ಬೆಂಗಳೂರು-ಪಂಜಾಬ್ ಹಣಾಹಣಿ: ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ಕೆ
Team Udayavani, Oct 15, 2020, 6:59 PM IST
ಶಾರ್ಜಾ: ಐಪಿಎಲ್ 13ನೇ ಆವೃತ್ತಿಯ 31ನೇ ಪಂದ್ಯ ಇಂದು ನಡೆಯುತ್ತಿದ್ದು ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗುತ್ತಿದೆ. ಇಂದಿನ ಪಂದ್ಯದಲ್ಲಿ ಕೊಹ್ಲಿ ಪಡೆ ಟಾಸ್ ಗೆದ್ದಿದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಕನ್ನಡಿಗ ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲವೆನ್ ಪಂಜಾಬ್ ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಫ್ಲೇ ಆಫ್ ರೇಸ್ ನಲ್ಲಿ ಉಳಿದುಕೊಳ್ಳಬೇಕಾದರೇ ಬಾಕಿ ಇರುವ 7 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಇಂದಿನ ಪಂದ್ಯಕ್ಕೆ ಕ್ರಿಸ್ ಗೇಲ್ ಲಭ್ಯವಿರಲಿದ್ದು ತಂಡದ ಅತ್ಮವಿಶ್ವಾಸವನ್ನು ಹೆಚ್ಚಿಸಿದೆ. ಈ ಆವೃತ್ತಿಯಲ್ಲಿ ಪಂಜಾಬ್ ಒಂದೇ ಗೆಲುವು ಕಂಡಿದ್ದು ಅದು ಕೂಡ ಆರ್ ಸಿಬಿ ವಿರುದ್ಧವೇ ಆಗಿದೆ. ಇದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಅನುಮಾನವಿಲ್ಲ.
ಮತ್ತೊಂದೆಡೆ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಈಗಾಗಲೇ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಜಯಗಳಿಸಿದೆ.
ಆಡುವ ಹನ್ನೊಂದರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್,ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ವಾಷಿಂಗ್ಟನ್ ಸುಂದರ್, ಶಿವಮ್ ದುಬೆ, ಕ್ರಿಸ್ ಮೋರಿಸ್, ಇಸುರು ಉದಾನಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್
ಕಿಂಗ್ಸ್ ಇಲೆವೆನ್ ಪಂಜಾಬ್: ಕ್ರಿಸ್ ಗೇಲ್, ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಹರ್ಷ್‌ದೀಪ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ
Australia vs Pakistan T20: ಪಾಕ್ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.