲಾಗಿದೆ. ಶನಿವಾರದ ಮುಂಬೈ ಎದುರಿನ ಪಂದ್ಯದೊಂದಿಗೆ ಈ ಬದಲಾವಣೆ ಜಾರಿಗೆ ಬಂದಿದೆ. ಈ ಬಾರಿಯ ಐಪಿಎಲ್ನಲ್ಲಿ ರಾಜ ಸ್ಥಾನ್‌ ನಿರೀಕ್ಷಿತ ಪ್ರದರ್ಶನ ನೀಡು ವಲ್ಲಿ ವಿಫ‌ಲವಾಗಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಈ ವರೆಗಿನ ಕಳಪೆ ಪ್ರದರ್ಶನದಿಂದ ಹೊರಬರುವ ನಿರೀಕ್ಷೆ ಯಲ್ಲಿ ನಾಯಕತ್ವದಲ್ಲಿ ಬದಲಾವಣೆ ಮಾಡಲಾಗಿದೆ. ಮುಂದಿನ ಎಲ್ಲ ಲೀಗ್‌ ಪಂದ್ಯಗಳಲ್ಲೂ ಸ್ಮಿತ್‌ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.

‘ಮುಂದಿನೆಲ್ಲ ಪಂದ್ಯಗಳಲ್ಲಿ ರಾಜಸ್ಥಾನ್‌ ತಂಡಕ್ಕೆ ಸ್ಮಿತ್‌ ನಾಯಕ ರಾಗಿರುತ್ತಾರೆ. ಕಳೆದ ವರ್ಷ ಅಂಜಿಕ್ಯ ರಹಾನೆ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿ ಪ್ಲೇ ಆಫ್ಗೆ ತಲುಪಿಸಿದ್ದರು. ಈ ಬಾರಿ ಮರಳಿ ಟ್ರ್ಯಾಕ್‌ ಏರಲು ಸೂಕ್ತ ಕಾರ್ಯತಂತ್ರ ರೂಪಿಸಬೇಕಾದ ಕಾರಣ ಇಂಥದೊಂದು ನಿರ್ಧಾರಕ್ಕೆ ಬರಲಾಗಿದೆ’ ಎಂಬುದು ರಾಜಸ್ಥಾನ್‌ ಫ್ರಾಂಚೈಸಿಯ ಹೇಳಿಕೆ.

ಮೇ ಒಂದರ ತನಕ ಸ್ಮಿತ್‌
ಮೇ ಒಂದರ ವರೆಗೆ ಸ್ಮಿತ್‌ ಐಪಿಎಲ್ನಲ್ಲಿ ಪಾಲ್ಗೊಳ್ಳಲಿದ್ದು, ಆಗ ತಂಡದ ಎಲ್ಲ ಲೀಗ್‌ ಪಂದ್ಯಗಳು ಮುಗಿಯಲಿವೆ. ಅಕಸ್ಮಾತ್‌ ತಂಡ ಮುಂದಿನ ಸುತ್ತು ತಲುಪಿದರೆ ಮತ್ತೆ ರಾಜಸ್ಥಾನ್‌ ನಾಯಕತ್ವ ರಹಾನೆ ಪಾಲಾಗುವ ಸಾಧ್ಯತೆ ಇದೆ.

ನಾಯಕತ್ವಕ್ಕೆ ಅಡ್ಡಿಯಾಗಿತ್ತು ನಿಷೇಧ
ಒಂದು ವರ್ಷದ ನಿಷೇಧ ಮುಗಿಸಿ ಐಪಿಎಲ್ ಮೂಲಕ ಮರಳಿ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ಸ್ಮಿತ್‌ ಶನಿವಾರದ ಮುಂಬೈ ವಿರುದ್ಧದ ಪಂದ್ಯದಲ್ಲಿ ಮರಳಿ ನಾಯಕತ್ವದ ಇನ್ನಿಂಗ್ಸ್‌ ಆರಂಭಿಸಿದರು. 2017ರಲ್ಲಿ ಅವರು ಪುಣೆ ತಂಡವನ್ನು ಮುನ್ನಡೆಸಿ ಫೈನಲ್ ತಲುಪಿಸಿದ್ದರು. 2018ರಲ್ಲಿ ರಾಜಸ್ಥಾನ್‌ ರಾಯಲ್ಸ್ ನಿಷೇಧ ಮುಕ್ತಗೊಂಡು ಐಪಿಎಲ್ಲ್ಗೆ ಮರಳಿದಾಗಲೂ ಸ್ಮಿತ್‌ ಅವರನ್ನೇ ನಾಯಕನನ್ನಾಗಿ ನೇಮಿಸಿತ್ತು. ಆದರೆ ಚೆಂಡು ವಿರೂಪ ಪ್ರಕರಣದಲ್ಲಿ ಒಂದು ವರ್ಷ ನಿಷೇಧಕ್ಕೊಳಗಾದ್ದರಿಂದ ಕೂಡಲೇ ಸ್ಮಿತ್‌ ಅವರನ್ನು ಕೆಳಗಿಳಿಸಿ ರಹಾನೆಗೆ ನಾಯಕತ್ವ ವಹಿಸಲಾಯಿತು. 2015ರಲ್ಲೂ ಸ್ಮಿತ್‌ ರಾಜಸ್ಥಾನ್‌ ತಂಡವನ್ನು ಮುನ್ನಡೆಸಿದ್ದರು.

ಮತ್ತೆ ರಾಜ ಸ್ಥಾನ್‌ ನಾಯಕತ್ವ ಲಭಿಸಿದ್ದಕ್ಕೆ ಖುಷಿಯಾಗಿದೆ. ತಂಡವನ್ನು ಮುಂದಿನ ಸುತ್ತಿಗೆ ಕೊಂಡೊಯ್ಯು ವುದು ನಮ್ಮ ಗುರಿ. ಇದಕ್ಕೆ ಎಲ್ಲರೂ ಸೇರಿ ಪ್ರಯತ್ನಿಸ ಬೇಕಿದೆ. -ಸ್ಟೀವನ್‌ ಸ್ಮಿತ್‌

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.